Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:6 - ಕನ್ನಡ ಸತ್ಯವೇದವು C.L. Bible (BSI)

6 ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ I ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರೊಬ್ಬನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮತ್ತು ದೇವರು ನ್ಯಾಯಾಧಿಪತಿಯಾಗಿದ್ದಾರೆ. ಆಕಾಶಗಳು ದೇವರ ನೀತಿಯನ್ನು ಪ್ರಕಟಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:6
14 ತಿಳಿವುಗಳ ಹೋಲಿಕೆ  

ಘೋಷಿಸುತ್ತದೆ ಗಗನಮಂಡಲ ಆತನ ನೀತಿಯನು I ಕಾಣುತ್ತವೆ ಸಕಲ ಜನಾಂಗ ಆತನ ಮಹಿಮೆಯನು II


ಪ್ರಸಿದ್ಧಪಡಿಸುವುದು ಪ್ರಭು, ಗಗನವು ನಿನ್ನ ಮಹತ್ತನು I ಸಂಕೀರ್ತಿಸುವುದು ಸ್ವರ್ಗೀಯ ಸಭೆ, ನಿನ್ನ ಸತ್ಯತೆಯನು II


ನ್ಯಾಯತೀರ್ಪು ಬರುವುದು ದೇವನಿಂದಲೇ I ಉನ್ನತಿಯು ಅವನತಿಯು ಆತನಿಂದಲೇ II


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಸರ್ವೇಶ್ವರ ಸ್ವಾಮಿಯೇ ನಮ್ಮ ನ್ಯಾಯಾಧಿಪತಿ, ಸರ್ವೇಶ್ವರ ಸ್ವಾಮಿಯೇ ನಮಗೆ ಶಾಸನದಾಯಕ, ಸರ್ವೇಶ್ವರ ಸ್ವಾಮಿಯೇ ನಮ್ಮ ರಾಜ. ಅವರೇ ನಮ್ಮ ಉದ್ಧಾರಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು