Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:13 - ಕನ್ನಡ ಸತ್ಯವೇದವು C.L. Bible (BSI)

13 ಬೋಧಿಸುವೆನಾಗ ನಿನ್ನ ಮಾರ್ಗವನು ದುರುಳರಿಗೆ I ತಿರುಗಿಕೊಳ್ವರಾಗ ದ್ರೋಹಿಗಳು ನಿನ್ನ ಕಡೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿನ್ನ ಜೀವಮಾರ್ಗವನ್ನು ನಾನು ಪಾಪಿಗಳಿಗೆ ಉಪದೇಶಿಸುವೆನು; ಆಗ ಅವರು ನಿನ್ನ ಬಳಿಗೆ ಹಿಂತಿರುಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ನಾನು ಅತಿಕ್ರಮಿಸಿದವರಿಗೆ ನಿಮ್ಮ ಮಾರ್ಗಗಳನ್ನು ಬೋಧಿಸುವೆನು; ಮತ್ತು ಪಾಪಿಗಳು ನಿಮ್ಮ ಕಡೆಗೆ ತಿರುಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:13
24 ತಿಳಿವುಗಳ ಹೋಲಿಕೆ  

ಆದರೆ, ನಾನು ನಿನ್ನ ವಿಶ್ವಾಸವು ಕುಂದದಂತೆ ನಿನಗಾಗಿ ಪ್ರಾರ್ಥನೆ ಮಾಡಿದ್ದೇನೆ. ನೀನು ಪರಿವರ್ತನೆ ಹೊಂದಿದ ನಂತರ ನಿನ್ನ ಸಹೋದರರನ್ನು ದೃಢಪಡಿಸು,” ಎಂದರು.


ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


“ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ.


ಎಫ್ರಯಿಮಿನ ಈ ಪ್ರಲಾಪ ನನ್ನ ಕಿವಿಗೆ ಬಿದ್ದಿದೆ: ‘ನೀನು ನನಗೆ ಶಿಕ್ಷೆ ವಿಧಿಸಿದೆ ಪಳಗದ ಹೋರಿಯಂತೆ ನಾನು ಆ ಶಿಕ್ಷೆಯನ್ನು ಅನುಭವಿಸಿದೆ. ನೀನು ನನ್ನನ್ನು ತಿರುಗಿಸು, ನೀ ತಿರುಗಿಸಿದ ಹಾಗೆ ನಾನು ತಿರುಗುವೆ. ನೀನೆ ನನ್ನ ದೇವರಾದ ಸರ್ವೇಶ್ವರನಲ್ಲವೆ?


ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು I ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು II “ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ” ಎಂದೆನು I ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು II


ಸತ್ಯಸ್ವರೂಪನು, ದಯಾವಂತನು ಪ್ರಭು I ದಾರಿತಪ್ಪಿದವರಿಗೆ ಬೋಧಕನು ವಿಭು II


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ I ನಂಬಲರ್ಹ; ಪ್ರಭುವಿನ ಶಾಸನ ಮುಗ್ದರಿಗದು ಸುಜ್ಞಾನ II


“ಎಲವೋ ಪಿಶಾಚಿಕೋರನೇ, ಸರ್ವಸನ್ಮಾರ್ಗಕ್ಕೆ ಶತ್ರು ನೀನು; ಎಲ್ಲಾ ತಂತ್ರ ಕುತಂತ್ರಗಳು ನಿನ್ನಲ್ಲಿ ತುಂಬಿವೆ. ಪ್ರಭುವಿನ ಸನ್ಮಾರ್ಗಕ್ಕೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ? ಇಗೋ, ಈಗ ಪ್ರಭುವಿನ ಶಾಪ ನಿನ್ನ ಮೇಲಿದೆ!


ನಿನ್ನ ಮಾರ್ಗವನು ಪ್ರಭು ನನಗೆ ತೋರಿಸು I ನೀನೊಪ್ಪುವ ಪಥದಲಿ ನಾ ನಡೆಯ ಕಲಿಸು II


ಈ ಪ್ರಕಾರ ನಡೆದುದರಿಂದ ಸರ್ವೇಶ್ವರ ಅವರ ಮೇಲೆ ಕಡುಕೋಪಗೊಂಡು ಯೆಹೂದಕುಲದವರ ಹೊರತು, ಉಳಿದ ಎಲ್ಲಾ ಕುಲಗಳವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ಇಸ್ರಯೇಲ್ ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ, ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ, ಶಿಕ್ಷಿಸಿದರು.


ಸರ್ವೇಶ್ವರ, ತಮ್ಮ ದಾಸರಾದ ಎಲ್ಲಾ ಪ್ರವಾದಿಗಳ ಮುಖಾಂತರ ಭವಿಷ್ಯ ನುಡಿದಂತೆ, ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಅವರು ಸೆರೆಯವರಾಗಿ ತಮ್ಮ ನಾಡಿನಿಂದ ಅಸ್ಸೀರಿಯಾ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು