Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:7 - ಕನ್ನಡ ಸತ್ಯವೇದವು C.L. Bible (BSI)

7 ಹಿಸ್ಸೋಪಿನಿಂದ ನೀ ಚಿಮುಕಿಸೆ, ನಾ ಶುದ್ಧನಾಗುವೆ I ನೀ ತೊಳೆದೆಯಾದರೆ, ಹಿಮಕ್ಕಿಂತ ನಾ ಬೆಳ್ಳಗಾಗುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮುಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗಿರುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹಿಸ್ಸೋಪ್ ಗಿಡದ ಬರಲಿನಿಂದ ನನ್ನನ್ನು ತೊಳೆದು ಶುದ್ಧೀಕರಿಸು; ನಾನು ಹಿಮಕ್ಕಿಂತಲೂ ಬಿಳುಪಾಗುವ ತನಕ ನನ್ನನ್ನು ತೊಳೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹಿಸ್ಸೋಪಿನಿಂದ ನನ್ನನ್ನು ಶುಚಿಮಾಡಿರಿ, ಆಗ ನಾನು ಶುದ್ಧನಾಗುವೆನು. ನನ್ನನ್ನು ತೊಳೆಯಿರಿ, ಆಗ ಹಿಮಕ್ಕಿಂತ ಬೆಳ್ಳಗಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:7
14 ತಿಳಿವುಗಳ ಹೋಲಿಕೆ  

ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಮೋಶೆ ಧರ್ಮಶಾಸ್ತ್ರದ ಆಜ್ಞೆಗಳನ್ನೆಲ್ಲ ಸಾರಿ ಹೇಳಿ, ಹೋತ ಹಾಗೂ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅದಕ್ಕೆ ನೀರು ಬೆರೆಸಿದನು; ಅದನ್ನು ಕೆಂಪು ಉಣ್ಣೆಯ ನೂಲಿನಿಂದ ಕಟ್ಟಿದ ಹಿಸ್ಸೋಪ್ ಕಡ್ಡಿಗಳಿಂದ ಪವಿತ್ರಗ್ರಂಥದ ಮೇಲೂ ಜನರ ಮೇಲೂ ಚಿಮುಕಿಸಿದನು.


ಹಿಸ್ಸೋಪ್ ಗಿಡದ ಕುಚ್ಚನ್ನು ಬಟ್ಟಲಿನಲ್ಲಿರುವ ಆ ರಕ್ತದಲ್ಲಿ ಅದ್ದಿ ಬಾಗಿಲಿನ ಪಟ್ಟಿಗೂ ಅದರ ನಿಲುವು ಕಂಬಗಳೆರಡಕ್ಕೂ ಹಚ್ಚಿರಿ. ಬಳಿಕ ನಿಮ್ಮಲ್ಲಿ ಒಬ್ಬರೂ ಸೂರ್ಯೋದಯದವರೆಗೆ ಬಾಗಿಲಿನಿಂದ ಹೊರಗೆ ಹೋಗಕೂಡದು.


ಅಶುದ್ಧತೆಯಿಂದ ಬಂದೀತೆ ಶುದ್ಧತೆ? ಇಲ್ಲ, ಎಂದಿಗೂ ಅದು ಅಸಾಧ್ಯವೆ.


ಸರ್ಪಗಳಂತಾ ಜನ ವಿಷಭರಿತ I ನಾಗರದಂತೆ ಅವರ ಕಿವಿ ಮಂದ II


ಆಗ ಪೇತ್ರನು, “ಹಾಗಾದರೆ ಪ್ರಭೂ, ನನ್ನ ಕಾಲುಗಳನ್ನು ಮಾತ್ರವಲ್ಲ, ನನ್ನ ಕೈಗಳನ್ನೂ ತಲೆಯನ್ನೂ ತೊಳೆಯಿರಿ, ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು