ಕೀರ್ತನೆಗಳು 50:1 - ಕನ್ನಡ ಸತ್ಯವೇದವು C.L. Bible (BSI)1 ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ I ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಆಜ್ಞಾಪಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವಾಧಿದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದವರೆಗೂ ಇರುವ ಭೂನಿವಾಸಿಗಳೆಲ್ಲರನ್ನು ತನ್ನ ಸನ್ನಿಧಿಗೆ ಬರಲು ಆಜ್ಞಾಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವಾಧಿ ದೇವರಾದ ಯೆಹೋವ ದೇವರು ತಾವೇ ಮಾತನಾಡುತ್ತಿದ್ದಾರೆ, ಸೂರ್ಯೋದಯದಿಂದ ಅಸ್ತಮಾನದವರೆಗೂ ಇರುವ ಭೂಲೋಕದವರು ಕರೆಯುತ್ತಿದ್ದಾರೆ. ಅಧ್ಯಾಯವನ್ನು ನೋಡಿ |
ಗಾಯಕರ ಮಂಡಳಿಯಿಂದ ಕಂಚಿನ ತಾಳಗಳನ್ನು ಬಾರಿಸಲು ಆಯ್ಕೆಹೊಂದಿದವರು: ಯೋವೇಲನ ಮಗ ಹೇಮಾನ್, ಅವನ ಬಂಧು ಬೆರೆಕ್ಯನ ಮಗ ಆಸಾಫ್, ಮೆರಾರೀ ಕುಟುಂಬಕ್ಕೆ ಸೇರಿದ ಕೂಷಾಯನ ಮಗ ಏತಾನ್ ಎಂಬವರು. ತಮಗೆ ಸಹಾಯ ಮಾಡಲು ತಾರಸ್ಥಾಯಿಯ ತಂತಿವಾದ್ಯಗಳನ್ನು ಬಾರಿಸಲು ಜೆಕರ್ಯ, ಬೇನ್, ಯಾಜೀಯೇಲ್, ಶಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ ಹಾಗು ಮಸೇಯ ಎಂಬವರನ್ನು ಆರಿಸಿಕೊಂಡರು. ಮಂದ್ರಸ್ಥಾಯಿಯ ಕಿನ್ನರಿಗಳನ್ನು ಬಾರಿಸಲು ಮತಿತ್ಯ, ಎಲೀಫೆಲೇಹು, ಮಿಕ್ನೇಯ, ದೇವಾಲಯದ ದ್ವಾರಪಾಲಕರಾದ ಓಬೇದೆದೋಮ್ ಮತ್ತು ಯೆಗೀಯೇಲರನ್ನೂ ನೇಮಿಸಿಕೊಂಡರು.