ಕೀರ್ತನೆಗಳು 53:5 - ಕನ್ನಡ ಸತ್ಯವೇದವು C.L. Bible (BSI)5 ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಭಯಪಡುವದಕ್ಕೆ ಕಾರಣವಿಲ್ಲದಿದ್ದರೂ ಅವರು ಫಕ್ಕನೆ ಭಯಭ್ರಾಂತರಾದರು; ನಿಮಗೆ ಮುತ್ತಿಗೆಹಾಕಿದವರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ನೀವು ಅವರನ್ನು ಅಪಜಯಪಡಿಸಿದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆ ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು! ಅವರು ಇಸ್ರೇಲರ ಶತ್ರುಗಳು. ದೇವರು ಅವರನ್ನು ತಿರಸ್ಕರಿಸಿದ್ದಾನೆ. ಆದ್ದರಿಂದ ದೇವಜನರು ಅವರನ್ನು ಸೋಲಿಸುವರು, ದೇವರು ಆ ದುಷ್ಟರ ಎಲುಬುಗಳನ್ನು ಚದರಿಸಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಭಯವಿಲ್ಲದಿರುವಲ್ಲಿ ಅವರು ಭಯಭ್ರಾಂತರಾದರು; ಏಕೆಂದರೆ ನಿಮಗೆ ವಿರೋಧವಾಗಿ ದಂಡು ಇಳಿಸುವವರನ್ನು ದೇವರು ಚದರಿಸಿಬಿಟ್ಟಿದ್ದಾರೆ. ನೀವು ಅವರನ್ನು ನಾಚಿಕೆಪಡಿಸಿದ್ದೀರಿ. ಏಕೆಂದರೆ ದೇವರು ಅವರನ್ನು ತಿರಸ್ಕರಿಸಿದ್ದಾರೆ. ಅಧ್ಯಾಯವನ್ನು ನೋಡಿ |