Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 56:1 - ಕನ್ನಡ ಸತ್ಯವೇದವು C.L. Bible (BSI)

1 ಕರುಣೆತೋರು ದೇವಾ, ಜನರೆನ್ನ ಬೆನ್ನಟ್ಟಿ ಬರುತಿಹರು I ದಿನವೆಲ್ಲ ಕದನ ಮಾಡಿ ಶತ್ರುಗಳೆನ್ನ ಬಾಧಿಸುತಿಹರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ಕರುಣಿಸು; ನರರು ನನ್ನನ್ನು ನುಂಗಿಬಿಡಬೇಕೆಂದು ಎದ್ದಿದ್ದಾರೆ. ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ನನ್ನನ್ನು ಕರುಣಿಸು; ವೈರಿಗಳು ನನ್ನ ಮೇಲೆ ಆಕ್ರಮಣಮಾಡಿದ್ದಾರೆ. ಅವರು ಸತತವಾಗಿ ನನ್ನನ್ನು ಬೆನ್ನಟ್ಟಿ ಹೋರಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ ಕರುಣಿಸು, ಏಕೆಂದರೆ ಮನುಷ್ಯರು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ದಿನವೆಲ್ಲಾ ವಿರೋಧಿಸುತ್ತಾ ನನ್ನನ್ನು ಬಾಧಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 56:1
25 ತಿಳಿವುಗಳ ಹೋಲಿಕೆ  

ಆದರೆ ಆ ಫಿಲಿಷ್ಟಿಯ ರಾಜರುಗಳು ಅವನ ಮೇಲೆ ಕೋಪಗೊಂಡು, :ಈ ಮನುಷ್ಯನನ್ನು ಕಳುಹಿಸಿಬಿಡು; ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ್ದ ಸ್ಥಳದಲ್ಲೇ ವಾಸಿಸಲಿ; ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೇ ಶತ್ರುವಾಗಿ ನಿಂತಾನು. ಫಿಲಿಷ್ಟಿಯರ ತಲೆಗಳನ್ನು ಕಡುಯುವುದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ?


ಶತ್ರುಗಳಿಂದ ದೇವಾ, ತಪ್ಪಿಸು I ಎದುರಾಳಿಗಳಿಂದೆನ್ನ ರಕ್ಷಿಸು II


ಸಂಕಟದಲಿ ನಾ ಸಿಲುಕಿಕೊಂಡಿರುವೆ I ಕಣ್ಣುಗುಡ್ಡೆಗಳಿದೋ ಸೇದಿಹೋಗಿವೆ I ದೇಹಾತ್ಮಗಳೆರಡು ಕುಗ್ಗಿಹೋಗಿವೆ II


ನೀಡು ದೇವಾ ರಕ್ಷಣೆಯನು I ನಾ ನಿನಗೆ ಶರಣಾಗತನು II


ಕೈಬಿಟ್ಟೆ ದೇವಾ, ನಮ್ಮನು ಕೈಬಿಟ್ಟೆ I ಕೋಪದಿಂದೆಮ್ಮನು ತಳ್ಳಿ ಕೆಡವಿಬಿಟ್ಟೆ I ಉದ್ಧಾರವಾಗ್ವೆವು ನೀ ಮರಳಿ ಬೆಂಗೊಡೆ II


ಕೇಡು ಮಾಡಬಂದರೆನಗೆ ಕೊಲೆಗಡುಕರು I ಎಡವಿಬಿದ್ದರು, ತಾವೇ ಅಳಿದುಹೋದರು II


ಅಳಿದುಹೋಗುವಂಥದ್ದು ಅಮರತ್ವವನ್ನೂ ಮರ್ತ್ಯವಾದುದು ಅಮರ್ತ್ಯವನ್ನೂ ಧರಿಸಿಕೊಂಡಾಗ ಪವಿತ್ರಗ್ರಂಥದ ಈ ವಾಕ್ಯ ನೆರವೇರುವುದು:


ಇಸ್ರಯೇಲನ್ನು ಕಬಳಿಸಲಾಗಿದೆ. ಈಗದು ಅನ್ಯಜನಾಂಗಗಳ ಮಧ್ಯೆ ಯಾರಿಗೂ ಬೇಡವಾದ ಮಡಕೆಯಂತಿದೆ.


ನಿನ್ನನ್ನು ನೋಡಿ ಶತ್ರುಗಳೆಲ್ಲರು ಕಟಕಟನೆ ಹಲ್ಲು ಕಡಿಯುತ್ತಾರಲ್ಲಾ ಬಾಯಿ ಕಿಸಿದು ! “ಹಾ, ಆಕೆಯನ್ನು ಕಬಳಿಸಿಬಿಟ್ಟೆವು ಈ ದಿನಕ್ಕಾಗಿಯೆ ನಾವು ಕಾದಿದ್ದೆವು ಈಗ ಅದನ್ನು ಕಣ್ಣಾರೆ ಕಂಡೆವು” ಎಂದು ಕೊಚ್ಚಿಕೊಳ್ಳುತ್ತಾರಲ್ಲಾ !


ಸ್ವಾಮಿಯೇ ಶತ್ರುವಾಗಿ ಕಬಳಿಸಿದ ಇಸ್ರಯೇಲನ್ನು ನಾಶಮಾಡಿದ ಅದರ ಅರಮನೆಗಳೆಲ್ಲವನ್ನು ನೆಲಸಮಗೊಳಿಸಿದ ಅದರ ಕೋಟೆಕೊತ್ತಲಗಳನ್ನು ಯಥೇಚ್ಛವಾಗಿಸಿದ ಯೆಹೂದ ನಾಡಿನ ಗೋಳಾಟವನ್ನು.


ಸ್ವಾಮಿ ಯಕೋಬಿನ ನಿವಾಸಿಗಳನ್ನು ನಾಶಪಡಿಸಿಹನು, ರೌದ್ರದಿಂದ ಯೆಹೂದ ಕೋಟೆಗಳನ್ನು ನೆಲಸಮವಾಗಿಸಿಹನು, ರಾಜ್ಯವನ್ನೂ ಅದರ ಪಾಲಕರನ್ನೂ ನೀಚಸ್ಥಿತಿಗೆ ಇಳಿಸಿಹನು.


ಪಾತಾಳಕ್ಕಿಳಿಯುವವರನ್ನು ನರಕ ನುಂಗುವಂತೆ ಅವರನ್ನು ಜೀವಸಹಿತ ಪೂರ್ತಿಯಾಗಿ ಕಬಳಿಸಿಬಿಡೋಣ ಬಾ;


ನಿನ್ನಚಲ ಪ್ರೀತಿಯಿಂದ ಧ್ವಂಸಮಾಡು ಶತ್ರುಗಳನು I ನಶಿಸಿಹಾಕು ಪ್ರಾಣವೈರಿಗಳನು, ನಾ ನಿನ್ನ ದಾಸನು II


ಫರೋಹನನ್ನೂ ಅವನ ಸೈನ್ಯವನ್ನೂ ಆ ಕಡಲಲ್ಲಿ ಮುಳುಗಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಈಜಿಪ್ಟಿನ ಚೊಚ್ಚಲುಗಳನು ಸಂಹರಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಉರಿಗೊಳ್ಳುತಿದ್ದರು ಕಡುಗೋಪದಿಂದ ಖಂಡಿತ I ನುಂಗಿಬಿಡುತ್ತಿದ್ದರು ನಮ್ಮನ್ನು ಜೀವಸಹಿತ II


ಜನನಾಯಕರೇ, ನ್ಯಾಯಬದ್ಧವೊ ನಿಮ್ಮ ತೀರ್ಪುಗಳು I ವ್ಯಾಜ್ಯಗಳನು ಬಗೆಹರಿಸುತ್ತವೆಯೆ ನಿಮ್ಮ ನಿರ್ಣಯಗಳು? II


ತಮ್ಮಾಸೆ ಕೈಗೂಡಿತೆನಲು ಅವರಿಗಿರಬಾರದು ಅವಕಾಶ I ಅವನನು ಕಬಳಿಸಿಬಿಟ್ಟೆವು ಎಂದು ಕೊಚ್ಚಿಕೊಳ್ಳುವ ಸಂತೋಷ II


ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II


ಭೂಮಿ ಬಾಯ್ದೆರೆದು ನುಂಗಿತು ದಾತಾನನನು I ಮುಚ್ಚಿಬಿಟ್ಟಿತು ಅಭಿರಾಮನ ಕಡೆಯವರನು II


ಪ್ರೀತಿಯಿಂದ ನೆರವಾಗುವನು ದೇವನೆನಗೆ I ಶತ್ರುಗಳಿಗಾದ ಸೋಲನು ತೋರಿಸುವನೆನಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು