Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:19 - ಕನ್ನಡ ಸತ್ಯವೇದವು C.L. Bible (BSI)

19 ಆದಿಯಿಂದಾಳುವ ದೇವನು ಅವರ ಸೊಕ್ಕಡಗಿಸದೆ ಬಿಡನು I ಪರಿವರ್ತಿಸಲಾಗದು ದೇವಭಯವಿಲ್ಲದವರ ಹೃದಯವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅನಾದಿಕಾಲದಿಂದ ಆಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟು ಅವರನ್ನು ತಗ್ಗಿಸಿಬಿಡುವನು. ಸೆಲಾ ಅವರು ತಮ್ಮ ಸುಖವು ಕದಲದೆಂದುಕೊಂಡು ದೇವರಿಗೆ ಹೆದರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅನಾದಿಕಾಲದಿಂದ ಆಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟು ಅವರನ್ನು ತಗ್ಗಿಸಿಬಿಡುವನು. ಸೆಲಾ. ಅವರು ತಮ್ಮ ಸುಖವು ಕದಲದೆಂದುಕೊಂಡು ದೇವರಿಗೆ ಹೆದರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರು ನನಗೆ ಕಿವಿಗೊಡುವನು. ಅನಾದಿಕಾಲದ ರಾಜನು ನನಗೆ ಸಹಾಯ ಮಾಡುವನು. ನನ್ನ ವೈರಿಗಳು ತಮ್ಮ ಜೀವಿತಗಳನ್ನು ಪರಿವರ್ತಿಸಿಕೊಳ್ಳುವುದಿಲ್ಲ. ಅವರಿಗೆ ದೇವರಲ್ಲಿ ಭಯಭಕ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದಿಯಿಂದ ಸಿಂಹಾಸನಾರೂಢರಾಗಿರುವ ದೇವರು, ಅವರ ಮೊರೆಯನ್ನು ಕೇಳಿ ಅವರನ್ನು ತಗ್ಗಿಸುವರು, ಏಕೆಂದರೆ, ಅವರು ದೇವರಿಗೆ ಭಯಪಡುವುದಿಲ್ಲ. ದೇವರು ಬದಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:19
15 ತಿಳಿವುಗಳ ಹೋಲಿಕೆ  

ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.


“ಆಗ ದೀಪವನ್ನು ಹಿಡಿದುಕೊಂಡು ಜೆರುಸಲೇಮನ್ನೆಲ್ಲಾ ಹುಡುಕಿಬಿಡುವೆನು. ‘ಸರ್ವೇಶ್ವರ ಮೇಲನ್ನಾಗಲಿ, ಕೇಡನ್ನಾಗಲಿ ಏನನ್ನೂ ಮಾಡುವುದಿಲ್ಲ’ ಎಂದುಕೊಳ್ಳುವ ಮದ್ಯದ ಮಡ್ಡಿಯಂಥ ಜಡ ಮನಸ್ಕರನ್ನು ದಂಡಿಸುವೆನು.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಮೋವಾಬು ಚಿಕ್ಕತನದಿಂದಲೂ ನೆಮ್ಮದಿಯಾಗಿದೆ. ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ. ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ. ಅದು ಎಂದೂ ಸೆರೆಹೋಗಲಿಲ್ಲ. ಆದಕಾರಣ ಅದರ ರುಚಿ ಅದರಲ್ಲಿದೆ. ಅದರ ವಾಸನೆ ಮಾರ್ಪಡಲಿಲ್ಲ.


ಕೆಟ್ಟದ್ದನ್ನು ಮಾಡಲು ನರಮಾನವರು ತುಂಬ ಆಸಕ್ತಿ ಉಳ್ಳವರಾಗಿದ್ದಾರೆ. ಕೇಡಿಗೆ ತಕ್ಕ ದಂಡನೆಯನ್ನು ಕೂಡಲೆ ವಿಧಿಸದಿರುವುದೇ ಇದಕ್ಕೆ ಕಾರಣ.


ಎಲ್ಲಕ್ಕೂ ಮೊದಲೇ ಇರುವನಾತ, ಸಮಸ್ತಕ್ಕೂ ಆಧಾರಭೂತ.


ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಅರಸನ ಕೈಯಿಂದ ಬಿಡಿಸಲಾರದೆ ಹೋದಮೇಲೆ ಸರ್ವೇಶ್ವರ ಜೆರುಸಲೇಮನ್ನು ಆತನ ಕೈಯಿಂದ ಬಿಡಿಸಿ ಕಾಪಾಡಲು ಸಾಧ್ಯವೋ?’ ಎಂದು ಕೇಳಿದನು.


ಮೂಢರು ತಮ್ಮ ಉದಾಸೀನತೆಯಿಂದಲೆ ಹತರಾಗುವರು. ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೆ ನಾಶವಾಗುವರು.


ನಿನ್ನಚಲ ಪ್ರೀತಿಯಿಂದ ಧ್ವಂಸಮಾಡು ಶತ್ರುಗಳನು I ನಶಿಸಿಹಾಕು ಪ್ರಾಣವೈರಿಗಳನು, ನಾ ನಿನ್ನ ದಾಸನು II


ರಣರೌದ್ರನಾದನು ಇದನರಿತ ದೇವನು I ತೊರೆದನು ಅಸಹ್ಯದಿಂದ ಇಸ್ರಯೇಲರನು II


ದೇವಾ, ನೀನೆ ನಮ್ಮೆಲ್ಲರ ಜೀವೋದ್ಧಾರ I ದೂರದ ಸಾಗರ ಸೀಮೆಗಳಿಗೂ ಆಶಾಧಾರ I ಗಂಭೀರ ಕಾರ್ಯವೆಸಗಿ ನೀಡುವೆ ವಿಜಯದುತ್ತರ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು