Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:7 - ಕನ್ನಡ ಸತ್ಯವೇದವು C.L. Bible (BSI)

7 “ಎಲೈ ಪ್ರಜೆ ಇಸ್ರಯೆಲ್, ನಾನು ನಿನ್ನ ದೇವರು I ಕಿವಿಗೊಟ್ಟು ಆಲಿಸು ನಾನು ನಿನ್ನ ವಿರುದ್ಧ ವಾದಿಸುವುದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 [ಆತನು ಆಜ್ಞಾಪಿಸುವದೇನಂದರೆ - ] ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ, ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ಹೀಗೆನ್ನುತ್ತಾನೆ: “ನನ್ನ ಜನರೇ, ಇಸ್ರೇಲರೇ, ನನಗೆ ಕಿವಿಗೊಡಿರಿ! ನಾನು ನಿಮಗೆ ವಿರುದ್ಧವಾಗಿ ಸಾಕ್ಷಿ ಹೇಳುವೆನು. ದೇವರಾದ ನಾನೇ ನಿಮ್ಮ ದೇವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ನನ್ನ ಜನರೇ, ಕೇಳಿರಿ, ನಾನು ಮಾತನಾಡುತ್ತಿದ್ದೇನೆ, ಇಸ್ರಾಯೇಲೇ, ನಿಮಗೆ ವಿರೋಧವಾಗಿ ಹೀಗೆಂದು ನಾನು ಸಾಕ್ಷಿ ಕೊಡುವೆನು: ನಾನು ದೇವರು, ಹೌದು ನಿಮ್ಮ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:7
22 ತಿಳಿವುಗಳ ಹೋಲಿಕೆ  

“ನನ್ನ ಜನರೇ, ಕಿವಿಗೊಡಿ ನನ್ನ ಬುದ್ಧಿಮಾತಿಗೆ I ಹಾಗೆ ಮಾಡಿದರೆ ಇಸ್ರಯೇಲರೆ, ಹಿತ ನಿಮಗೆ, II


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


"ಆದಕಾರಣ ಸರ್ವೇಶ್ವರನಾದ ನಾನು ನಿಮ್ಮೊಡನೆ ಇನ್ನೂ ವ್ಯಾಜ್ಯಮಾಡುತ್ತೇನೆ; ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯವಾಡುವೆನು,” ಎನ್ನುತ್ತಾರೆ ಸರ್ವೇಶ್ವರ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


‘ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಡಿಬಿಡಿ; ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿ; ನಾನು ನಿಮ್ಮ ದೇವರಾದ ಸರ್ವೇಶ್ವರ’ ಎಂದು ಅವರನ್ನು ಎಚ್ಚರಿಸಿದೆ.


ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಾನು ಇಸ್ರಯೇಲರನ್ನು ಆರಿಸಿಕೊಂಡ ದಿನದಂದು ಯಕೋಬ ಸಂತಾನದವರಿಗೆ ಮಾತುಕೊಟ್ಟು, ‘ನಾನೇ ನಿಮ್ಮ ದೇವರಾದ ಸರ್ವೇಶ್ವರ’ ಎಂದು ಈಜಿಪ್ಟ್ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆ.


ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ಸರ್ವಜನಾಂಗಗಳೆ, ಗಮನಿಸಿರಿ I ಭೂನಿವಾಸಿಗಳೆ, ನನಗೆ ಕಿವಿಗೊಡಿ II


ಈ ಕಾರಣ ದೇವರಾದ ಸರ್ವೇಶ್ವರ ಅಹಾಜನನ್ನು ಸಿರಿಯಾದ ಅರಸನ ಕೈಗೆ ಒಪ್ಪಿಸಿದನು. ಸಿರಿಯಾದವರು ಅವನನ್ನು ಸೋಲಿಸಿ ಅವನ ಜನರಲ್ಲಿ ದೊಡ್ಡ ಗುಂಪನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ, ಅವನು ಇಸ್ರಯೇಲ್ ರಾಜನ ಕೈವಶವಾಗಿ ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.


ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾವಿಧಿನಿಯಮಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು.


ಜನರೆಲ್ಲರೂ ಅದನ್ನು ಕಂಡು ಬೋರಲಬಿದ್ದರು; “ಸರ್ವೇಶ್ವರನೇ ದೇವರು, ಸರ್ವೇಶ್ವರನೇ ದೇವರು,” ಎಂದು ಕೂಗಿದರು.


“ಇರಬಾರದು ಅನ್ಯದೇವತೆಗಳು ನಿಮ್ಮಲಿ I ಪರದೇವತೆಗಳ ಪೂಜೆ ಕೂಡದು ನಿಮ್ಮಲಿ, II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು