Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 53:3 - ಕನ್ನಡ ಸತ್ಯವೇದವು C.L. Bible (BSI)

3 ಒಳಿತನೆಸಗುವವರು ಒಬ್ಬರೂ ಇಲ್ಲ I ದ್ರೋಹಿಗಳು, ದುಷ್ಕರ್ಮಿಗಳು ಅವರೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ; ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಒಳ್ಳೆಯದನ್ನು ನಡಿಸುವವರು ಒಬ್ಬರಾದರೂ ಇಲ್ಲ; ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಪ್ರತಿಯೊಬ್ಬರೂ ದೇವರಿಗೆ ವಿಮುಖರಾಗಿದ್ದಾರೆ. ಪ್ರತಿಯೊಬ್ಬನೂ ಕೆಟ್ಟುಹೋಗಿದ್ದಾನೆ. ಯಾವನೂ ಒಳ್ಳೆಯದನ್ನು ಮಾಡುತ್ತಿಲ್ಲ. ಇಲ್ಲ, ಒಬ್ಬನಾದರೂ ಮಾಡುತ್ತಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ, ಒಬ್ಬರಾದರೂ ಇಲ್ಲ. ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಟ್ಟು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 53:3
13 ತಿಳಿವುಗಳ ಹೋಲಿಕೆ  

ಸರಿದರು ದೂರ, ದೇವರಿಂದ ದೂರ ದಾರಿತಪ್ಪಿ ನಡೆದರೆಲ್ಲರೂ ಬಲುದೂರ ಒಳಿತನು ಮಾಳ್ಪರೊರ್ವನೂ ಇಲ್ಲ.


ನಾವೆಲ್ಲರೂ ಅಶುದ್ಧರು, ನಮ್ಮ ಸತ್ಕಾರ್ಯಗಳೆಲ್ಲ ಕೊಳಕು, ತರಗೆಲೆಯಂತೆ ಒಣಗಿಹೋಗಿದ್ದೇವೆ. ಬಿರುಗಾಳಿಯಂತೆ ನಮ್ಮನ್ನು ತಳ್ಳಿಕೊಂಡು ಬಂದಿವೆ, ನಮ್ಮ ಅಪರಾಧಗಳು.


ದಾರಿತಪ್ಪಿಹೋದ ದ್ರೋಹಿಗಳು ಅವರೆಲ್ಲ I ಒಳಿತನ್ನು ಮಾಡುವವನಿಲ್ಲ; ಓರ್ವನೂ ಇಲ್ಲ II


ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.


ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನೇ ಅನುಸರಿಸಿ ನಡೆ. ಒಳಿತನ್ನು ಮಾಡುವವನು ದೇವರಿಗೆ ಸೇರಿದವನು. ಕೆಡುಕನ್ನು ಮಾಡುವವನು ದೇವರನ್ನು ಕಾಣದವನು.


ಅಕ್ರಮಿಯು ತನ್ನ ಅಕ್ರಮವನ್ನು ಮುಂದುವರೆಸಲಿ. ಅಶುದ್ಧನು ತನ್ನ ಅಶುದ್ಧತೆಯಲ್ಲಿ ಮುಂದುವರೆಯಲಿ. ಸಜ್ಜನನು ತನ್ನ ಸನ್ನಡತೆಯಲ್ಲಿಯೇ ನಿರತನಾಗಿರಲಿ. ಪವಿತ್ರನು ತನ್ನ ಪಾವಿತ್ರ್ಯತೆಯನ್ನು ಹೆಚ್ಚಿಸಿಕೊಳ್ಳಲಿ,” ಎಂದನು.


ಕ್ರಿಸ್ತಯೇಸು ಸತ್ಯಸ್ವರೂಪಿ ಎಂಬುದನ್ನು ನೀವು ಬಲ್ಲಿರಿ. ಎಂದೇ, ಸತ್ಯಮಾರ್ಗದಲ್ಲಿ ನಡೆಯುವ ಪ್ರತಿಯೊಬ್ಬನೂ ಅವರಿಂದ ಜನಿಸಿದವನು ಎಂಬುದು ನಿಮಗೆ ವೇದ್ಯವಾಗಿರಬೇಕು.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ನನಗೆ ಬೆನ್ನು ತೋರಿಸಿ, ನನ್ನ ದರ್ಶನವನ್ನು ಬಯಸದೆ, ನನ್ನ ಮಾರ್ಗಬಿಟ್ಟವರನ್ನು ಧ್ವಂಸಮಾಡುವೆನು.”


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಇಂತಿರಲು, ಮತ್ತಷ್ಟೂ ಮಲಿನನಲ್ಲವೆ ನರಮಾನವನು? ಅಸಹ್ಯನು, ಅಕ್ರಮಿಯು, ಕೇಡನ್ನು ನೀರಿನಂತೆ ಕುಡಿಯುವವನು?


ಆಗ ಇಸ್ರಯೇಲರೆಲ್ಲರೂ ದಾವೀದನನ್ನು ಬಿಟ್ಟು ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಜೋರ್ಡನ್ ತಗ್ಗಿನಿಂದ ಜೆರುಸಲೇಮಿನವರೆಗೂ ಅವನ ಜೊತೆಯಲ್ಲೇ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು