Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:4 - ಕನ್ನಡ ಸತ್ಯವೇದವು C.L. Bible (BSI)

4 ಭೂಮ್ಯಾಕಾಶಗಳನು ಕರೆಯುತಿಹನು I ಪ್ರಜೆಗೆ ವಿಧಿಪಾ ತೀರ್ಪನು ನೋಡಲೆಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ನೇವಿುಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ತನ್ನ ಜನರಿಗೆ ನ್ಯಾಯವಿಚಾರಣೆಗಾಗಿ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ತಮ್ಮ ಜನರಿಗೆ ನ್ಯಾಯತೀರಿಸುವುದಕ್ಕೆ ಭೂಮಿ ಆಕಾಶಗಳನ್ನೂ ಹೀಗೆಂದು ಕರೆಯುತ್ತಿದ್ದಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:4
13 ತಿಳಿವುಗಳ ಹೋಲಿಕೆ  

ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.


ಆಕಾಶಮಂಡಲವೇ, ಕೇಳು ನಾ ಹೇಳುವುದನು ಭೂಮಂಡಲವೇ, ಆಲಿಸು ನನ್ನ ಮಾತುಗಳನು.


ನಿಮ್ಮ ಕುಲಗಳ ಹಿರಿಯರನ್ನೂ ಅಧಿಪತಿಗಳನ್ನೂ ನನ್ನ ಬಳಿಗೆ ಸೇರಿಸಿರಿ. ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ, ಅವರಿಗೆ ವಿರುದ್ಧ ಸಾಕ್ಷಿಗಳಾಗುವುದಕ್ಕೆ ಭೂಮ್ಯಾಕಾಶಗಳನ್ನೇ ಕರೆಯುವೆನು.


ಇಗೋ, ಇಂದೇ ನಿಮಗೆ ವಿರುದ್ಧ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿಟ್ಟು ಹೇಳುತ್ತಿದ್ದೇನೆ: ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ನಾಡಿನಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ.


ನಾನು ಸಾವುಜೀವಗಳನ್ನೂ ಶಾಪಾಶೀರ್ವಾದಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಆಕಾಶಗಳೇ ಸಾಕ್ಷಿಗಳಾಗಿರಲಿ; ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಬಾಳುವಂತೆ ಜೀವವನ್ನೇ ಆರಿಸಿಕೊಳ್ಳಿ;


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II


ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ I ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ II


ನೀವು ಕಲಿತುಕೊಳ್ಳಬೇಕೆಂದೇ ಸರ್ವೇಶ್ವರ ಆಕಾಶದಿಂದ ತಮ್ಮ ಸ್ವರ ನಿಮಗೆ ಕೇಳಿಸುವ ಹಾಗೆ ಮಾಡಿದರು; ತಾವಿದ್ದ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ನೀವು ನೋಡುವಂತೆ ಮಾಡಿದರು; ಆ ಅಗ್ನಿಜ್ವಾಲೆಯ ಒಳಗಿಂದ ಅವರು ಆಡಿದ ಮಾತುಗಳನ್ನು ನೀವು ಕೇಳಿದಿರಿ.


"ಆದಕಾರಣ ಸರ್ವೇಶ್ವರನಾದ ನಾನು ನಿಮ್ಮೊಡನೆ ಇನ್ನೂ ವ್ಯಾಜ್ಯಮಾಡುತ್ತೇನೆ; ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯವಾಡುವೆನು,” ಎನ್ನುತ್ತಾರೆ ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು