Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:3 - ಕನ್ನಡ ಸತ್ಯವೇದವು C.L. Bible (BSI)

3 ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಮ್ಮ ದೇವರು ಬರುತ್ತಿದ್ದಾನೆ; ಆತನು ಸುಮ್ಮನಿರುವುದಿಲ್ಲ. ಆತನ ಮುಂಭಾಗದಲ್ಲಿ ಬೆಂಕಿಯು ಪ್ರಜ್ವಲಿಸುವುದು. ಆತನ ಸುತ್ತಲೂ ಬಿರುಗಾಳಿ ಬೀಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಮ್ಮ ದೇವರು ಬರುತ್ತಾರೆ, ಎಷ್ಟು ಮಾತ್ರವೂ ಮೌನವಾಗಿರುವುದಿಲ್ಲ. ಬೆಂಕಿಯು ಅವರ ಮುಂದೆ ಪ್ರಜ್ವಲಿಸುವುದು; ಅವರ ಸುತ್ತಲೂ ದೊಡ್ಡ ಬಿರುಗಾಳಿಯು ಬೀಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:3
28 ತಿಳಿವುಗಳ ಹೋಲಿಕೆ  

ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.


ಸರ್ವೇಶ್ವರನ ಬಳಿಯಿಂದ ಬೆಂಕಿ ಹೊರಟು ಧೂಪಾರತಿಯನ್ನು ಅರ್ಪಿಸುತ್ತಿದ್ದ ಆ 250 ಮಂದಿಯನ್ನು ಭಸ್ಮಮಾಡಿತು.


ಆಗ ಸರ್ವೇಶ್ವರನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ನಾಶಮಾಡಿತು. ಅವರು ಸರ್ವೇಶ್ವರನ ಸನ್ನಿಧಿಯಲ್ಲೇ ಸತ್ತರು.


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


ಇದಕ್ಕೆಲ್ಲಾ ಸಾಕ್ಷಿಯಾಗಿರುವಾತನು, “ಹೌದು, ನಾನು ಬೇಗನೆ ಬರುತ್ತೇನೆ,” ಎಂದು ಹೇಳುತ್ತಾನೆ. ಆಮೆನ್, ಪ್ರಭು ಯೇಸುವೇ, ಬನ್ನಿ.


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಸಾಗುತಿದೆ ವ್ಯಾಧಿ ಆತನ ಮುಂದೆ ಬರುತಿದೆ ಮೃತ್ಯು ಆತನ ಹಿಂದೆ.


ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II


ಮಾತನಾಡದೆ ದೇವಾ, ಸುಮ್ಮನಿರಬೇಡ I ಮೌನದಿಂದ ಸ್ವಾಮೀ, ನಿಶ್ಚಿಂತನಿರಬೇಡ II


ನಮ್ಮ ದೇವರು ಜೀವೋದ್ಧಾರಕ ದೇವರು ಹೌದು I ಸಾವಿಂದ ತಪ್ಪಿಸುವ ಶಕ್ತಿ, ಸ್ವಾಮಿ ದೇವರದು II


ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II


ಆಗ ತಿಳಿಸಿರಿ ಮುಂದಣ ಪೀಳಿಗೆಗಿಂತೆಂದು - “ಈತನೀತನೇ ನಮ್ಮ ದೇವನು ಯುಗಯುಗಕು I ನಮಗೀತ ಮಾರ್ಗದರ್ಶಕ ತಲತಲಾಂತರಕು” II


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ತಾವೇ, ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾರೆಂದು ಈಗ ತಿಳಿದುಕೊಳ್ಳಿ. ಅವರೇ ಆ ವಿರೋಧಿಗಳನ್ನು ನಾಶಮಾಡುವರು; ನಿಮ್ಮ ಮುಂದೆ ಆ ವಿರೋಧಿಗಳು ಸೋತುಹೋಗುವಂತೆ ಮಾಡುವರು. ಸರ್ವೇಶ್ವರ ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ ಬೇಗನೆ ನಾಶಮಾಡುವಿರಿ.


ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”


ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿ ಬೆಳಗಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು