Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:22 - ಕನ್ನಡ ಸತ್ಯವೇದವು C.L. Bible (BSI)

22 ಪ್ರಭುವಿನ ಮೇಲೆ ಹಾಕು ನಿನ್ನ ಚಿಂತಾಭಾರವನು I ಉದ್ಧರಿಸುವನು, ಸಜ್ಜನರನೆಂದಿಗೂ ಕದಲಗೊಡಿಸನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು. ಆತನು ನಿನ್ನನ್ನು ಉದ್ಧಾರ ಮಾಡುವನು. ಸಜ್ಜನರಿಗೆ ಸೋಲಾಗಲು ಯೆಹೋವನೆಂದಿಗೂ ಬಿಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರ ಮೇಲೆ ನಿಮ್ಮ ಭಾರವನ್ನು ಹಾಕಿರಿ. ಅವರು ನಿಮಗೆ ಆಧಾರವಾಗಿರುವರು. ದೇವರು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:22
23 ತಿಳಿವುಗಳ ಹೋಲಿಕೆ  

ನಿಮ್ಮ ಚಿಂತೆಯನ್ನೆಲ್ಲಾ ಅವರಿಗೇ ಬಿಟ್ಟುಬಿಡಿ. ನಿಮ್ಮ ಮೇಲೆ ಅವರಿಗೆ ಲಕ್ಷ್ಯವಿದೆ.


ಪ್ರಭುವಿಗೆ ಬಿಡು ಜೀವನಯಾತ್ರಾ ಚಿಂತೆಯನು I ಭರವಸೆಯಿಂದಿರು, ಆತನದನು ಸಾಗಿಸುವನು II


“ನಾನು ಹೇಳುವುದನ್ನು ಕೇಳಿ: ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ ಉಡುಪಿಗಿಂತ ದೇಹ ಮೇಲಾದುದಲ್ಲವೆ?


ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II


ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II


ಬಿದ್ದರೂ ಅವನೆದ್ದೇ ತೀರುವನು I ಪ್ರಭು ಅವನಿಗೆ ಊರುಗೋಲಾಗಿಹನು II


ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II


ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II


“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.


ನನ್ನಾತ್ಮ ನಿನಗಾತುಕೊಂಡಿದೆ I ನಿನ್ನ ಬಲಗೈ ನನಗಿಂಬಾಗಿದೆ II


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ನಿನ್ನ ಕಾಲೆಡವದಂತೆ ನೋಡುವನಾತ I ತೂಕಡಿಸಲಾರನು ನಿನ್ನ ಕಾಯುವಾತ II


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಕಪಟವಾಡುವ ತುಟಿಗಳನು ಪ್ರಭು ಕಡಿದುಬಿಡಲಿ I ಬಡಾಯಿಕೊಚ್ಚುವ ಜಿಹ್ವೆಯನು ಕತ್ತರಿಸಿಬಿಡಲಿ II


ಗುಟ್ಟಾದೆಡೆಯಿಂದ ಗುರಿಯಿಟ್ಟಿಹರು ನಿರಪರಾಧಿಗಳನೆ I ಅಂಜದೇ ಅಳುಕದೆ ಎಸೆವರು ಬಾಣಗಳನು ತಟ್ಟನೆ II


ಹೀಗಿರಲು ಸರ್ವಶಕ್ತರಾದ ಸರ್ವೇಶ್ವರನ ಮಾತನ್ನು ಕೇಳಿ : “ಅಕಟಾ, ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಶೋಧಿಸುವೆನು ಪುಟಕ್ಕೆ ಹಾಕಿ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು