Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:21 - ಕನ್ನಡ ಸತ್ಯವೇದವು C.L. Bible (BSI)

21 ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀವು ಹೀಗೆ ಮಾಡಿದರೂ ನಾನು ಸುಮ್ಮನೆ ಇದ್ದದರಿಂದ ದೇವರೂ ನಮ್ಮಂಥವನೇ ಎಂದು ನೆನಸಿಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೋ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇವುಗಳನ್ನೆಲ್ಲಾ ನೀವು ಮಾಡಿದ್ದೀರಿ, ಆದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ಸಹ ನಿಮ್ಮ ಹಾಗೆ ಒಬ್ಬನೆಂದು ನೀವು ನೆನಸಿಕೊಂಡಿದ್ದೀರಿ. ಆದರೆ ಈಗ ನಾನು ನಿಮ್ಮನ್ನು ಗದರಿಸಿ ನಿಮ್ಮ ಕಣ್ಣು ಮುಂದೆಯೇ ನಿಮ್ಮ ಅಪರಾಧ ಪ್ರಕಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:21
22 ತಿಳಿವುಗಳ ಹೋಲಿಕೆ  

ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ನಿನ್ನ ನೋಟಕೆ ಮರೆಯಾಗಿಲ್ಲ ನಮ್ಮ ಪಾಪದೋಷಗಳು I ನಿನ್ನ ಮುಖಕಾಂತಿಗೆ ಬಟ್ಟಬಯಲಾಗಿವೆ ಗುಪ್ತಾಪರಾಧಗಳು II


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ನನ್ನನ್ನೇ ತಡೆಹಿಡಿದೆನು : ಆದರೀಗ ಸಮಯ ಬಂದಿಹುದು; ಪ್ರಸವವೇದನೆಯನು ಅನುಭವಿಸುವ ಸ್ತ್ರೀಯಂತೆ ಅಬ್ಬರಿಸುವೆನು


ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II


ಯಕೋಬನ ಮಹಿಮಾನ್ವಿತ ಸರ್ವೇಶ್ವರ ಆಣೆಯಿಟ್ಟು ಹೇಳುವುದೇನೆಂದರೆ: “ಖಂಡಿತವಾಗಿ ಅವರ ದುಷ್ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ನಾನು ಮರೆಯಲಾರೆ.


“ಆ ದೇವನೆಂತು ಕಂಡುಹಿಡಿದಾನು?” ಎಂಬರು I “ಪರಾತ್ಪರನು ಪರಿಜ್ಞನೆ?” ಎಂದುಕೊಳ್ವರು II


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ದಯೆತೋರಿದರೂ ಕಲಿಯನು ದುಷ್ಟನು ಆ ನ್ಯಾಯನೀತಿಯನು ಧರ್ಮಕ್ಷೇತ್ರದೊಳು ಸಹ ಗೈವನು ಅಕ್ರಮವನು ಗೌರವಿಸನು ಸರ್ವೇಶ್ವರನ ಮಹಿಮೆಯನು.


ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಆಗ ದೇವರು ಹೀಗೆಂದರು: “ಇರುವವನಾಗಿ ಇರುವವನು ನಾನೇ; ನೀನು ಇಸ್ರಯೇಲರಿಗೆ 'ತಾನಾಗಿ ಇರುವವನು,' ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾನೆ ಎಂದು ಹೇಳು.”


ನಿನ್ನ ಬಲಿಯರ್ಪಣೆಯನು ನಾ ತಪ್ಪೆಣಿಸುತಿಲ್ಲ I ನನ್ನ ಮುಂದಿವೆ ಸತತ ನಿನ್ನ ದಹನಬಲಿಗಳೆಲ್ಲ II


ದೇವರು ಅಂಥವರನ್ನು ದಂಡಿಸಬೇಕೆನ್ನುತ್ತೀಯೋ? ಆತನ ತೀರ್ಪನ್ನು ನೀನೇ ಅಲ್ಲಗಳೆದಿರುವೆಯಲ್ಲವೆ? ಈಗ ನಾನು ಹೇಳಲಾರೆ, ನೀನೇ ಹೇಳು, ನಿನ್ನ ಅಭಿಪ್ರಾಯವನು ನಮಗೆ ತಿಳಿಸು.


‘ನಾನು ಅಶುದ್ಧಳಾಗಲಿಲ್ಲ, ಬಾಳ್‍ದೇವತೆಗಳನ್ನು ಹಿಂಬಾಲಿಸಲೇ ಇಲ್ಲ’ ಎಂದು ಹೇಗೆ ತಾನೆ ಹೇಳಬಲ್ಲೆ? ಆ ಕಣಿವೆಯಲ್ಲಿ ನಿನ್ನ ಹೆಜ್ಜೆಗುರುತುಗಳನ್ನು ನೋಡು ಅಲ್ಲಿ ನೀನು ಎಸಗಿದ ದುಷ್ಕೃತ್ಯಗಳನ್ನು ಮನಸ್ಸಿಗೆ ತಂದುಕೊ. ಅತ್ತ ಇತ್ತ ನೆಗೆದಾಡುವ, ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ ನೀನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು