Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 52:3 - ಕನ್ನಡ ಸತ್ಯವೇದವು C.L. Bible (BSI)

3 ಒಳಿತಿಗಿಂತ ಕೆಡಕು ಮಾಡುವುದು ನಿನಗಿಷ್ಟ I ಸತ್ಯಕ್ಕಿಂತ ಸುಳ್ಳಾಡುವುದೇ ನಿನ್ನ ಚಟ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; ನೀತಿಯನ್ನು ಬಿಟ್ಟು ಸುಳ್ಳನ್ನು ಸ್ಥಾಪಿಸುವದೇ ನಿನಗೆ ಸಂತೋಷ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಒಳ್ಳೆಯದಕ್ಕಿಂತಲೂ ಕೆಟ್ಟದ್ದನ್ನೇ ನೀನು ಹೆಚ್ಚು ಪ್ರೀತಿಸುವೆ. ನಿನಗೆ ಸತ್ಯಕ್ಕಿಂತಲೂ ಸುಳ್ಳೇ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಒಳ್ಳೆಯದಕ್ಕಿಂತ ಕೆಟ್ಟದ್ದನ್ನೇ ನೀನು ಪ್ರೀತಿಸುತ್ತಿ. ಸತ್ಯವನಾಡುವುದಕ್ಕಿಂತ ಸುಳ್ಳನ್ನೇ ನೀನು ಮಾತನಾಡುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 52:3
10 ತಿಳಿವುಗಳ ಹೋಲಿಕೆ  

ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ನಂಬಿಕೆದ್ರೋಹಿಗಳೂ ದುಡುಕುವವರೂ ಮಹಾಗರ್ವಿಗಳೂ ಆಗುವರು. ದೇವರನ್ನು ಅರಸದೆ ಭೋಗಗಳನ್ನೇ ಬಯಸುವರು.


ಅವರು ದೇವರ ಸತ್ಯವನ್ನು ಬಿಟ್ಟು ಅಸತ್ಯವಾದುದನ್ನು ಅಂಗೀಕರಿಸಿದರು; ಸೃಷ್ಟಿಕರ್ತನನ್ನು ಆರಾಧಿಸದೆ, ಸೃಷ್ಟಿಯಾದ ವಸ್ತುಗಳನ್ನೇ ಆರಾಧಿಸಿ, ಸೇವೆಸಲ್ಲಿಸಿದರು. ಸರ್ವಕಾಲಕ್ಕೂ ಸೃಷ್ಟಿಕರ್ತರೊಬ್ಬರಿಗೇ ಸ್ತುತಿಸ್ತೋತ್ರ ಸಲ್ಲತಕ್ಕದ್ದು. ಆಮೆನ್.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಆದರೂ ನೀವು ಒಳಿತನ್ನು ದ್ವೇಷಿಸುತ್ತೀರಿ. ಕೆಟ್ಟದ್ದನ್ನು ಬಯಸುತ್ತೀರಿ. ನನ್ನ ಜನರ ಚರ್ಮವನ್ನು ಜೀವಸಹಿತ ಸುಲಿಯುತ್ತೀರಿ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ತಿನ್ನುತ್ತೀರಿ.


ಅವರ ನಾಲಿಗೆ ಕೊಲ್ಲುವ ಬಾಣ, ಅದು ಆಡುವುದು ಸುಳ್ಳನ್ನೇ ಬಾಯಲ್ಲಿ ಶುಭವೆಂದು ಹೇಳಿದರೂ ಹೃದಯದಲ್ಲಿ ಒಡ್ಡಿದ್ದಾರೆ ಹೊಂಚನ್ನೇ.


ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ದಬ್ಬುವ ದುರಾಲೋಚನೆ ಅವರದು ಗಾದಿಯಿಂದ I ಅಬದ್ಧವಾಡುವುದೆಂದರೊ ಹಬ್ಬದಾನಂದ I ಹರಸುವರು ಅಧರದಿಂದ, ಶಪಿಸುವರು ಉದರದಿಂದ II


ದುರಾತ್ಮನ ಮನಸ್ಸು ಕೇಡಿನ ಮೇಲೆ; ದಯೆತೋರಿಸನಾತ ನೆರೆಯವನ ಮೇಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು