Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 52:6 - ಕನ್ನಡ ಸತ್ಯವೇದವು C.L. Bible (BSI)

6-7 ಸಜ್ಜನರು ಚಕಿತರಾಗುವರು ಕಂಡಿದನು I “ದೇವರನು ಆಶ್ರಯಿಸಿಕೊಳ್ಳದವನಿವನು I ಸಿರಿ ಸಂಪತ್ತಿನಲೆ ಭರವಸೆಯಿಟ್ಟವನು I ತುಚ್ಛಕಾರ್ಯಗಳಲೆ ಹೆಚ್ಚಳಪಟ್ಟವನು” I ಎಂದು ಜರೆದು ಮಾಡುವರು ಪರಿಹಾಸ್ಯವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಳ್ಳೆಯವರು ಇದನ್ನು ಕಂಡು ದೇವರಲ್ಲಿ ಭಯಭಕ್ತಿಯುಳ್ಳವರಾಗುವರು. ಅವರು ನಿಮ್ಮನ್ನು ನೋಡಿ ನಗುತ್ತಾ ಹೀಗೆನ್ನುವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀತಿವಂತರು ಇದನ್ನು ಕಂಡು ಭಯಪಡುವರು. ಅವರು ನಿನ್ನ ಬಗ್ಗೆ ನಗಾಡಿ ಹೀಗನ್ನುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 52:6
15 ತಿಳಿವುಗಳ ಹೋಲಿಕೆ  

ದುರುಳರ ದುರ್ಗತಿಯನು ನೋಡಿ ಸಜ್ಜನರು ಹಿಗ್ಗುವರು ನಿರ್ದೋಷಿಗಳು ಅವರನು ಈ ಪರಿ ಅಣಕಿಸಿ ಹಾಸ್ಯಮಾಡುವರು:


ಬರಿಸಿದನು ನವಗೀತೆಯನು, ದೇವಸ್ತುತಿಯನು ನನ್ನ ಬಾಯಲಿ I ಇದ ಕಂಡವರು ಭಯಪಡುವರು, ಇಡುವರು ಭರವಸೆ ಪ್ರಭುವಿನಲಿ II


ಪ್ರಭುವನು ನಂಬಿ ನಡೆ ಆತನ ಪಥದಲೇ I ಉದ್ಧಾರವಾಗುವೆ, ನಾಡಿಗೊಡೆಯನಾಗುವೆ I ದುಷ್ಟರ ವಿನಾಶವನು ಕಣ್ಣಾರೆ ಕಾಣುವೆ II


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


“ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು, ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.


ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II


ಪ್ರಭು, ನಿನ್ನ ನ್ಯಾಯತೀರ್ಪನು ಕುರಿತು I ಸಿಯೋನ್ ನಗರವು ಆನಂದಪಟ್ಟಿತು I ಜುದೇಯ ಪ್ರಾಂತ್ಯವು ಹರ್ಷಗೊಂಡಿತು II


ಜನರೆಲ್ಲರಾಗ ತಲ್ಲಣಗೊಳ್ಳುವರು I ದೇವಕಾರ್ಯವಿದು ಎಂದು ಧ್ಯಾನಿಪರು I ಆತನ ಸತ್ಕಾರ್ಯಗಳನು ಸಾರುವರು II


ಇಸ್ರಯೇಲಿನ ಜನರಾದ ನೀವು ಇದನ್ನು ಕಣ್ಣಾರೆ ಕಂಡು, “ಸರ್ವೇಶ್ವರ ಇಸ್ರಯೇಲಿನ ಹೊರಗೂ ಮಹಾಮಹಿಮೆಯುಳ್ಳವರು!” ಎಂದು ಹೇಳಿಕೊಳ್ಳುವಿರಿ.


ಬಿಡಿಸೆನ್ನನು ಪ್ರಭು ಸುಳ್ಳುಬಾಯಿಂದ I ವಂಚಿಸುವ ನಾಲಿಗೆ ಉಳ್ಳವರಿಂದ II


ಸತ್ಯವಾದಿಯ ಮಾತು ಶಾಶ್ವತ; ಮಿಥ್ಯವಾದಿಯ ಮಾತು ಕ್ಷಣಿಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು