Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 52:9 - ಕನ್ನಡ ಸತ್ಯವೇದವು C.L. Bible (BSI)

9 ನಿನ್ನುಪಕಾರವನು ಹೇ ದೇವಾ, ನಾ ಸದಾ ಸ್ಮರಿಸುವೆನು I ನಿನ್ನ ಶ್ರೇಷ್ಠ ನಾಮವನು ಭಕ್ತರ ಮುಂದೆ ಸ್ತುತಿಸುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 [ದೇವರೇ] ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಅದನ್ನೇ ನಿರೀಕ್ಷಿಸಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರೇ, ನಿನ್ನ ಉಪಕಾರಗಳಿಗಾಗಿ ನಾನು ನಿನ್ನನ್ನು ಎಂದೆಂದಿಗೂ ಕೊಂಡಾಡುವೆನು. ನಿನ್ನ ಹೆಸರಿನಲ್ಲೇ ಭರವಸವಿಟ್ಟಿರುವೆ; ಯಾಕೆಂದರೆ ನಿನ್ನ ಹೆಸರು ಎಷ್ಟೋ ಒಳ್ಳೆಯದು. ನಿನ್ನ ಪವಿತ್ರ ಜನರ ಸನ್ನಿಧಿಯಲ್ಲಿ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರೇ ನಿಮ್ಮ ಉಪಕಾರಕ್ಕಾಗಿ ಯಾವಾಗಲೂ ನಿಮ್ಮ ಭಕ್ತರ ಮುಂದೆ ನಿಮ್ಮನ್ನು ಸ್ತುತಿಸುತ್ತಿರುವೆನು. ನಿಮ್ಮ ಹೆಸರು ಒಳ್ಳೆಯದು. ಆದುದರಿಂದ ನಿಮ್ಮ ಹೆಸರನ್ನೇ ನಿರೀಕ್ಷಿಸಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 52:9
17 ತಿಳಿವುಗಳ ಹೋಲಿಕೆ  

ನಿನ್ನ ಸಾನ್ನಿಧ್ಯ ಸ್ವಾಮಿದೇವಾ, ನನಗೆಂಥ ಸೌಭಾಗ್ಯ I ನಿನ್ನ ಸತ್ಕಾರ್ಯಗಳ ಸಾರಲೆಂದೆ ನಿನ್ನನಾಶ್ರಯಿಸಿಕೊಂಡೆನಯ್ಯಾ II


ಸರ್ವಾಪತ್ತುಗಳಿಂದ ತಪ್ಪಿಸಿದೆ ಪ್ರಭು, ನನ್ನನು I ಕಂಡಿವೆ ನನ್ನ ಕಣ್ಗಳೇ ಶತ್ರುಗೊದಗಿದ ಸೋಲನು II


ಎನ್ನ ಮನಕೆ ಶಾಂತಿ ದೇವನಿಂದಲೆ I ನನಗೆ ನಂಬಿಕೆ ನಿರೀಕ್ಷೆ ಆತನಿಂದಲೆ II


ಎನ್ನ ಮನಕ್ಕೆ ಶಾಂತಿ ದೇವನಿಂದಲೆ I ನನ್ನ ಜೀವೋದ್ಧಾರ ಆತನಿಂದಲೆ II


ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.


ಕಾದಿದ್ದೆನು, ಪ್ರಭುವಿಗಾಗಿ ಕಾದಿದ್ದೆನು I ಕೊನೆಗಾತ ನನ್ನತ್ತ ಬಾಗಿ ಕಿವಿಗೊಟ್ಟನು II


ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ಪ್ರಾಣವಿರುವವರೆಗೆ ಸ್ತುತಿಸುವೆನು ಪ್ರಭುವನು I ಬಾಳೆಲ್ಲ ಹಾಡಿ ಭಜಿಪೆನು ನನ್ನ ದೇವರನು II


ಎಂದೇ ಮೌನವಿರದೆ ಎನ್ನ ಮನವು ನಿನಗೆ ಹಾಡಲಿ ಕೀರ್ತನೆ I ಹೇ ಪ್ರಭು, ಎನ್ನ ದೇವ, ನಿನಗೆನ್ನ ಅನಂತ ಧನ್ಯ ವಂದನೆ II


ಅವರ ಮುಂದೆ ತನ್ನ ಸಿರಿಸಂಪತ್ತನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಪದಾಧಿಕಾರಿಗಳಲ್ಲಿಯೂ ರಾಜಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಕೊಟ್ಟದ್ದನ್ನೂ ವರ್ಣಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು