Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:19 - ಕನ್ನಡ ಸತ್ಯವೇದವು C.L. Bible (BSI)

19 ನಿಮ್ಮ ಬಾಯನ್ನಾಳುತ್ತದೆ ಕೆಡುಕುತನ I ನಿಮ್ಮ ನಾಲಿಗೆ ನೇಯುತ್ತದೆ ಕಪಟತನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ; ನಾಲಿಗೆಯು ಮೋಸವನ್ನು ನೇಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿಮ್ಮ ಬಾಯನ್ನು ಕೇಡಿಗೆ ಒಪ್ಪಿಸುತ್ತೀರಿ; ನಾಲಿಗೆಯು ಮೋಸವನ್ನು ನೇಯುತ್ತದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಿಮ್ಮ ಬಾಯಿಂದ ಕೇಡನ್ನು ಕಲ್ಪಿಸುವಿರಿ. ನಿಮ್ಮ ನಾಲಿಗೆಯಿಂದ ಮೋಸವನ್ನು ನೇಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ನಿಮ್ಮ ಬಾಯನ್ನು ಕೇಡಿಗೆ ಉಪಯೋಗಿಸುತ್ತೀರಿ. ನಿಮ್ಮ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:19
14 ತಿಳಿವುಗಳ ಹೋಲಿಕೆ  

ತುಂಬಿದೆ ಶಾಪಕೋಪ, ಕುತಂತ್ರ ಅವನ ಬಾಯಲಿ I ಅವಿತಿದೆ ಪಾಪ, ಅತಿವಿನಾಶ ನಾಲಗೆಯಡಿಯಲಿ II


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಎಲ್ಲರು ತಂತಮ್ಮ ಗೆಳೆಯರಿಗೆ ಮೋಸಮಾಡುತ್ತಾರೆ ಸತ್ಯವನ್ನು ನುಡಿವುದೇ ಇಲ್ಲ; ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ ಆಯಾಸವಾಗುವ ಮಟ್ಟಿಗೂ ಕೆಡಕನ್ನು ಮಾಡುತ್ತಿದ್ದಾರೆ.


ಅವನ ಬಾಯಿ ಬೆಣ್ಣೆಗಿಂತ ನಯ, ಆದರೆ ಹೃದಯ ಕಲಹಭರಿತ I ನುಡಿ ಎಣ್ಣೆಗಿಂತ ನುಣುಪು, ಆದರೆ ಬಿಚ್ಚುಗತ್ತಿಗಿಂತ ಹರಿತ II


ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.


ನಾ ಸಹಿಸಿಕೊಳ್ಳುತ್ತಿದ್ದೆ ದೂಷಿಸುವವನು ಶತ್ರುವಾಗಿದ್ದರೆ I ನಾನವಿತುಕೊಳ್ಳುತ್ತಿದ್ದೆ ದ್ವೇಷಿಸುವವನು ವೈರಿಯಾಗಿದ್ದರೆ II


ಅವರ ಬಾಯಲಿ ಹುಸಿನುಡಿ, ಹೃದಯವಾದರೊ ವಿನಾಶದ ಶರಧಿ I ಅವರ ಜಿಹ್ವೆಯಲಿ ಮುಖಸ್ತುತಿ, ಕಂಠವಾದರೋ ತೆರೆದ ಸಮಾಧಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು