ಕೀರ್ತನೆಗಳು 56:8 - ಕನ್ನಡ ಸತ್ಯವೇದವು C.L. Bible (BSI)8 ನನ್ನ ಅಲೆಮಾರಿತನದ ಲೆಕ್ಕವಿಟ್ಟಿರುವೆ ನಿನ್ನಲಿ I ನನ್ನ ಕಣ್ಣೀರನು ತುಂಬಿಡು ನಿನ್ನ ಬುದ್ದಲಿಯಲಿ I ಅದರ ಕತೆ ಬರೆದಿದೆಯಲ್ಲವೆ ನಿನ್ನ ಪುಸ್ತಕದಲಿ? II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆ; ಅದರ ವಿಷಯ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನನಗಾಗಿರುವ ದುಃಖವು ನಿನಗೆ ಗೊತ್ತಿದೆ. ನಾನು ಎಷ್ಚು ಅತ್ತಿರುವೆನೆಂದು ನಿನಗೆ ಗೊತ್ತಿದೆ. ನನ್ನ ಕಣ್ಣೀರಿಗೆ ನೀನು ಖಂಡಿತವಾಗಿ ಲೆಕ್ಕವಿಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನನ್ನ ಗೋಳಾಟವನ್ನು ಎಣಿಕೆ ಮಾಡಿರಿ, ನಿಮ್ಮ ಸುರುಳಿಯಲ್ಲಿ ನನ್ನ ಕಣ್ಣೀರ ಲೆಕ್ಕಮಾಡಿರಿ, ಅವು ನಿಮ್ಮ ಗ್ರಂಥದಲ್ಲಿ ಬರೆದಿದೆಯಲ್ಲವೇ? ಅಧ್ಯಾಯವನ್ನು ನೋಡಿ |