Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:10 - ಕನ್ನಡ ಸತ್ಯವೇದವು C.L. Bible (BSI)

10 ಕಾಡಿನಲ್ಲಿರುವ ಮೃಗಜಂತುಗಳೆಲ್ಲ ನನ್ನವೆ I ಗುಡ್ಡದಲ್ಲಿರುವ ಸಹಸ್ರಾರು ಪಶುಗಳು ನನ್ನವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕಾಡಿನಲ್ಲಿರುವ ಸರ್ವಮೃಗಗಳೂ, ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕಾಡಿನಲ್ಲಿರುವ ಸರ್ವಮೃಗಗಳೂ ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನಗೆ ಆ ಪಶುಗಳ ಅಗತ್ಯವಿಲ್ಲ. ಕಾಡಿನಲ್ಲಿರುವ ಸರ್ವ ಮೃಗಗಳೂ ಗುಡ್ಡಗಳ ಮೇಲಿರುವ ಸಾವಿರಾರು ಪಶುಗಳೂ ನನ್ನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ಅಡವಿಯ ಮೃಗಗಳೆಲ್ಲವೂ ನನ್ನವೇ. ಸಾವಿರ ಬೆಟ್ಟಗಳಲ್ಲಿರುವ ಪಶುಗಳೂ ಸಹ ನನ್ನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:10
14 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಹೆಚ್ಚುಮಂದಿ ನಿರಪರಾಧಿಗಳೂ ಅಪಾರ ಪಶುಪ್ರಾಣಿಗಳೂ ಇರುವ ನಿನೆವೆ ಮಹಾನಗರದ ಬಗ್ಗೆ ನಾನು ಇನ್ನೆಷ್ಟು ಚಿಂತೆಪಡಬೇಕು?” ಎಂದರು.


ಮೊಳೆಸುವೆ ಹುಲ್ಲನ್ನು ದನಕರುಗಳಿಗೋಸ್ಕರ I ಬೆಳೆಸುವೆ ಪೈರನು ನರಮಾನವರಿಗೋಸ್ಕರ II


ನರಮಾನವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನಿಮ್ಮ ಕೈಗೆ ಒಪ್ಪಿಸಿದ್ದಾರೆ.


ಹೀಗೆ ದೇವರು ನಿಮ್ಮ ತಂದೆಯ ಆಡುಕುರಿಗಳನ್ನು ತೆಗೆದು ನನಗೆ ಕೊಟ್ಟರು.


ನಿನ್ನ ಬಳಿಯಿರುವ ಪ್ರಾಣಿಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲ ಜೀವಿಗಳೂ ಹೊರಗೆ ಬರಲಿ; ಅವುಗಳ ಸಂಖ್ಯೆ ಭೂಮಿಯಲ್ಲಿ ಬೆಳೆಯಲಿ; ಅವು ಹೆಚ್ಚಿ ವೃದ್ಧಿಯಾಗಲಿ,” ಎಂದರು.


ಎಲ್ಲ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿದ ಅವರು, ಮನುಷ್ಯನು ಇವುಗಳಿಗೆ ಏನೇನು ಹೆಸರಿಡುವನೋ ನೋಡೋಣವೆಂದು ಅವನ ಬಳಿಗೆ ಅವುಗಳನ್ನು ಬರಮಾಡಿದರು. ಆ ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳಿಗೆ ಹೆಸರು ಆಯಿತು.


ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು