Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 54:6 - ಕನ್ನಡ ಸತ್ಯವೇದವು C.L. Bible (BSI)

6 ಸರ್ವಾಪತ್ತುಗಳಿಂದ ತಪ್ಪಿಸಿದೆ ಪ್ರಭು, ನನ್ನನು I ಕಂಡಿವೆ ನನ್ನ ಕಣ್ಗಳೇ ಶತ್ರುಗೊದಗಿದ ಸೋಲನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನೇ, ನೀನು ನನ್ನನ್ನು ಸರ್ವಾಪತ್ತುಗಳಿಂದ ಬಿಡಿಸಿ ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರೇ, ನಾನು ನಿನಗೆ ಸ್ವಇಚ್ಛೆಯಿಂದ ಯಜ್ಞಗಳನ್ನು ಅರ್ಪಿಸುವೆನು. ಯೆಹೋವನೇ, ನಿನ್ನ ಒಳ್ಳೆಯ ಹೆಸರನ್ನು ನಾನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ನಿಮಗೆ ಸ್ವಂತ ಇಚ್ಛೆಯಿಂದ ಬಲಿಯನ್ನು ಅರ್ಪಿಸುವೆನು. ಯೆಹೋವ ದೇವರೇ, ನಿಮ್ಮ ಒಳ್ಳೆಯ ಹೆಸರನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 54:6
14 ತಿಳಿವುಗಳ ಹೋಲಿಕೆ  

ನಿನ್ನುಪಕಾರವನು ಹೇ ದೇವಾ, ನಾ ಸದಾ ಸ್ಮರಿಸುವೆನು I ನಿನ್ನ ಶ್ರೇಷ್ಠ ನಾಮವನು ಭಕ್ತರ ಮುಂದೆ ಸ್ತುತಿಸುವೆನು II


ನಮ್ಮ ದೇವರನು ಹೊಗಳಿ ಹಾಡುವುದು ಉಚಿತ I ಆತನ ಸ್ತುತಿ ಮನೋಹರ, ಅದು ಬಲುಸೂಕ್ತ II


ಸತ್ಯಸ್ವರೂಪನಾದ ಸ್ವಾಮಿಗೆ ನನ್ನ ವಂದನೆ I ಪರಾತ್ಪರ ಪ್ರಭುವಿನ ನಾಮಕ್ಕೆ ಸ್ತುತಿಸಂಕೀರ್ತನೆ II


ಭಜಿಸುವರು ಸಜ್ಜನರು ನಿನ್ನಾ ಸಿರಿನಾಮವನು I ಬಾಳ್ವರು ಸುಮನಸ್ಕರು ಬಿಡದೆ ನಿನ್ನ ಸನ್ನಿಧಿಯನು II


ಸಮರ್ಪಿಸಲಿ ಆತನಿಗೆ ಕೃತಜ್ಞತಾ ಬಲಿಗಳನು I ಹಾಡಿಹೊಗಳಲಿ ಆತನಾ ಮಹತ್ಕಾರ್ಯಗಳನು II


ಅರ್ಪಿಸುವೆ ನಾ ನಿನಗೆ ಕೃತಜ್ಞತಾ ಬಲಿಗಳನು I ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು II


ಹೇ ಪ್ರಭೂ, ನಿನ್ನ ಗುಣಗಾನ ಮಂಗಳಕರ I ಪರಾತ್ಪರನೆ, ನಿನ್ನ ನಾಮಭಜನೆ ಹಿತಕರ II


ಹೇ ಪ್ರಭು, ಪರಾಕ್ರಮ ತೋರಿ, ಪರಮಪದಗಳಿಸಿಕೊ I ಕೀರ್ತಿಸುತ ನಿನ್ನ ಸಾಮರ್ಥ್ಯವನು, ಪೊಗಳುವೆನಿದೊ II


ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ II


ನೆರವು ನೀಡಲು ಪ್ರಭು ಎನ್ನಕಡೆ ಇಹನು I ಶತ್ರುಗಳತ್ತ ಜೇತಾರನಾಗಿ ನೋಡುವೆನು II


ನೆರವಾಗಿಹನು ನನಗೆ ಸ್ವಾಮಿ ಸರ್ವೇಶ್ವರ ಎಂದೇ ತಲೆತಗ್ಗಿಸಲಿಲ್ಲ ನಾನು ನಾಚಿಕೆಯಿಂದ ಗಟ್ಟಿಮಾಡಿಕೊಂಡೆ ಮುಖವನು ಕಗ್ಗಲ್ಲಿನ ಹಾಗೆ ಆಶಾಭಂಗಪಡಲಾರೆನೆಂದು ಗೊತ್ತು ನನಗೆ.


ಇಗೋ, ಸ್ವಾಮಿ ಸರ್ವೇಶ್ವರ ನಿಂತಿಹರು ನನಗೆ ನೆರವಾಗಿ ನಿರ್ಣಯಿಸುವವನು ಯಾರು ನನ್ನನ್ನು ಅಪರಾಧಿಯಾಗಿ? ನುಸಿತಿಂದ ವಸ್ತ್ರದಂತೆ ಅಳಿದುಹೋಗುವರವರು ಜೀರ್ಣವಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು