Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 52:1 - ಕನ್ನಡ ಸತ್ಯವೇದವು C.L. Bible (BSI)

1 ನೀಚಕಾರ್ಯವೆಸಗಿ ಹಿಗ್ಗುವ ಘನ ಮಾನವನೆ I ದೇವರ ಅನಂತ ಕೃಪೆಯನು ಪ್ರತಿಭಟಿಸುವವನೆ I ದೇವರ ದೃಷ್ಟಿಯಲಿ ನೀನು ಹೀನಾಯನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದುಷ್ಟಾಧಿಕಾರಿಯೇ, ನೀನು ಕೆಡುಕು ಮಾಡಿ ಹಿಗ್ಗುವದೇನು? ದೇವರ ಕೃಪೆಯು ಯಾವಾಗಲೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದುಷ್ಟಾಧಿಕಾರಿಯೇ, ನಿನ್ನ ದುಷ್ಕೃತ್ಯಗಳ ಕುರಿತು ಜಂಬಪಡುವುದೇಕೇ? ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಲಿಷ್ಠನೇ, ನೀನು ಕೆಟ್ಟತನದಲ್ಲಿ ಹೆಚ್ಚಳ ಪಡುವುದೇಕೆ? ದೇವರ ದೃಷ್ಟಿಯಲ್ಲಿ ಅಪಕೀರ್ತಿಯಾದವನೇ, ದೇವರ ಅನಂತ ಕೃಪೆಯು ಯಾವಾಗಲೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 52:1
24 ತಿಳಿವುಗಳ ಹೋಲಿಕೆ  

ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II


ಕೃತಜ್ಞತೆಯಿಂದ ಸಲ್ಲಿಸಿರಿ ಪ್ರಭುವಿಗೆ ಸ್ತುತಿಯನು I ಆತನ ಪ್ರೀತಿ ಶಾಶ್ವತ, ಆತನು ಒಳ್ಳೆಯವನು II


ಉಬ್ಬಿಹೋಗಿಹರು ಕೆಡುಕರೆಲ್ಲರು I ಜಂಬ ಕೊಚ್ಚಿಕೊಳ್ಳುತ್ತಿಹರು ಅವರು II


ಅವನ ಮನದಲ್ಲಿರುವುದು ಮೂರ್ಖತನ; ಅವನು ಸತತ ಕಲ್ಪಿಸುವುದು ಕೆಡುಕುತನ. ಅವನು ಬಿತ್ತನೆ ಮಾಡುವುದು ಕಾಳಗ, ಕದನ.


ಅದೇ ದಿನ ಸೌಲನ ಪಶುಪಾಲರಲ್ಲಿ ಮುಖ್ಯಸ್ಥನಾದ ದೋಯೇಗನೆಂಬ ಎದೋಮ್ಯನು ಸರ್ವೇಶ್ವರನ ಆಲಯದಲ್ಲಿ ತಂಗಬೇಕಾಗಿತ್ತು.


ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.


ಕೇಡನು ಹಡೆಯಲು ದುರುಳನು ಪಡುವ ಬೇನೆಯನು ನೋಡು I ಹಾನಿಯ ಹಡೆವನೆಂದೆಣಿಸಿ ಶೂನ್ಯವ ಹೆರುವುದ ನೋಡು II


ಜನರು ಸ್ವಾರ್ಥಚಿಂತಕರೂ ಲೋಭಿಗಳೂ ಅಹಂಕಾರಿಗಳೂ ಬಡಾಯಿಕೋರರೂ ದೇವದೂಷಕರೂ ಹೆತ್ತವರಿಗೆ ಅವಿಧೇಯರೂ ಕೃತಘ್ನರೂ ಭಕ್ತಿಹೀನರೂ ಆಗುವರು.


“ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದು ವಿಷಯದಲ್ಲೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆ ವಿಷಯವಾದರೂ ಸರಿಯೇ ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ ಸರಿಯೇ, ಇಬ್ಬರೂ ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾರೋ ಅವನು ಆ ಮತ್ತೊಬ್ಬನಿಗೆ ಎರಡರಷ್ಟು ಕೊಡಬೇಕು.


ಅವರು ಹರಟೆಮಲ್ಲರು, ಚಾಡಿಕೋರರು, ದೇವದ್ರೋಹಿಗಳು, ಗರ್ವಿಗಳು, ಅಹಂಕಾರಿಗಳು, ಜಂಭಕೊಚ್ಚಿಕೊಳ್ಳುವವರು, ಕೇಡುಬಗೆಯುವವರು, ತಂದೆತಾಯಿಗಳಿಗೆ ಅವಿಧೇಯರು ಆಗಿದ್ದಾರೆ.


ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.


ಅವರ ನಾಲಿಗೆ ಕೊಲ್ಲುವ ಬಾಣ, ಅದು ಆಡುವುದು ಸುಳ್ಳನ್ನೇ ಬಾಯಲ್ಲಿ ಶುಭವೆಂದು ಹೇಳಿದರೂ ಹೃದಯದಲ್ಲಿ ಒಡ್ಡಿದ್ದಾರೆ ಹೊಂಚನ್ನೇ.


ಅವರ ಬಾಯಿ ಬೊಗಳುವ ಮಾತುಗಳನು ಕೇಳು I ಅವರ ತುಟಿಗಳು ಹರಿತ ಕತ್ತಿಕಠಾರಿಗಳು I ನಮಗಾರು ಕಿವಿಗೊಡರೆಂಬುದೆ ಅವರ ಗೋಳು II


ಗರ್ವಿಗಳು ನಿಂತಿಹರು ನನಗೆದುರಾಗಿ I ಕ್ರೂರಿಗಳು ಕಾದಿಹರೆನ್ನ ಕೊಲೆಗಾಗಿ I ಅವರಲಿಲ್ಲ ಮಾನ್ಯತೆ ದೇವರಿಗಾಗಿ II


ತುಂಬಿದೆ ಶಾಪಕೋಪ, ಕುತಂತ್ರ ಅವನ ಬಾಯಲಿ I ಅವಿತಿದೆ ಪಾಪ, ಅತಿವಿನಾಶ ನಾಲಗೆಯಡಿಯಲಿ II


ಗೆದಲ್ಯನನ್ನು ಕೊಂದು ಎರಡು ದಿನಗಳಾಗಿದ್ದರೂ ಆ ಸಂಗತಿ ಇನ್ನು ಯಾರಿಗೂ ತಿಳಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು