Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:17 - ಕನ್ನಡ ಸತ್ಯವೇದವು C.L. Bible (BSI)

17 ನನ್ನ ಮಾತುಗಳನು ನೀವು ತಾತ್ಸಾರ ಮಾಡುತ್ತೀರಿ I ನನ್ನ ತಿದ್ದುಪಾಟುಗಳನು ನೀವು ಧಿಕ್ಕರಿಸುತ್ತೀರಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀವೋ ನನ್ನ ಸುಶಿಕ್ಷಣವನ್ನು ಹಗೆ ಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಹೀಗಿರಲು ನೀವು ನನ್ನ ಸುಶಿಕ್ಷಣವನ್ನು ದ್ವೇಷಿಸುವುದೇಕೆ? ನಾನು ಹೇಳುವುದನ್ನು ನೀವು ತುಚ್ಛೀಕರಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀನು ನನ್ನ ಶಿಕ್ಷಣವನ್ನು ದ್ವೇಷಿಸಿ, ನನ್ನ ವಾಕ್ಯಗಳನ್ನು ನಿಮ್ಮ ಹಿಂದೆ ಬಿಸಾಡಿಬಿಟ್ಟೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:17
18 ತಿಳಿವುಗಳ ಹೋಲಿಕೆ  

ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


ಶಿಸ್ತನ್ನು ಹಾರೈಸುವವನು ಶಿಕ್ಷಣ ಪ್ರಿಯನು; ತಿದ್ದುವಿಕೆಯನ್ನು ಹಗೆಮಾಡುವವನು ಪಶುಪ್ರಾಯನು.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?


ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


ಕೇಡನ್ನು ಮಾಡುವವನಿಗೆ ಬೆಳಕೆಂದರೆ ಆಗದು. ತನ್ನ ದುಷ್ಕೃತ್ಯಗಳು ಬಯಲಾಗಬಾರದೆಂದು ಅವನು ಬೆಳಕಿನ ಬಳಿಗೆ ಸುಳಿಯುವುದೂ ಇಲ್ಲ.


“ಆದರೆ ಅವರು, ‘ಇದೆಲ್ಲ ಹೇಳಿ ಏನು ಪ್ರಯೋಜನವಿಲ್ಲ; ನಾವು ನಮ್ಮ ಆಲೋಚನೆ ಪ್ರಕಾರ ನಡೆಯುತ್ತೇವೆ. ನಮ್ಮಲ್ಲಿ ಪ್ರತಿಯೊಬ್ಬರು ನಮ್ಮ ನಮ್ಮ ಹೃದಯದ ಚಟದಂತೆಯೇ ನಡೆಯುತ್ತೇವೆ’ ಎಂದು ಹೇಳುವರು.”


ನನಗೆ ತಪ್ಪುಮಾಡುವವನು ತನ್ನಾತ್ಮಕ್ಕೇ ಕೇಡುಮಾಡುತ್ತಾನೆ ನನ್ನನ್ನು ಹಗೆಮಾಡುವವರೆಲ್ಲರು ಮೃತ್ಯುವನ್ನು ಪ್ರೀತಿಸುತ್ತಾರೆ.


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದೆ; ನನ್ನನ್ನು ತಿರಸ್ಕರಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದೆ.


ಲಂಚಕ್ಕೋಸ್ಕರ ನಿರ್ದೋಷಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿ ವಂಚಿಸುವವರಿಗೆ ಧಿಕ್ಕಾರ !


ನನ್ನ ನಿಯಮಗಳನ್ನು ಅಲ್ಲಗಳೆದು, ನನ್ನ ವಿಧಿಗಳನ್ನು ತಳ್ಳಿಬಿಟ್ಟು, ನನ್ನ ಆಜ್ಞೆಗಳಿಗೆ ವಿಧೇಯರಾಗದೆ ನಿಬಂಧನೆಗಳನ್ನೂ ಮೀರಿ ನಡೆದರೆ


ಸನ್ಮಾರ್ಗವನ್ನು ತೊರೆದವನಿಗೆ ಬರುವ ಶಿಕ್ಷೆ ಕಠಿಣ ಬುದ್ಧಿವಾದವನ್ನು ಕೇಳಲೊಲ್ಲದವನಿಗೆ ಬರುವುದು ಮರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು