Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:23 - ಕನ್ನಡ ಸತ್ಯವೇದವು C.L. Bible (BSI)

23 ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕರು. ನಾನಂತೂ ನಿನ್ನನ್ನೇ ನಂಬಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೇವರೇ, ನೀನು ದುಷ್ಟರನ್ನು ಪಾತಾಳಕ್ಕೆ ದಬ್ಬಿಬಿಡುವೆ. ಕೊಲೆಪಾತಕರೂ ವಂಚಕರೂ ತಮ್ಮ ಅರ್ಧಾಯುಷ್ಯವಾದರೂ ಬದುಕರು. ನಾನಾದರೊ ನಿನ್ನನ್ನೇ ನಂಬಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:23
19 ತಿಳಿವುಗಳ ಹೋಲಿಕೆ  

ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ಬಾಳುವರು ದೀರ್ಘಕಾಲ; ದುರುಳ ಜನರ ಜೀವಮಾನವೋ ಅಲ್ಪಕಾಲ.


ಹುಸಿ ನುಡಿವವರನು ಪ್ರಭು, ನೀ ನಾಶಮಾಡುವೆ I ಹಿಂಸಕರನು, ವಂಚಕರನು ನೀ ಹೇಸಿಬಿಡುವೆ II


ಅವನ ಬುಡ ಒಣಗುವುದು ಕಾಲಕ್ಕೆ ಮುಂಚೆ ಪಚ್ಚೆಪಸಿರಾಗದು ಅವನ ಕೊಂಬೆ.


ನಾ ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ನನ್ನಾತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ; ನನ್ನ ಪಾಪಗಳನ್ನೆಲ್ಲಾ ನೀ ಹಾಕಿರುವೆ ನಿನ್ನ ಬೆನ್ನ ಹಿಂದೆ.


ದುರ್ನಡತೆಯಲ್ಲೇ ಆಗಲಿ, ಬುದ್ಧಿಹೀನತೆಯಲ್ಲೇ ಆಗಲಿ ಮಿತಿಮೀರಿ ವರ್ತಿಸುವುದು ಸಲ್ಲ. ಕಾಲ ಬರುವ ಮೊದಲೇ ಸಾವಿಗೆ ತುತ್ತಾಗಬೇಡ.


ಜಾರು ನೆಲದಲಿ ಆ ಜನರನು ನೀ ನಿಲ್ಲಿಸಿರುವೆ I ನಿಶ್ಚಯವಾಗಿ ನೀ ಬೀಳಿಸಿ ಅವರನು ನಾಶಮಾಡುವೆ II


ನರಕ ಪಾತಾಳಗಳಿಗೆ ತೃಪ್ತಿಯೇ ಇಲ್ಲ; ಮನುಷ್ಯನ ಕಣ್ಣುಗಳಿಗೂ ತೃಪ್ತಿಯಿಲ್ಲ.


ಸರ್ವೇಶ್ವರನ ಕಣ್ಣಿಗೆ ನರಕಪಾತಾಳಗಳೇ ಬಟ್ಟಬಯಲಾಗಿರಲು; ನರಮಾನವರ ಹೃದಯ ಆತನಿಗೆ ಮುಚ್ಚುಮರೆಯೇ?


ಹಸುರಿರಲಿ ಒಣಗಿರಲಿ, ಒಲೆ ಪಾಲಾಗಲಿ ಮುಳ್ಳಿನಂತೆ I ನಿಶ್ಯೇಷವಾಗಲಿ ದೇವಕೋಪಾಗ್ನಿಗೆ ಸಿಲುಕಿದಂತೆ II


ಶತ್ರುಗಾಗದಿರಲಿ ಸಡಗರ I ನನಗೊದಗದಿರಲಿ ಮುಜುಗರ II


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತಸಂಭಾಷಣೆಗಾಗಿಯೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ, ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದುಕೊಂದನು.


ನಮ್ಮ ಪ್ರಾಣವನ್ನಾತ ಉಳಿಸಿದನಯ್ಯಾ I ಕಾಲೆಡವದಂತೆ ಕಾಪಾಡಿದನಯ್ಯಾ II


ಅಚಲನಾಗಿರುವನು ನೀತಿವಂತನು I ಮರೆಯಲಾರರು ಎಂದಿಗೂ ಆತನನು II


ನಿನ್ನ ಕಾಲೆಡವದಂತೆ ನೋಡುವನಾತ I ತೂಕಡಿಸಲಾರನು ನಿನ್ನ ಕಾಯುವಾತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು