Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 52:5 - ಕನ್ನಡ ಸತ್ಯವೇದವು C.L. Bible (BSI)

5 ನಸುಕುವನು ದೇವರು ನಿನ್ನನು ನಿರುತ I ದೂರಮಾಡುವನು ನಿನ್ನಾ ಗುಡಾರದಿಂದ I ಕಿತ್ತೆಸೆದುಬಿಡುವನು ಜೀವದ ನಾಡಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿ ಬಿಡುವನು; ನಿನ್ನನ್ನು ಹಿಡಿದು ನಿವಾಸದೊಳಗಿಂದ ಕಿತ್ತುಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರು ನಿನ್ನನ್ನು ಶಾಶ್ವತವಾಗಿ ನಾಶಮಾಡುವನು, ಗಿಡವನ್ನು ಬೇರು ಸಹಿತ ಕಿತ್ತುಹಾಕುವಂತೆ ಆತನು ನಿನ್ನನ್ನು ಹಿಡಿದು ನಿನ್ನ ಮನೆಯೊಳಗಿಂದ ಕಿತ್ತು ಬೀಸಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ದೇವರು ನಿಶ್ಚಯವಾಗಿ ನಿನ್ನನ್ನು ನಿತ್ಯ ನಾಶಕ್ಕೆ ತರುವರು. ದೇವರು ನಿನ್ನನ್ನು ನಿನ್ನ ವಾಸಸ್ಥಳದಿಂದ ಕಿತ್ತುಹಾಕುವರು. ಜೀವಿತರ ದೇಶದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 52:5
18 ತಿಳಿವುಗಳ ಹೋಲಿಕೆ  

ದುರುಳರಾದರೋ ನಾಡಿನಿಂದ ಬೇರ್ಪಡುವರು, ದ್ರೋಹಿಗಳು ಅಲ್ಲಿಂದ ಅಳಿದು ನಾಶವಾಗುವರು.


ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು I ನಾನಿಟ್ಟಿರುವೆ ನಂಬಿಕೆ ನಿರೀಕ್ಷೆ ಅದರೊಳು II


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಜೀವಲೋಕದಲ್ಲಿ ಇನ್ನು ದೇವನನ್ನು ಕಾಣೆನೆಂದುಕೊಂಡೆ ಭೂಲೋಕನಿವಾಸಿಗಳಲ್ಲಿ ಒಬ್ಬನನ್ನೂ ನೋಡಲಾರೆನೆಂದುಕೊಂಡೆ.


ನಿನ್ನನ್ನು ಕೆಲಸದಿಂದ ತೆಗೆದುಬಿಡುವರು, ನಿನ್ನ ಪದವಿಯಿಂದ ತೆಗೆದುಹಾಕುವರು.


ಕಳ್ಳಸಾಕ್ಷಿ ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ಹಾಳಾಗಿ ಹೋಗುವನು.


ಕಳ್ಳಸಾಕ್ಷಿ ದಂಡನೆಯನ್ನು ಪಡೆಯದಿರನು; ಸುಳ್ಳಾಡುವವನು ಅದನ್ನು ತಪ್ಪಿಸಿಕೊಳ್ಳಲಾರನು.


ಸತ್ಯವಾದಿಯ ಮಾತು ಶಾಶ್ವತ; ಮಿಥ್ಯವಾದಿಯ ಮಾತು ಕ್ಷಣಿಕ.


ಎಂದೇ ನಡೆವೆನು ನಾನು ಪ್ರಭುವಿನ ಕಣ್ಮುಂದೆ I ಅಂತೆಯೇ ಬಾಳುವೆ ಜೀವಲೋಕದೊಳಿದ್ದೇ II


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ನೆಮ್ಮದಿಯ ಗುಡಾರದಿಂದ ಅವನನ್ನು ಎಳೆದು ಹಾಕುವುದು ಹೊರಗೆ ಸಾಗಿಸಿಕೊಂಡು ಹೋಗುವುದವನನ್ನು ಅತಿಭಯಂಕರ ರಾಜನೆಡೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು