Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 56:4 - ಕನ್ನಡ ಸತ್ಯವೇದವು C.L. Bible (BSI)

4 ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ಹೆಮ್ಮೆ ಪಡುವೆನು ಆತನಿತ್ತ ವಾಗ್ದಾನಕೆ I ನರಮಾನವರು ಏನು ಮಾಡಿಯಾರೆನಗೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಮಾಡುವದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ದೇವರಲ್ಲಿ ಭರವಸೆ ಇಟ್ಟಿರುವುದರಿಂದ ಜನರಿಗೆ ಭಯಪಡುವುದಿಲ್ಲ. ಕ್ಷಣಿಕರಾದ ಮಾನವರು ನನಗೇನು ಮಾಡಬಲ್ಲರು? ದೇವರ ವಾಗ್ದಾನಕ್ಕಾಗಿ ಆತನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರ ಮಾತುಗಳಲ್ಲಿ ನಾನು ಹೆಮ್ಮೆಪಡುವೆನು. ದೇವರಲ್ಲಿಯೇ ಭರವಸೆ ಇಡುವೆನು, ನಾನು ಭಯಪಡುವುದಿಲ್ಲ. ಸಾಯುವ ಮನುಷ್ಯನು ನನಗೇನು ಮಾಡಬಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 56:4
18 ತಿಳಿವುಗಳ ಹೋಲಿಕೆ  

ಆದ್ದರಿಂದ, “ಸರ್ವೇಶ್ವರ ನನಗೆ ಸಹಾಯಕ, ನಾನು ಭಯಪಡೆನು; ಮಾನವನು ನನಗೇನು ಮಾಡಬಲ್ಲನು?” ಎಂದು ನಾವು ಧೈರ್ಯದಿಂದ ಹೇಳಲು ಸಾಧ್ಯ.


ಪ್ರಭು ನನ್ನ ಕಡೆ ಇರಲು ಭಯಪಡೆನು I ನನಗೇನು ಮಾಡಿಯಾನು ಮನುಜನು? II


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಈಜಿಪ್ಟಿನವರು ಕೇವಲ ಮನುಷ್ಯರೇ ಹೊರತು ದೇವರಲ್ಲ. ಅವರ ಅಶ್ವಗಳು ಮೂಳೆಮಾಂಸವೇ ಹೊರತು ಆಧ್ಯಾತ್ಮಿಕ ದಿವ್ಯಶಕ್ತಿಯಲ್ಲ. ಸರ್ವೇಶ್ವರ ಕೈಯೆತ್ತುವಾಗ ಅದಕ್ಕೆ ವಿರುದ್ಧ ಸಹಾಯ ಮಾಡಿದ ಅವನು ಮುಗ್ಗರಿಸುವನು. ಆ ಸಹಾಯ ಪಡೆದ ಅವನು ಬಿದ್ದುಹೋಗುವನು. ಎಲ್ಲರೂ ಒಟ್ಟಿಗೆ ಅಳಿದುಹೋಗುವರು.


ಸತ್ಯವೇ ನಿನ್ನ ವಾಕ್ಯದ ಸಾರಾಂಶ I ನಿನ್ನಯ ನೀತಿವಿಧಿಗಳೆಲ್ಲವೂ ಅನಿಶ II


ಪ್ರಭುವಿನ ಈ ವಾಗ್ದಾನ ಪ್ರಮಾಣಬದ್ಧ I ಏಳ್ಮಡಿ ಪುಟಕ್ಕಿಟ್ಟ ಬೆಳ್ಳಿಯಷ್ಟು ಶುದ್ಧ II


ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II


ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಕರೆಯಲಾಗಿದೆ. ಹೀಗೆ ಪವಿತ್ರಗ್ರಂಥದಲ್ಲೇ ಲಿಖಿತವಾಗಿರುವುದು ನಿರರ್ಥಕವೇನೂ ಅಲ್ಲ.


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.


ಯೆಹೋಷಾಫಾಟನು ಇದನ್ನು ಕೇಳಿ ಭಯಪಟ್ಟು, ಸರ್ವೇಶ್ವರನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿದನು.


ಆಗ ಯೆಹೂದ್ಯರು ಸರ್ವೇಶ್ವರನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಕೂಡಿಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು