Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:1 - ಕನ್ನಡ ಸತ್ಯವೇದವು C.L. Bible (BSI)

1 ಕೃಪಾಳು, ದೇವಾ, ಕರುಣಿಸೆನ್ನನು I ಕರುಣಾನಿಧಿ, ಅಳಿಸೆನ್ನ ದೋಷವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪ್ರೀತಿಸ್ವರೂಪನಾದ ದೇವರೇ, ನನಗೆ ಕರುಣೆತೋರು; ಕರುಣಾನಿಧಿಯೇ, ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನನ್ನು ಕರುಣಿಸಿರಿ. ನಿಮ್ಮ ಮಹಾ ಅನುಕಂಪಕ್ಕೆ ಅನುಸಾರವಾಗಿ ನನ್ನ ಅತಿಕ್ರಮಗಳನ್ನು ಅಳಿಸಿಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:1
31 ತಿಳಿವುಗಳ ಹೋಲಿಕೆ  

ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”


ಆದರೂ ನಾನೇ ನಾನಾಗಿ ಅಳಿಸಿಬಿಡುವೆ ನಿನ್ನ ದ್ರೋಹಗಳನು, ನನ್ನ ನೆನಪಿನಿಂದ ತೆಗೆದುಹಾಕುವೆ ನಿನ್ನ ಪಾಪಗಳನು.


ನನ್ನ ಪಾಪದೋಷಕೆ ವಿಮುಖನಾಗು I ಸರ್ವದ್ರೋಹಗಳನು ಅಳಿಸಿಹಾಕು II


ಅವರು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದ್ದಾರೆ. ನಮ್ಮನ್ನು ಬಂಧಿಸಿದ್ದ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಕ್ರಿಸ್ತಯೇಸು ತೊಡೆದುಹಾಕಿದ್ದಲ್ಲದೆ ಅವುಗಳನ್ನು ಶಿಲುಬೆಗೆ ಜಡಿದು ನಮ್ಮನ್ನು ಬಿಡುಗಡೆ ಮಾಡಿದ್ದಾರೆ.


ಆಲಿಸೆನ್ನ ಪ್ರಭು, ನಿನ್ನ ಪ್ರೀತಿ ಸುಮಧುರ I ಕಟಾಕ್ಷಿಸೆನ್ನನು ದೇವಾ, ಕರುಣಾಸಾಗರ II


ಒಂದು ದಿನ ಸಂಜೆ ಹೊತ್ತಿನಲ್ಲಿ ದಾವೀದನು ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಆಗ ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


ನೆನಪಿಗೆ ತಂದುಕೊಂಡನು ತನ್ನೊಡಂಬಡಿಕೆಯನು I ದಯಾಳುತನದಿಂದ ತೋರಿದನವರಿಗೆ ಕರುಣೆಯನು I ಬಂಧಿಸಿದವರಿಂದಲೂ ದಯೆಯನು ದೊರಕಿಸಿದನು II


ಸತ್ಯಸ್ವರೂಪನಾದ ದೇವಾ, ಭಕ್ತನ ಮೊರೆಗೆ ಸದುತ್ತರ ಪಾಲಿಸೊ I ಆಪತ್ತಿನಲ್ಲಿ ಆಶ್ರಯವಿತ್ತ ದೇವಾ, ಎನ್ನ ಪ್ರಾರ್ಥನೆಯ ಆಲಿಸೊ II


ಒಂದು ವೇಳೆ ದುಃಖಪಡಿಸಿದರೂ ಕೃಪಾತಿಶಯದಿಂದ ಕನಿಕರಿಸಬಲ್ಲ.


ಕೃಪೆಯಿಂದ ನಡೆಸು ನಿನ್ನ ದಾಸನನು I ಕಲಿಸೆನಗೆ ನಿನ್ನ ನಿಬಂಧನೆಗಳನು II


ಹೇ ಪ್ರಭು, ದೇವಾ, ನನ್ನನಾದರಿಸು ಅಕ್ಕರೆಯಿಂದ I ನನ್ನ ಪಕ್ಷವಹಿಸಿ ರಕ್ಷಿಸು ನಿನ್ನ ನಾಮದ ಪ್ರಯುಕ್ತ II


ಅಗಲಿಸಬೇಡ ಪ್ರಭೂ, ನಿನ್ನ ಕೃಪೆಯನು ನನ್ನಿಂದ I ನಿನ್ನ ಪ್ರೀತಿ ಸತ್ಯತೆ ಕಾದಿರಿಸಲಿ ನನ್ನನು ಸತತ II


ನಿನ್ನ ಮಂದಿರಕೆ ಬರುವೆ ನಿನ್ನಪಾರ ಪ್ರೀತಿಯ ನಿಮಿತ್ತ I ಭಕುತಿಯಿಂದ ಅಡ್ಡಬೀಳುವೆ ನಿನ್ನ ಪವಿತ್ರಾಲಯದತ್ತ II


ಗ್ರಹಿಸಲಿಲ್ಲಾ ಪಿತೃಗಳು ನಿನ್ನದ್ಭುತಗಳನು ಈಜಿಪ್ಟಿನಲಿ I ಸ್ಮರಿಸಲಿಲ್ಲವರು ನಿನ್ನಚಲ ಪ್ರೇಮಾತಿಶಯಗಳನು ಅಲ್ಲಿ I ಬದಲಿಗೆ ಮಹೋನ್ನತನನೆ ಪ್ರತಿಭಟಿಸಿದರು ಕೆಂಗಡಲಬಳಿ II


ಪ್ರಸನ್ನಕಾಲದಲ್ಲಿ ಪ್ರಭು, ನಾ ಮೊರೆಯಿಡುತ್ತಿರುವೆ ನಿನಗೆ I ಪ್ರೀತಿಮಯ ದೇವಾ, ಜೀವೋದ್ಧಾರಕ, ಸದುತ್ತರ ನೀಡೆನಗೆ II


ನಮ್ಮ ದೇವರಾದ ಸರ್ವೇಶ್ವರ, ನಮ್ಮನ್ನು ಕರುಣಿಸುವವರೂ ಕ್ಷಮಿಸುವವರೂ ಆಗಿದ್ದಾರೆ. ಆದರೆ ನಾವು ಅವರಿಗೆ ವಿರುದ್ಧ ತಿರುಗಿಬಿದ್ದೆವು.


ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


ಪ್ರಭುವಿನ ಕರುಣೆ ಎಲ್ಲರ ಮೇಲೆ I ಆತನ ಕೃಪೆಯು ಸೃಷ್ಟಿಯ ಮೇಲೆ II


ಕರುಣೆ ತೋರಲು ದೇವನು ಮರೆತುಬಿಟ್ಟನೋ? I ಕರುಳಿಗೆ ಕೋಪದಿಂದ ಬರೆಹಾಕಿಕೊಂಡನೋ? II


ನನ್ನ ದೇವರೇ, ಕಿವಿಗೊಟ್ಟು ಕೇಳಿ, ಕಣ್ಣು ತೆರೆದು ನಮ್ಮ ಹಾಳು ಪ್ರದೇಶಗಳನ್ನೂ ನಿಮ್ಮ ಹೆಸರುಗೊಂಡಿರುವ ನಗರವನ್ನೂ ನೋಡಿ. ನಾವು ಸದ್ಧರ್ಮಿಗಳೇನೂ ಅಲ್ಲ. ನಿಮ್ಮ ಮಹಾಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿಮ್ಮ ಮುಂದೆ ಅರಿಕೆಮಾಡುತ್ತಿದ್ದೇವೆ.


ಅವರ ಅಪರಾಧವನ್ನು ಕ್ಷಮಿಸಬೇಡಿ. ನಿಮ್ಮೆದುರಿಗಿರುವ ಅವರ ಪಾಪವನ್ನು ಅಳಿಸಿಬಿಡಬೇಡಿ. ಏಕೆಂದರೆ ಕಟ್ಟುವವರ ಮುಂದೆಯೇ ಅವರು ನಿಮ್ಮನ್ನು ಕೆಣಕಿದ್ದಾರೆ,” ಎಂದು ನಾನು ಪ್ರಾರ್ಥಿಸಿದೆ.


ಸರ್ವೇಶ್ವರಾ, ನನ್ನನ್ನು ಕೊಲ್ಲಲು ಅವರು ಮಾಡಿಕೊಂಡಿರುವ ಸಂಚು ನಿಮಗೆ ತಿಳಿದಿದೆ. ಅವರ ಅಪರಾಧವನ್ನು ಕ್ಷಮಿಸಬೇಡಿ, ಅವರ ಪಾಪವನ್ನು ಅಳಿಸಬೇಡಿ, ಅದು ನಿಮ್ಮ ಕಣ್ಣೆದುರಿಗೇ ಇರಲಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪ ವ್ಯಕ್ತವಾಗುವಾಗ ಅವರಿಗೆ ತಕ್ಕುದನ್ನು ಮಾಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು