Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:2 - ಕನ್ನಡ ಸತ್ಯವೇದವು C.L. Bible (BSI)

2 ನನ್ನ ಮನವಿಯನಾಲಿಸು, ದಯಪಾಲಿಸು ಸದುತ್ತರವನು I ಚಿಂತಾಕ್ರಾಂತನಾದ ನಾನು ಪ್ರಲಾಪಿಸುತ್ತಿರುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ಮೊರೆಯನ್ನು ಆಲಿಸಿ ಸದುತ್ತರವನ್ನು ದಯಪಾಲಿಸು. ನಾನು ನಿನ್ನೊಂದಿಗೆ ಮಾತಾಡುವೆನು; ನನಗಾಗಿರುವ ದುಃಖವನ್ನು ನಿನ್ನ ಮುಂದೆ ತೋಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನನ್ನು ಆಲೈಸಿರಿ, ನನಗೆ ಉತ್ತರಕೊಡಿರಿ. ನಾನು ನನ್ನ ಚಿಂತೆಯಿಂದ ದುಃಖಿಸುತ್ತಾ ಬೇಸರವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:2
12 ತಿಳಿವುಗಳ ಹೋಲಿಕೆ  

ಕಿಚುಗುಟ್ಟಿದೆ ನಾ ಬಾನಕ್ಕಿ-ಬಕಗಳಂತೆ ಗುಬ್ಬಳಿಸಿದೆ ನಾ ಪಾರಿವಾಳದಂತೆ ಕಂಗೆಟ್ಟೆ, ನಾ ಮೇಲೆ ಮೇಲಕ್ಕೆ ನೋಡುತಾ ಸರ್ವೇಶ್ವರಾ, ನಾನಿರುವೆ ಬಾಧೆಪಡುತಾ ನೀ ಎನಗೆ ನೆರವಾಗಲು ಬಾ ಎನ್ನುತಾ.


ಆದರೆನ್ನ ಮೊರೆಯು ದೇವನನು ಮುಟ್ಟಿರುವುದು ನಿಜ I ಎನ್ನ ಪ್ರಾರ್ಥನೆಗಾತ ಕಿವಿಗೊಟ್ಟಿರುವುದು ಸಹಜ II


ದೇವರನು ಸ್ಮರಿಸಿ ನಿಟ್ಟುಸಿರಿಡುತಿಹೆನು I ಹಂಬಲಿಸಿ ಮನದಲೇ ನಾ ಮರುಗುತಿಹೆನು II


ಕಿವಿಗೊಡು ದೇವಾ, ನನ್ನಾತ್ಮದ ಮೊರೆಗೆ I ಕಾಪಾಡು, ಶತ್ರುಗಳ ಭಯವಿದೆ ನನಗೆ II


ಗುರುಗುಟ್ಟುತ್ತೇವೆ ಕರಡಿಗಳಂತೆ, ಮುಲುಗುತ್ತೇವೆ ಪಾರಿವಾಳಗಳಂತೆ. ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಗದಿದೆ; ಜೀವೋದ್ಧಾರವನ್ನು, ನಿರೀಕ್ಷಿಸಿದರೂ ಅದು ನಮ್ಮಿಂದ ದೂರವಿದೆ.


ನನಗೆ ಕೋಟೆ ನೀನಲ್ಲವೇ? ನನ್ನ ಕೈ ಬಿಟ್ಟಿರುವೆ ಏಕೆ? I ಶತ್ರು ಬಾಧೆಯಿಂದ ಭಿಕಾರಿಯಂತೆ ನಾನಲೆಯಬೇಕೆ? II


ಬಾಗಿ ಕುಗ್ಗಿಹೋಗಿರುವೆ ಪ್ರಭು ಬಹಳವಾಗಿ I ದಿನವೆಲ್ಲ ಅಲೆಯುತ್ತಿರುವೆ ದುಃಖಭರಿತನಾಗಿ II


ಪಾಪ ನಿವೇದನೆ ಮಾಡದೆ ನಾ ಮೌನದಿಂದಿರಲು I ದಿನವೆಲ್ಲ ನರಳಿ ಸವೆದುಹೋದವು ನನ್ನೆಲುಬುಗಳು II


ಲಕ್ಷ್ಯವಿಡು, ಓ ಪ್ರಭು, ಎನ್ನ ನ್ಯಾಯವಾದ ಮೊರೆಗೆ I ಕಿವಿಗೊಡು, ನಿಷ್ಕಪಟ ಬಾಯಿಂದ ಬಂದ ಪ್ರಾರ್ಥನೆಗೆ II


ನನ್ನ ನಿಟ್ಟುಸಿರಿಗೂ ಮೊರೆಗೂ ಕಿವಿಮುಚ್ಚಿಕೊಳ್ಳಬೇಡ ಎಂದೆ ಆಗ ನೀನು ನನ್ನ ಧ್ವನಿಯನ್ನು ಕೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು