Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 56:10 - ಕನ್ನಡ ಸತ್ಯವೇದವು C.L. Bible (BSI)

10 ನಾ ಹೆಮ್ಮೆಪಡುವುದು ದೇವನಲಿ, ಆತನ ವಾಗ್ದಾನದಲಿ I ನಾ ಹೆಮ್ಮೆಪಡುವುದು ಪ್ರಭುವಿನಲಿ, ಆತನ ವಾಗ್ದಾನದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. ಯೆಹೋವನ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರಲ್ಲಿ ಹೆಚ್ಚಳಪಟ್ಟು ಹಾಡಿ ಹರಸುತ್ತೇನೆ. ಯೆಹೋವನಲ್ಲಿ ಹೆಚ್ಚಳಪಟ್ಟು ಹಾಡಿಹರಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ದೇವರನ್ನು ಆತನ ವಾಗ್ದಾನಕ್ಕಾಗಿ ಕೊಂಡಾಡುವೆನು. ಯೆಹೋವನು ನನಗೆ ಮಾಡಿರುವ ವಾಗ್ದಾನಕ್ಕಾಗಿ ನಾನು ಆತನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ದೇವರಲ್ಲಿಯೂ ದೇವರ ವಾಕ್ಯದಲ್ಲಿಯೂ ಹೆಮ್ಮೆಪಡುವೆನು. ಹೌದು, ದೇವರಲ್ಲಿಯೂ ಯೆಹೋವ ದೇವರ ವಾಕ್ಯದಲ್ಲಿಯೂ ಹೆಮ್ಮೆಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 56:10
10 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಹೀಗೆ ನೀವು ಲೋಕದಲ್ಲಿ ಆಶಾಪಾಶಗಳಿಂದ ಉಂಟಾಗುವ ಭ್ರಷ್ಟಾಚಾರದಿಂದ ತಪ್ಪಿಸಿಕೊಂಡು ದೈವಿಕಸ್ವಭಾವದಲ್ಲಿ ಪಾಲುಗಾರರಾಗುವಂತೆ, ದೇವರು ಅಮೂಲ್ಯವೂ ಅತ್ಯುತ್ತಮವೂ ಆದ ವಾಗ್ದಾನಗಳನ್ನು ಅನುಗ್ರಹಿಸಿದ್ದಾರೆ.


ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


ಗರ್ಭಗುಡಿಯಿಂದಲೇ ದೇವನಿಂತೆಂದನು; “ಜಯಶೀಲ ನಾನು, ಹಂಚುವೆನು ಶೆಖೆಮನು I ಅಳೆದು ಕೊಡುವೆನು ಸುಖೋತೆಂಬ ಬಯಲನು II


ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ಹೆಮ್ಮೆ ಪಡುವೆನು ಆತನಿತ್ತ ವಾಗ್ದಾನಕೆ I ನರಮಾನವರು ಏನು ಮಾಡಿಯಾರೆನಗೆ? II


ನನ್ನ ಅಣ್ಣ ಏಸಾವನು ಬಂದು ನನ್ನನ್ನೂ ನನ್ನ ಮಕ್ಕಳನ್ನೂ ಅವರ ತಾಯಂದಿರನ್ನೂ ಕೊಲ್ಲುವನೋ ಏನೋ ಎಂಬ ಭಯ ನನಗಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಯೇಲರ ಅರಸನೆಂದು ನೆನಸಿ, ಅವನಿಗೆ ವಿರುದ್ಧ ಯುದ್ಧಮಾಡುವುದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಂಡನು. ಆಗ ದೇವರಾದ ಸರ್ವೇಶ್ವರ ಅವನಿಗೆ ನೆರವಾಗಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.


ಪ್ರಭು ನನ್ನ ಕಡೆ ಇರಲು ಭಯಪಡೆನು I ನನಗೇನು ಮಾಡಿಯಾನು ಮನುಜನು? II


ಪ್ರಭು ನಮ್ಮ ಪರ ಇಲ್ಲದಿದ್ದರೆ ಏನಾಗುತ್ತಿತ್ತು? I ಇಸ್ರಯೇಲರೇ ಹೇಳಲಿ ಆ ದುರ್ಗತಿಯನ್ನು ಕುರಿತು II


ಪ್ರಭು ನಮ್ಮ ಪರ ಇಲ್ಲದಿದ್ದರೆ ಏನಾಗುತ್ತಿತ್ತು? I ಜನರೆಮಗೆ ವಿರುದ್ಧ ಎದ್ದಾಗ ಏನಾಗುತ್ತಿತ್ತು? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು