Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 56:12 - ಕನ್ನಡ ಸತ್ಯವೇದವು C.L. Bible (BSI)

12-13 ನಿನ್ನ ಮುಂದೆ ಜೀವನ್ ಜ್ಯೋತಿಯಲಿ ನಾ ನಡೆಯಮಾಡಿರುವೆ I ಮೃತ್ಯುವಿನಿಂದೆನ್ನ ಪ್ರಾಣವನು ನೀ ಮುಕ್ತಗೊಳಿಸಿರುವೆ I ಜಾರಿ ಬೀಳದಂತೆನ್ನ ಪಾದಗಳನು ಕಾದಿರಿಸಿರುವೆ II ಎಂದೇ ನಿನಗೆ ಹೊತ್ತ ಹರಕೆಗಳನು ಸಲ್ಲಿಸುವೆ I ಕೃತಜ್ಞತಾಬಲಿಗಳನು ದೇವಾ, ನಿನಗರ್ಪಿಸುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದೇವರೇ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇವರೇ, ನಾನು ನಿನಗೆ ವಿಶೇಷ ಹರಕೆಗಳನ್ನು ಮಾಡಿದ್ದೇನೆ. ನಾನು ಮಾಡಿದ ಹರಕೆಗಳನ್ನು ಸಲ್ಲಿಸುವೆನು. ನಾನು ನಿನಗೆ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನ ದೇವರೇ ನಾನು ನಿಮಗೆ ಸಲ್ಲಿಸಿದ ಹರಕೆಗಳಿಗೆ ಅಧೀನವಾಗಿದ್ದೇನೆ. ನಾನು ಉಪಕಾರ ಸ್ತುತಿಯ ಕಾಣಿಕೆಗಳನ್ನು ನಿಮಗೆ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 56:12
16 ತಿಳಿವುಗಳ ಹೋಲಿಕೆ  

ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ II


ನಡೆದುಕೊಳ್ಳುವೆನು ಶಪಥ ಮಾಡಿರುವಂತೆ I ನಿನ್ನ ನೀತಿವಿಧಿಗಳನು ಪಾಲಿಪೆನು ಅದರಂತೆ II


ನಿಮ್ಮ ದೇವನಾದ ಸ್ವಾಮಿಗೆ ಸಲ್ಲಿಸಿರಿ ಹೊತ್ತ ಹರಕೆ I ಸುತ್ತಣರೆಲ್ಲರು ಸಮರ್ಪಿಸಲಿ ಭಯಂಕರನಿಗೆ ಕಾಣಿಕೆ II


ಹೇ ಪ್ರಭು, ಪರಾಕ್ರಮ ತೋರಿ, ಪರಮಪದಗಳಿಸಿಕೊ I ಕೀರ್ತಿಸುತ ನಿನ್ನ ಸಾಮರ್ಥ್ಯವನು, ಪೊಗಳುವೆನಿದೊ II


“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ಪ್ರಭು ನನ್ನ ಕಡೆ ಇರಲು ಭಯಪಡೆನು I ನನಗೇನು ಮಾಡಿಯಾನು ಮನುಜನು? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು