Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:5 - ಕನ್ನಡ ಸತ್ಯವೇದವು C.L. Bible (BSI)

5 “ಬಲಿ ಮೂಲಕ ಒಡಂಬಡಿಕೆ ಗೈದ ಭಕ್ತರನು I ಸಭೆ ಸೇರಿಸಿ ಇಲ್ಲೆನ್ನ ಮುಂದೆ,” ಎನ್ನುತಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಆಜ್ಞಾಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರು, “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆ ಮಾಡಿಕೊಂಡ ನನ್ನ ಪವಿತ್ರ ಪ್ರಜೆಗಳೇ, ನನ್ನ ಸುತ್ತಲೂ ಸೇರಿಬನ್ನಿರಿ” ಎಂದು ಆಜ್ಞಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:5
17 ತಿಳಿವುಗಳ ಹೋಲಿಕೆ  

ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ.


ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.


ಕೇಡನು ಹಗೆಮಾಡುವವನಿಗೆ ಪ್ರಭು ಒಲಿವನು I ತನ್ನ ಭಕ್ತರ ಪ್ರಾಣವನು ಕಾಪಾಡುವನು I ದುಷ್ಟರ ಕೈಯಿಂದವರನು ಬಿಡಿಸುವನು II


ಭಕ್ತರೇ, ಸಂಕೀರ್ತಿಸಿರಿ ಪ್ರಭುವನು I ಮಾಡಿರಿ ಆತನ ನಾಮಸ್ಮರಣೆಯನು II


ನ್ಯಾಯಮಾರ್ಗವನ್ನು ಕಾಯುವನಾತ, ಭಕ್ತರ ಹಾದಿಯನ್ನು ಭದ್ರವಾಗಿಸುವನಾತ.


ಇವರ ವಿಷಯವಾಗಿ ಆದಾಮನ ಏಳನೆಯ ತಲೆಮಾರಿನ ಹನೋಕನು, “ಇಗೋ, ಸರ್ವೇಶ್ವರ ತಮ್ಮ ಅಸಂಖ್ಯಾತ ಪರಿಶುದ್ಧ ದೂತರ ಸಮೇತ ಆಗಮಿಸುವರು. ಎಲ್ಲರಿಗೂ ನ್ಯಾಯತೀರ್ಪು ಕೊಡುವರು.


ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.


ತುತೂರಿಯ ಘೋಷಣೆಯೊಂದಿಗೆ ಆತನು ತನ್ನ ದೂತರನ್ನು ನಾಲ್ಕು ದಿಕ್ಕುಗಳಿಗೂ ಕಳುಹಿಸುವನು. ಅವರು ಹೋಗಿ ಆತನಿಂದ ಆಯ್ಕೆಯಾದ ಜನರನ್ನು ವಿಶ್ವದ ಅಷ್ಟದಿಕ್ಕುಗಳಿಂದ ಒಟ್ಟುಗೂಡಿಸುವರು.


ನೀವು ಆ ಗುಡ್ಡಗಳ ನಡುವೆ ಉಂಟಾಗುವ ಕಣಿವೆಯ ಮೂಲಕ ಪಲಾಯನಗೈಯುವಿರಿ. ಆ ಕಣಿವೆ ಆಚೆಲಿನವರೆಗೆ ಹಬ್ಬಿರುವುದು. ಜುದೇಯದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪವಾದಾಗ ನೀವು ಮಾಡಿದಂತೆ ಪಲಾಯನ ಗೈಯುವಿರಿ. ಆಗ ನನ್ನ ದೇವರಾದ ಸರ್ವೇಶ್ವರ ತಮ್ಮ ದೂತರ ಸಮೇತ ಬರುವರು.


ಆಯ್ಕೆಯಾದವರಿಗೆ ಅಪ್ಪಣೆಮಾಡಿದ್ದೇನೆ: ಹೌದು, ಹೆಮ್ಮೆಯಿಂದ ಮೆರೆಯುವ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆನೀಡಿದ್ದೇನೆ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಪುನರಾಗಮನವನ್ನು ಮತ್ತು ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನು ಕುರಿತು ನಿಮ್ಮಲ್ಲಿ ನಾವು ವಿನಂತಿಸುವುದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು