Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:13 - ಕನ್ನಡ ಸತ್ಯವೇದವು C.L. Bible (BSI)

13 ಆದರೆ ಇದನ್ನೆಲ್ಲಾ ನನಗೆ ಮಾಡಿದವನು ನೀನು I ನನಗೆ ಸರಿಯಾದವನು, ಗೆಳೆಯನು, ನನ್ನಾಪ್ತಮಿತ್ರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ನೀನು ನನಗೆ ಸ್ವಕೀಯನೂ ಆಪ್ತವಿುತ್ರನೂ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ನನಗೆ ಕೇಡುಮಾಡುತ್ತಿರುವವನು ನನ್ನ ಸಂಗಡಿಗನಾದ ನೀನೇ; ನನ್ನ ಸಹೋದ್ಯೋಗಿಯೂ ನನ್ನ ಸ್ನೇಹಿತನೂ ಆದ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ನನ್ನ ಜೊತೆಗಾರನೂ ನನ್ನ ಆಪ್ತನೂ, ನನಗೆ ಸಮನಾದವನೇ ವಿರೋಧವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:13
11 ತಿಳಿವುಗಳ ಹೋಲಿಕೆ  

ನೆರೆಯವನನ್ನು ನಂಬಬೇಡ, ಆಪ್ತನಲ್ಲಿ ಭರವಸೆ ಇಡಬೇಡ. ನಿನ್ನೊಡನೆ ಮಲಗುವ ಮಡದಿಯೊಂದಿಗೂ ಬಾಯಿಬಿಡಬೇಡ.


ಇದಲ್ಲದೆ ಅವನು ಶಾಂತಿಸಮಾಧಾನದ ಬಲಿದಾನ ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಬರಮಾಡಿಸಿದ್ದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದುದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.


ನಿಮ್ಮ ನಿಮ್ಮ ಗೆಳೆಯರ ವಿಷಯದಲ್ಲಿ ಎಚ್ಚರಿಕೆಯಾಗಿರಿ ಯಾರೇ ಆಗಲಿ, ತನ್ನ ಸಹೋದರನನ್ನೂ ನಂಬದಿರಲಿ. ಪ್ರತಿಯೊಬ್ಬ ಸೋದರನೂ ವಂಚಿಸುವುದರಲ್ಲಿ ಯಕೋಬನಿಗೆ ಸಮಾನ. ಒಬ್ಬೊಬ್ಬ ಗೆಳೆಯನೂ ತಿರುಗಾಡುತ್ತಾನೆ ಚಾಡಿಹೇಳುತ್ತಾ.


ನನ್ನಾಪ್ತಮಿತ್ರನು, ನನ್ನ ನಂಬಿಕೆಗೆ ಪಾತ್ರನು I ನನ್ನೊಡನೆ ಉಂಡವನು, ನನಗೆರಡು ಬಗೆದಿಹನು II


ಆ ದಿನಗಳಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟೇ ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಸಲಹೆಗಳನ್ನು ಮಾನ್ಯಮಾಡುತ್ತಿದ್ದರು.


“ಆದರೆ ಇಗೋ, ನನಗೆ ದ್ರೋಹ ಬಗೆಯುವವನು ನನ್ನೊಂದಿಗೆ ಇದೇ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದಾನೆ.


ಅವರ ಆ ಕೂಗನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿದನು. ‘ಹಾಸುಗಲ್ಲು’ ಎಂಬ ಕಟ್ಟೆಯ ಮೇಲಿದ್ದ ನ್ಯಾಯಪೀಠದ ಮೇಲೆ ಕುಳಿತುಕೊಂಡನು. ಯೆಹೂದ್ಯರ ಭಾಷೆಯಲ್ಲಿ ಆ ಸ್ಥಳಕ್ಕೆ ‘ಗಬ್ಬಥ’ ಎಂದು ಹೆಸರು.


ನೀನಾದರೋ ಪ್ರಭು ಕರುಣಿಸು, ಏಳ ಮಾಡೆನ್ನನು I ನಾನವರಿಗಾಗಿ ಮುಯ್ಯಿಗೆ ಮುಯ್ಯಿ ತೀರಿಸುವೆನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು