Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:21 - ಕನ್ನಡ ಸತ್ಯವೇದವು C.L. Bible (BSI)

21 ಅವನ ಬಾಯಿ ಬೆಣ್ಣೆಗಿಂತ ನಯ, ಆದರೆ ಹೃದಯ ಕಲಹಭರಿತ I ನುಡಿ ಎಣ್ಣೆಗಿಂತ ನುಣುಪು, ಆದರೆ ಬಿಚ್ಚುಗತ್ತಿಗಿಂತ ಹರಿತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವನ ಬಾಯಿ ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯವೇ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚುಕತ್ತಿಗಳೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನನ್ನ ವೈರಿಗಳು ನಯ ನಾಜೂಕಿನಿಂದ ಶಾಂತಿಯ ಕುರಿತು ಮಾತಾಡುವರು; ಅಂತರಂಗದಲ್ಲಿಯೇ ಯುದ್ಧಗಳ ಕುರಿತು ಆಲೋಚಿಸುವರು. ಅವರ ಮಾತುಗಳು ಬೆಣ್ಣೆಯಂತೆ ನುಣುಪಾಗಿದ್ದರೂ ಅವರ ಹೃದಯಗಳು ಬಿಚ್ಚುಗತ್ತಿಗಳೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನ ಬಾಯಿಯ ಮಾತುಗಳು ಬೆಣ್ಣೆಗಿಂತ ನುಣ್ಣಗಾಗಿವೆ; ಆದರೆ ಅವನ ಹೃದಯದಲ್ಲಿ ಕಾಳಗವಿದೆ; ಅವನ ಮಾತುಗಳು ಎಣ್ಣೆಗಿಂತ ನಯವಾಗಿವೆ; ಆದರೆ ಅವು ಬಿಚ್ಚುಗತ್ತಿಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:21
16 ತಿಳಿವುಗಳ ಹೋಲಿಕೆ  

ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II


ದುರುಳರೊಡನೆ ದೂಡಬೇಡ, ದುರ್ಜನರೊಡನೆ ವಿಸರ್ಜಿಸಬೇಡೆನ್ನನು I ಪರರಿಗವರು ನುಡಿವರು ಶಾಂತಿಯನು ಉದರದಲ್ಲಿಡುವರು ಕ್ರೋಧವನು II


ಸುಳ್ಳುನಾಲಿಗೆ ಹಗೆಮಾಡುತ್ತದೆ ಸತ್ಯವನ್ನು; ಹೊಗಳುಭಟ್ಟನ ಬಾಯಿ ತರುತ್ತದೆ ನಷ್ಟವನ್ನು.


ನಾಲಗೆಯೆಂಬ ಅಲಗನವರು ಮಸೆದಿಹರು I ನಂಜುಮಾತೆಂಬ ಅಂಬನು ಹೂಡಿಹರು II


ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II


ಗುರುದ್ರೋಹಿಯಾದ ಯೂದನು ಆಗ, “ಗುರುವೇ, ಅವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಅದು ನಿನ್ನ ಬಾಯಿಂದಲೇ ಬಂದಿದೆ,” ಎಂದರು.


ಕತ್ತಿ ಇರಿತದಂತೆ ದುಡುಕನ ಮಾತು; ಹುಣ್ಣಿಗೆ ಮದ್ದುಹಾಕಿದಂತೆ ಜ್ಞಾನಿಗಳ ಮಾತು.


ದಬ್ಬುವ ದುರಾಲೋಚನೆ ಅವರದು ಗಾದಿಯಿಂದ I ಅಬದ್ಧವಾಡುವುದೆಂದರೊ ಹಬ್ಬದಾನಂದ I ಹರಸುವರು ಅಧರದಿಂದ, ಶಪಿಸುವರು ಉದರದಿಂದ II


(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).


ಅವರ ಬಾಯಿ ಬೊಗಳುವ ಮಾತುಗಳನು ಕೇಳು I ಅವರ ತುಟಿಗಳು ಹರಿತ ಕತ್ತಿಕಠಾರಿಗಳು I ನಮಗಾರು ಕಿವಿಗೊಡರೆಂಬುದೆ ಅವರ ಗೋಳು II


ಅಲ್ಲದೆ ತನ್ನ ಸೈನಿಕರಿಗೆ, "ನೀವು ದಾವೀದನಿಗೆ, 'ಅರಸರು ನಿಮ್ಮನ್ನು ಮೆಚ್ಚಿಕೊಂಡಿದ್ದಾರೆ; ಅವರ ಎಲ್ಲ ಸೇವಕರಿಗೂ ನಿಮ್ಮ ಮೇಲೆ ಪ್ರೀತಿಯಿದೆ; ನೀವು ಅರಸರ ಅಳಿಯರಾಗಲೇಬೇಕು,” ಎಂದು ಪುಸಲಾಯಿಸಿರಿ,” ಎಂದು ಗುಟ್ಟಾಗಿ ತಿಳಿಸಿದನು.


ಇದಲ್ಲದೆ, ನಾನು ಈಗ ಸೇವೆಮಾಡಬೇಕೆಂದಿರುವುದು ರಾಜಪುತ್ರನ ಸನ್ನಿಧಿಯಲ್ಲಿ ಅಲ್ಲವೇ? ನಿಮ್ಮ ತಂದೆಯ ಸನ್ನಿಧಿಯಲ್ಲಿ ಸೇವೆಮಾಡಿದಂತೆ ನಿಮ್ಮ ಸನ್ನಿಧಿಯಲ್ಲಿ ಸೇವೆಮಾಡುವೆನು,” ಎಂದು ಉತ್ತರಕೊಟ್ಟನು.


ಅದು ನಿನ್ನ ಸಂಗಡ ಸವಿಮಾತಾಡೀತೆ? ನಿನಗೆ ವಿನಮ್ರ ವಿಜ್ಞಾಪನೆ ಮಾಡೀತೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು