ಕೀರ್ತನೆಗಳು 53:6 - ಕನ್ನಡ ಸತ್ಯವೇದವು C.L. Bible (BSI)6 ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ದೇವರು ತನ್ನ ಪ್ರಜೆಗೆ ಮರಳಿ ಸಿರಿಸಂಪದ I ನೀಡಲಿ ಯಕೋಬ ಮೇಣ್ ಇಸ್ರಯೇಲ ಜನತೆಗೆ ಹರ್ಷಾನಂದ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ, ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲರು ಹರ್ಷಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ದುರವಸ್ಥೆಯಿಂದ ತಪ್ಪಿಸಿದಾಗ ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲ್ಯರು ಹರ್ಷಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲಿಗೆ ಜಯವನ್ನು ತರುವನು! ಆಗ ದೇವರು ತನ್ನ ಜನರನ್ನು ಸೆರೆವಾಸದಿಂದ ಬರಮಾಡುವನು. ಯಾಕೋಬನೇ ಉಲ್ಲಾಸಿಸು! ಇಸ್ರೇಲೇ ಬಹು ಸಂತೋಷಪಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು. ಅಧ್ಯಾಯವನ್ನು ನೋಡಿ |