Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:6 - ಕನ್ನಡ ಸತ್ಯವೇದವು C.L. Bible (BSI)

6 ಅಂತರಂಗ ಶುದ್ಧಿಯನು ನೀ ಬಯಸುತಿ I ಅಂತರ್ಯ ಜ್ಞಾನವನು ಉದಯಗೊಳಿಸುತಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರೇ, ನಾನು ನಿನಗೆ ನಂಬಿಗಸ್ತನಾಗಿರಬೇಕೆಂಬುದೇ ನಿನ್ನ ಅಪೇಕ್ಷೆ. ಆದ್ದರಿಂದ ಸುಜ್ಞಾನದ ರಹಸ್ಯಗಳನ್ನು ನನಗೆ ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೂ ಅಂತರಂಗದಲ್ಲಿ ನೀವು ಯಥಾರ್ಥವನ್ನು ಬಯಸುತ್ತೀರಿ. ನೀವು ಹೃದಯದ ಆಂತರ್ಯದಲ್ಲಿ ನನಗೆ ಜ್ಞಾನವನ್ನು ಬೋಧಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:6
26 ತಿಳಿವುಗಳ ಹೋಲಿಕೆ  

ಅಂಥವನಿರಬೇಕು ನಿರ್ದೋಷಿ, ಸನ್ಮಾರ್ಗಿ I ಸತ್ಯವ ನುಡಿಯಬೇಕು ಹೃತ್ಪೂರ್ವಕವಾಗಿ II


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ಬದಲಿಗೆ, ಶಾಶ್ವತವಾದ, ಶಾಂತ ಹಾಗೂ ಸೌಮ್ಯಗುಣಗಳಿಂದ ಕೂಡಿದ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಇದೇ ದೇವರ ದೃಷ್ಟಿಯಲ್ಲಿ ಅತೀ ಅಮೂಲ್ಯವಾದುದು.


ಜ್ಞಾನವನು ದಯಪಾಲಿಸಿದವನಾರು ಇಬಿಸ್ ಪಕ್ಷಿಗೆ? ವಿವೇಕವನು ಅನುಗ್ರಹಿಸಿದವನಾರು ಕೋಳಿಹುಂಜಕ್ಕೆ


ನನ್ನ ಅಂತರಂಗದಲ್ಲಿ ದೈವನಿಯಮವನ್ನು ಕುರಿತು ಆನಂದಿಸುತ್ತೇನೆ.


ಜ್ಞಾನವನ್ನು ನೀಡುವಾತ ಸರ್ವೇಶ್ವರನೇ; ತಿಳುವಳಿಕೆ, ವಿವೇಕ ಹೊರಡುವುದು ಆತನ ಬಾಯಿಂದಲೇ.


ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.


ಆಗ ಯೇಸು, “ಫರಿಸಾಯರಾದ ನೀವು ಲೋಟ ಹಾಗೂ ಊಟದ ತಟ್ಟೆಗಳ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಲೋಭದಿಂದಲೂ ಕೆಡುಕಿನಿಂದಲೂ ತುಂಬಿದೆ.


ಅವರ ಬಾಯಲಿ ಹುಸಿನುಡಿ, ಹೃದಯವಾದರೊ ವಿನಾಶದ ಶರಧಿ I ಅವರ ಜಿಹ್ವೆಯಲಿ ಮುಖಸ್ತುತಿ, ಕಂಠವಾದರೋ ತೆರೆದ ಸಮಾಧಿ II


ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ಪರೀಕ್ಷಿಸು ಪ್ರಭು, ಎನ್ನನು ಪರಿಶೀಲಿಸು I ಹೃನ್ಮನಗಳೆಲ್ಲವನು ನೀ ಪರಿಶೋಧಿಸು II


ಆದರೆ ಮಾನವರಿಗುಂಟು ಒಂದು ಆತ್ಮ ಸರ್ವಶಕ್ತಸ್ವಾಮಿಯ ಉಸಿರಿನ ಮೂಲಕ ಅವರಿಗೆ ದೊರಕುತ್ತದೆ ವಿವೇಕ.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಸತ್ಯವಂತರು ನಾಡಿನಲ್ಲಿ ಬಾಳುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿರುವರು.


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಒಳಿತನು ಮಾಡು ಪ್ರಭು, ಒಳ್ಳೆಯವರಿಗೆ I ಒಳ್ಳೆಯವರಿಗೆ ಮೇಣ್ ನೇರ ಮನಸ್ಕರಿಗೆ II


ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.


ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು I ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು II “ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ” ಎಂದೆನು I ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು II


“ಇವನ ಸಾವೆಂದು? ಇವ ನಿರ್ನಾಮವಾಗುವದೆಂತು?” I ನನಗೆ ಕೇಡು ಬಯಸುವವರ ಕುಹಕ ನುಡಿಯಿದು II


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು