Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 57:3 - ಕನ್ನಡ ಸತ್ಯವೇದವು C.L. Bible (BSI)

3 ಆತ ನೆರವಾಗುವನೆನಗೆ ಪರಲೋಕದಿಂದ I ತಪ್ಪಿಸುವನು ನನ್ನನು ಬೆನ್ನಟ್ಟಿ ಬರುವವರಿಂದ II ತೋರ್ಪಡಿಸುವನು ಸತ್ಯತೆಯನು I ತನ್ನ ಅಚಲ ಪ್ರೀತಿಯನಾ ದೇವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; ಸೆಲಾ ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಪರಲೋಕದಿಂದ ಸಹಾಯಮಾಡಿ ನಿಂದಕರ ಬಾಯಿಗೆ ನನ್ನನ್ನು ತಪ್ಪಿಸುವನು; ಸೆಲಾ. ತನ್ನ ಕಾರುಣ್ಯವನ್ನೂ ಸತ್ಯತೆಯನ್ನೂ ತೋರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆತನು ಪರಲೋಕದಿಂದ ನನಗೆ ಸಹಾಯಮಾಡಿ, ನನ್ನನ್ನು ಕಾಡಿಸುವವರನ್ನು ಸೋಲಿಸುವನು. ದೇವರು ತನ್ನ ಪ್ರೀತಿಯನ್ನೂ ನಂಬಿಗಸ್ತಿಕೆಯನ್ನೂ ತೋರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರು ಪರಲೋಕದಿಂದ ಸಹಾಯ ಕಳುಹಿಸಿ, ನನ್ನನ್ನು ನಿಂದಿಸುವವರನ್ನು ದಂಡಿಸಿ, ನನ್ನನ್ನು ರಕ್ಷಿಸುವರು. ದೇವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನೂ ತಮ್ಮ ಸತ್ಯವನ್ನೂ ಕಳುಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 57:3
14 ತಿಳಿವುಗಳ ಹೋಲಿಕೆ  

ಅಗಲಿಸಬೇಡ ಪ್ರಭೂ, ನಿನ್ನ ಕೃಪೆಯನು ನನ್ನಿಂದ I ನಿನ್ನ ಪ್ರೀತಿ ಸತ್ಯತೆ ಕಾದಿರಿಸಲಿ ನನ್ನನು ಸತತ II


ಕಳುಹಿಸು ನಿನ್ನ ಜ್ಯೋತಿಯನು, ನಿನ್ನ ಸತ್ಯವನ್ನು ನನ್ನ ನಡೆಸಲಿಕ್ಕೆ I ಸೇರಿಸಲೆನ್ನನು ನಿನ್ನ ಪವಿತ್ರ ಪರ್ವತಕೆ, ನಿನ್ನಯ ನಿವಾಸಕೆ II


ನಡೆದ ಸಂಗತಿ ಏನೆಂದು ಪೇತ್ರನಿಗೆ ಅರಿವಾದಾಗ ಆತನು, “ನಡೆದುದೆಲ್ಲಾ ಸಾಕ್ಷಾತ್ ಸತ್ಯವೆಂದು ಈಗ ನನಗೆ ತಿಳಿಯಿತು. ಪ್ರಭು ತಮ್ಮ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯರು ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಪಾರುಮಾಡಿದ್ದಾರೆ,” ಎಂದುಕೊಂಡನು.


ದೇವರ ಸಾನ್ನಿಧ್ಯದಲಿ ಆತನು ಸದಾ ಸಾಮ್ರಾಜ್ಯವಾಳಲಿ I ನಿನ್ನಯ ಪ್ರೀತಿ ಸತ್ಯತೆಗಳು ಆತನಿಗೆ ಬೆಂಗಾವಲಾಗಿರಲಿ II


ಈ ಜನಾಂಗ ಯುವಸಿಂಹದಂತೆ ನಿಂತಿಹುದು ಮೃಗೇಂದ್ರನಂತೆ ಮೃಗ ಕೊಂದು, ರಕ್ತ ಕುಡಿದು, ಮಾಂಸ ತಿಂದು, ತೃಪ್ತಿಹೊಂದದ ಹೊರತು ಆ ಸಿಂಹ ವಿರಮಿಸದು.”


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


‘ಆತ ಬಡಿಸಿದ ಭೋಜನದಿಂದ ತೃಪ್ತರಾಗದವರು ಎಲ್ಲಾದರೂ ಉಂಟೆ?’ ಎಂದು ನನ್ನ ಗುಡಾರದ ಆಳುಗಳೇ ಹೇಳಿಕೊಳ್ಳುತ್ತಿದ್ದರಲ್ಲವೆ?


ಸಿದ್ಧಿಗೆ ತರುವೆ ನೀ ಪ್ರಭು, ನನ್ನ ಕಾರ್ಯವನು I ಶಾಶ್ವತವಾಗಿಸು ನಿನ್ನ ಅಚಲ ಪ್ರಿತಿಯನು I ಮರೆತುಬಿಡಬೇಡ ನಿನ್ನಯ ಕೈ ಕೃತಿಯನು II


ಸರ್ವೇಶ್ವರಾ, ನೀಡೆಮಗೆ ಶಾಂತಿ ಸಮಾಧಾನ ನಮ್ಮ ಸತ್ಕಾರ್ಯಗಳೆಲ್ಲವೂ ನಿನ್ನ ಕೃಪಾಸಾಧನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು