ಕೀರ್ತನೆಗಳು 57:4 - ಕನ್ನಡ ಸತ್ಯವೇದವು C.L. Bible (BSI)4 ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಸಿಂಹಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ಬೆಂಕಿಕಾರುವ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಶಸ್ತ್ರಬಾಣಗಳು; ನಾಲಿಗೆಗಳು ಹದವಾದ ಕತ್ತಿಗಳೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನನ್ನ ಪ್ರಾಣವು ಅಪಾಯದಲ್ಲಿದೆ. ನನ್ನ ಶತ್ರುಗಳು ನನ್ನನ್ನು ಮುತ್ತಿಕೊಂಡಿದ್ದಾರೆ. ಅವರು ಸಿಂಹಗಳಂತಿದ್ದಾರೆ. ಅವರ ಹಲ್ಲುಗಳು ಬಾಣಗಳಂತಿವೆ; ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾನು ಸಿಂಹಗಳಂಥವರ ಮಧ್ಯದಲ್ಲಿದ್ದೇನೆ. ಕ್ರೂರಮೃಗಗಳಂಥವರ ಮಧ್ಯದಲ್ಲಿ ಒತ್ತಾಯವಾಗಿ ವಾಸಮಾಡುತ್ತಿದ್ದೇನೆ. ಅವರ ಹಲ್ಲು, ಭಲ್ಲೆ, ಬಾಣಗಳೂ ಅವರ ನಾಲಿಗೆ ಹದವಾದ ಖಡ್ಗವೂ ಆಗಿವೆ. ಅಧ್ಯಾಯವನ್ನು ನೋಡಿ |