Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:3 - ಕನ್ನಡ ಸತ್ಯವೇದವು C.L. Bible (BSI)

3 ಶತ್ರುಗರ್ಜನೆಯಿಂದ, ದುರುಳರ ಹಿಂಸೆಯಿಂದ I ಅವರೆನಗೆ ಬರಮಾಡಿರುವ ಆತಂಕದಿಂದ I ದ್ವೇಷಿಸುತಿಹರೆನ್ನನು ಕೋಪಾವೇಶದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ, ಹೊಯ್ದಾಡುತ್ತಾ ನರಳುತ್ತಿದ್ದೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ, ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ ಹೊಯ್ದಾಡುತ್ತಾ ನರಳುತ್ತೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ವೈರಿಗಳು ನನ್ನ ಬಗ್ಗೆ ಕೆಟ್ಟದ್ದನ್ನೇ ಹೇಳಿದರು. ಆ ದುಷ್ಟರು ನನ್ನ ಮೇಲೆ ಅಬ್ಬರಿಸಿದರು. ನನ್ನ ವೈರಿಗಳು ಕೋಪದಿಂದ ನನ್ನ ಮೇಲೆ ಆಕ್ರಮಣ ಮಾಡಿದರು. ಅವರು ನನ್ನ ಮೇಲೆ ಆಪತ್ತುಗಳನ್ನು ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಶತ್ರುವಿನ ಗರ್ಜನೆಯಿಂದಲೂ ದುಷ್ಟರ ಬೆದರಿಕೆಯಿಂದಲೂ ನರಳುತ್ತೇನೆ. ಏಕೆಂದರೆ ಅವರು ಅಪರಾಧವನ್ನು ನನ್ನ ಮೇಲೆ ಬರಮಾಡಿ, ಕೋಪದಿಂದ ನನ್ನನ್ನು ಹಗೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:3
12 ತಿಳಿವುಗಳ ಹೋಲಿಕೆ  

ಸುಳ್ಳುಸಾಕ್ಷಿಗಳೆದ್ದಿಹರು ನನಗೆ ವಿರುದ್ಧ I ಹೊರಿಸುತಿಹರು ನನಗೇ ತಿಳಿಯದ ಅಪರಾಧ II


ತಳ್ಳಬೇಡೆನ್ನನು ವೈರಿಗಳ ವಶಕ್ಕೆ I ಸುಳ್ಳುಸಾಕ್ಷಿಗಳು, ಕ್ರೂರಿಗಳವರೆನಗೆ II


ಇತ್ತ ಮುಖ್ಯಯಾಜಕರೂ ಉಚ್ಛನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಸುಳ್ಳುಸಾಕ್ಷಿಯನ್ನು ಹುಡುಕುತ್ತಿದ್ದರು.


ಕೇಡು ಮಾತು, ಕೆಣಕು ಮಾತು ಅವರದು I ಜೊತೆಗೆ ಬಲಾತ್ಕಾರದ ಸೊಕ್ಕು ಮಾತು II


“ಹಿಡಿಯಿರಿ ಬೆನ್ನಟ್ಟಿ, ದೇವನವನನ್ನು ಕೈಬಿಟ್ಟಿಹನು I ರಕ್ಷಿಸುವಂಥವರಾರು ಇನ್ನಿಲ್ಲ” ಎನ್ನುತಿಹರು II


ಗರ್ವಿಗಳು ನಿಂತಿಹರು ನನಗೆದುರಾಗಿ I ಕ್ರೂರಿಗಳು ಕಾದಿಹರೆನ್ನ ಕೊಲೆಗಾಗಿ I ಅವರಲಿಲ್ಲ ಮಾನ್ಯತೆ ದೇವರಿಗಾಗಿ II


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


:ಒಡೆಯರು ನನ್ನನ್ನು ಅಪರಾಧಿಯೆಂದೆಣಿಸದಿರಲಿ; ನನ್ನ ಒಡೆಯರು ಜೆರುಸಲೇಮನ್ನು ಬಿಟ್ಟುಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಅವರು ನೆನಸದಿರಲಿ, ಲಕ್ಷಿಸದಿರಲಿ.


ಆಗ ಅಬ್ಷಾಲೋಮನು‍, “ನೋಡಿ, ನಿಮ್ಮ ವ್ಯಾಜ್ಯ ಒಳ್ಳೆಯದು ಹಾಗು ನ್ಯಾಯವಾದದ್ದು. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ರಾಜಪ್ರತಿನಿಧಿ ಒಬ್ಬನೂ ನೇಮಕವಾಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು