Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:23 - ಕನ್ನಡ ಸತ್ಯವೇದವು C.L. Bible (BSI)

23 ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನನಗೆ ಕೃತಜ್ಞತಾಯಜ್ಞವನ್ನು ಅರ್ಪಿಸುವವನೇ ನನ್ನನ್ನು ಸನ್ಮಾನಿಸುವವನು. ಆದರೆ ನೀತಿವಂತನಾಗಿ ಜೀವಿಸುವವನಿಗೆ ನನ್ನ ರಕ್ಷಣಾಶಕ್ತಿಯನ್ನು ತೋರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯಾರು ಧನ್ಯವಾದದ ಬಲಿಯನ್ನು ಅರ್ಪಿಸುವರೋ ಅವರೇ ನನ್ನನ್ನು ಘನಪಡಿಸುವರು. ತಮ್ಮ ನಡವಳಿಕೆಯನ್ನು ಕ್ರಮಪಡಿಸಿಕೊಳ್ಳುವವರಿಗೆ ನನ್ನ ರಕ್ಷಣೆಯನ್ನು ತೋರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:23
31 ತಿಳಿವುಗಳ ಹೋಲಿಕೆ  

ದೀರ್ಘಾಯುಸ್ಸನ್ನಿತ್ತು ತೃಪ್ತಿಪಡಿಸುವೆನು I ನಾನು ನೀಡುವ ಮುಕ್ತಿಯನವನಿಗೆ ಮನಗಾಣಿಸುವೆನು” II


ಮಾಡುವೆ ದೇವಾ, ನಿನ್ನ ಗುಣಗಾನವನು ಶ್ರದ್ಧೆಯಿಂದ I ಘನಪಡಿಸುವೆ ಸ್ವಾಮಿ, ನಿನ್ನ ಶ್ರೀನಾಮವನು ಅನವರತ II


ನಿಮ್ಮಲ್ಲಿ ಯಾರಾದರೂ ಜ್ಞಾನಿಯೂ ವಿವೇಕಿಯೂ ಆದವನು ಇದ್ದಾನೋ? ಅಂಥವನು ಜ್ಞಾನದ ಲಕ್ಷಣವಾಗಿರುವ ವಿನಯಶೀಲತೆಯನ್ನು ತನ್ನ ನಡೆನುಡಿಯಲ್ಲಿ ತೋರ್ಪಡಿಸಲಿ.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


“ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ನೀನಿತ್ತ ಉದ್ಧಾರಕನನು ನಾ ಕಂಡೆ ಕಣ್ಣಾರೆ


ನಡೆವುದು ಪ್ರಭುವಿನ ಮುಂದೆ ನೀತಿ I ಮಾಡುವುದು ಆತನ ಹೆಜ್ಜೆಗೆ ಹಾದಿ II


ಈ ಕಾರಣ ನನ್ನನ್ನು ಕುರಿತು ಅವರು ದೇವರನ್ನು ಕೊಂಡಾಡುತ್ತಿದ್ದರು.


ಬರುವುವು ನೀನುಂಟುಮಾಡಿದ ಸಕಲ ಜನಾಂಗಗಳು I ನಿನ್ನ ನಾಮವನು ಘನಪಡಿಸಲು, ನಿನಗೆ ಅಡ್ಡಬೀಳಲು II


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಅದಕ್ಕೆ ಬದಲು ನಿಮ್ಮನ್ನು ಕರೆದ ದೇವರು ಪವಿತ್ರರಾಗಿರುವಂತೆ ನೀವೂ ನಿಮ್ಮ ನಡೆನುಡಿಯಲ್ಲಿ ಪವಿತ್ರರಾಗಿರಿ.


ಈ ನಿಯಮವನ್ನು ಅನುಸರಿಸುವ ಎಲ್ಲರಿಗೂ, ಅಂದರೆ ನಿಜ ಇಸ್ರಯೇಲರಾದ ದೇವಜನರೆಲ್ಲರಿಗೂ ಶಾಂತಿಸಮಾಧಾನವೂ ಕೃಪಾಶೀರ್ವಾದವೂ ಲಭಿಸಲಿ!


ಮತ್ತು ದೇವರು ತೋರಿದ ಕರುಣೆಗಾಗಿ ಅವರನ್ನು ಯೆಹೂದ್ಯರಲ್ಲದವರು ಸಹ ಸ್ತುತಿಸಲು ಸಾಧ್ಯವಾಗುವಂತೆ ಕ್ರಿಸ್ತಯೇಸು ಯೆಹೂದ್ಯರಿಗೆ ಅಧೀನರಾದರು. ಇದಕ್ಕೆ ಸಾದೃಶ್ಯವಾಗಿ ಪವಿತ್ರಗ್ರಂಥದಲ್ಲಿ ಹೀಗೆಂದು ಹೇಳಲಾಗಿದೆ: “ಈ ಕಾರಣದಿಂದ ನಾನು ಯೆಹೂದ್ಯರಲ್ಲದವರ ನಡುವೆ ನಿಮ್ಮನ್ನು ಕೊಂಡಾಡುವೆನು ನಿಮ್ಮ ನಾಮವನು ಸಂಕೀರ್ತಿಸುವೆನು.”


ಹೀಗೆ ಒಮ್ಮನಸ್ಸಿನಿಂದಲೂ ಒಕ್ಕೊರಲಿನಿಂದಲೂ ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರನ್ನು ಕೊಂಡಾಡುವಂತಾಗಲಿ.


ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ I ಇದರಿಂದಾತನ ಮಹಿಮೆ ನಾಡಿಲ್ಲಿರುವುದು ನಿರುತ II


ಅವನು ನೀನೂ ನಿನ್ನ ಕುಟುಂಬದವರೆಲ್ಲರೂ ಪಡೆಯಬಹುದಾದಂಥ ಜೀವೋದ್ಧಾರದ ಸಂದೇಶವನ್ನು ನೀಡುವನು,’ ಎಂದು ತಿಳಿಸಿದನು” ಎಂದು ನಮಗೆ ಹೇಳಿದನು.


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


ಸುತ್ತಲು ನೆರೆದಿಹ ಶತ್ರುಗಳ ನಡುವೆ ತಲೆಯೆತ್ತಿ ನಡೆವೆನು I ದೇವಾಲಯದೊಳು ಜಯಜಯ ಘೋಷದೊಡನೆ ಬಲಿಗಳನರ್ಪಿಸುವೆನು I ಪ್ರಭುವಿಗೆ ಹಾಡುವೆನು, ವಾದ್ಯ ನುಡಿಸುತ ಕೊಂಡಾಡುವೆನು II


ಮಣಿಯಿರಿ, ಪ್ರಭುವಿನಲಿ ಭಯಭಕುತಿಯುಳ್ಳವರೇ I ಭಜಿಸಿರಿ ಇಸ್ರಯೇಲರೇ, ಯಾಕೋಬ ಕುಲಜರೇ II


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಆತನತ್ತ ತಿರುಗಿದ ಮುಖ ಅರಳುವುದು I ಲಜ್ಜೆಯಿಂದೆಂದಿಗು ಕುಂದಿಹೋಗದು II


ಸಂಕಟದಲಿ ಮೊರೆಯಿಟ್ಟೆನು ಪ್ರಭುವಿಗೆ I ಕೊಟ್ಟನು ಸದುತ್ತರವನು ಆತನೆನಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು