Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 53:4 - ಕನ್ನಡ ಸತ್ಯವೇದವು C.L. Bible (BSI)

4 ದುರ್ಜನರು ನನ್ನ ಜನರನು ಕೂಳಿನಂತೆ ನುಂಗುವುದೇಕೆ? I ದೇವರನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ; ದೇವರನ್ನು ಪ್ರಾರ್ಥಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದುಷ್ಟತ್ವವನ್ನು ನಡಿಸುವವರು ತಿಳಿಯುವದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ದೇವರನ್ನು ಸ್ಮರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರು ಹೀಗೆನ್ನುತ್ತಾನೆ: “ಆ ದುಷ್ಟರಿಗೆ ಖಂಡಿತವಾಗಿ ಸತ್ಯವು ತಿಳಿದಿದೆ! ಆದರೆ ಅವರು ನನ್ನಲ್ಲಿ ಪ್ರಾರ್ಥಿಸುತ್ತಿಲ್ಲ. ಆಹಾರ ತಿನ್ನುವಂತೆ ಅವರು ನನ್ನ ಜನರನ್ನು ನಾಶಮಾಡಲು ಸಿದ್ಧರಾಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಅವರು ದೇವರನ್ನು ಸ್ಮರಿಸುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 53:4
7 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ಸರ್ವೇಶ್ವರಾ, ನಿಮ್ಮನ್ನು ಅರಿತುಕೊಳ್ಳದವರ ಮೇಲೆ ನಿಮ್ಮ ನಾಮವನ್ನು ಉಚ್ಚರಿಸದವರ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದುಬಿಡಿ. ಅವರು ಯಕೋಬ್ಯರನ್ನು ಕಬಳಿಸಿದ್ದಾರೆ ಹೌದು, ಪೂರ್ತಿಯಾಗಿ ಕಬಳಿಸಿಬಿಟ್ಟಿದ್ದಾರೆ ಅವರ ನಿವಾಸಗಳನ್ನು ನಾಶಮಾಡಿದ್ದಾರೆ.


ಕೇಡು ಮಾಡಬಂದರೆನಗೆ ಕೊಲೆಗಡುಕರು I ಎಡವಿಬಿದ್ದರು, ತಾವೇ ಅಳಿದುಹೋದರು II


ನೀನು ಕಂಡ ಮೃಗವೂ ಅದರ ಹತ್ತು ಕೊಂಬುಗಳೂ ಆ ವೇಶ್ಯೆಯನ್ನು ದ್ವೇಷಿಸುವವರನ್ನು ಸೂಚಿಸುತ್ತದೆ. ಅವರು ಅವಳನ್ನು ನಿರ್ಗತಿಕಳನ್ನಾಗಿ ಮಾಡುವರು, ಬೆತ್ತಲೆಯಾಗಿಸುವರು; ಅವಳ ಮಾಂಸವನ್ನು ಕಿತ್ತು ತಿನ್ನುವರು; ಅವಳನ್ನೇ ಬೆಂಕಿಯಲ್ಲಿ ಸುಟ್ಟುಬಿಡುವರು.


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ಮೂರ್ಖರೇ, ನಿಮಗೆ ಜ್ಞಾನೋದಯವಾಗುವುದಾವಾಗ? I ಪಶುಪ್ರಾಯರಾದ ಪ್ರಜೆಗಳು ಗಮನಿಸುವುದಾವಾಗ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು