Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 57:6 - ಕನ್ನಡ ಸತ್ಯವೇದವು C.L. Bible (BSI)

6 ಕಂಟಕ ಬಂದಿದೆ ನನ್ನ ಪ್ರಾಣಕೆ I ಹಾಕಿಹರು ಕಾಲಿಗೆ ಜೀರುಗುಣಿಕೆ II ತೋಡಿಹರು ಗುಂಡಿಯನು ನಾ ನಡೆವ ದಾರಿಯಲೆ I ತಾವೆ ತಟಕ್ಕನೆ ಬಿದ್ದುಹೋದರು ಅದರಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನ್ನನ್ನು ಬಂಧಿಸಲು ನನ್ನ ವೈರಿಗಳು ನನಗೆ ಬಲೆಯೊಡ್ಡಿದ್ದಾರೆ. ನನ್ನನ್ನು ಬೀಳಿಸಲು ಕುಣಿ ತೋಡಿದರು. ಆದರೆ ಅವರೇ ಅದರಲ್ಲಿ ಬಿದ್ದುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಶತ್ರುಗಳು ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದಿದ್ದಾರೆ. ಅದರಲ್ಲಿ ತಾವೇ ಬಿದ್ದುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 57:6
18 ತಿಳಿವುಗಳ ಹೋಲಿಕೆ  

ನುಡಿಯಲಿ ಪ್ರಭು ಸದಾ ಪ್ರಾಮಾಣಿಕನು I ನಡೆಯಲಿ ಆತನು ಸದಾ ಪ್ರೀತಿಮಯನು II


ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


ನೆಟ್ಟಗೆ ನಡೆವವರನ್ನು ಕೆಟ್ಟದಾರಿಗೆ ಎಳೆಯುವವನು ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ನಿರ್ದೋಷಿಗಳು ಸುಖಸಂತೋಷಕ್ಕೆ ಬಾಧ್ಯಸ್ಥರು.


ಒಡ್ಡಿದರು ಗರ್ವಿಗಳು ಗುಪ್ತವಾಗಿ I ಉರುಲನು, ಪಾಶಗಳನು ನನಗಾಗಿ I ಬಲೆಹಾಸಿದರು ದಾರಿಗೆ ಅಡ್ಡವಾಗಿ II


ನೆರೆಯವನನ್ನು ಅಳತೆಮೀರಿ ಹೊಗಳುವವನು ಅವನ ಕಾಲಿಗೆ ಬಲೆಯನ್ನು ಒಡ್ಡುವನು.


ಉರುಲೊಡ್ಡಿಹರು ನಾ ನಡೆಯುವ ಮಾರ್ಗದಲೆ I ನಾ ಮನಗುಂದಿರೆ, ಪರಿಹಾರವನು ನೀ ಬಲ್ಲೆ II


ಸೊರಗಿಹೋಗಿದೆ ನನ್ನ ಚೈತನ್ಯ I ನಿಬ್ಬೆರಗಾಗಿದೆ ನನ್ನ ಹೃದಯ II


ನನಗಾಗುತ್ತದೆ ನಿನ್ನ ಸ್ಮರಣೆ ಮನ ಕುಗ್ಗಿದಾಗ I ಜೋರ್ದನ್, ಹೆರ್ಮನ್ ನಾಡಿಂದ, ಮೀಸಾರ್ ಗುಡ್ಡೆಯಿಂದ II


ಆದರೂ ನನ್ನ ಜೀವದಾಣೆ ಸರ್ವೇಶ್ವರನ ಮಹಿಮೆ ಅಖಿಲ ವಿಶ್ವವನ್ನು ತುಂಬಿದೆಯೆಂಬ ಸತ್ಯವಾಕ್ಯದ ಆಣೆ. ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ವಾಗ್ದತ್ತ ನಾಡನ್ನು ನೋಡುವುದಿಲ್ಲ.


ಅನಂತರ ದಾವೀದನು ನೆರೆದ ಸಭೆಯ ಮುಂದೆ ಸರ್ವೇಶ್ವರನನ್ನು ಹೀಗೆ ಸ್ತುತಿಸಿದನು:


“ಹೇ ಸರ್ವೇಶ್ವರಾ, ನಮ್ಮ ಪಿತೃ ಯಕೋಬನ ದೇವರೇ, ಸದಾಕಾಲಕ್ಕೂ ಸ್ತುತಿಸ್ತೋತ್ರ ಸಲ್ಲಲಿ ನಿಮಗೆ! ಹೇ ಸರ್ವೇಶ್ವರಾ, ಮಹಿಮೆ, ಪ್ರತಾಪ, ವೈಭವ, ಪರಾಕ್ರಮ, ಪ್ರತಿಭೆ, ನಿಮ್ಮವೇ, ಭೂಮ್ಯಾಕಾಶಗಳಲ್ಲಿರುವ ಸಮಸ್ತವೂ ನಿಮ್ಮದೇ. ಸರ್ವೇಶ್ವರಾ, ರಾಜ್ಯಭಾರವೂ ನಿಮ್ಮದೇ. ಸರ್ವವನು ಮಹೋನ್ನತರಾಗಿ ಆಳುವವರೂ ನೀವೇ.


ವಿರೋಧಿಗಳ ಬಾಯನು ಮುಚ್ಚಿಸಿದೆ ಬಾಲ ಬಾಲೆಯರ ಬಾಯಿಂದಲೆ I ಹಗೆಗಳನು ದುರ್ಗದಂತೆ ತಡೆದೆ ಮೊಲೆಗೂಸುಗಳ ನಾಲಿಗೆಯಿಂದಲೆ II


ನಿನಗೆ ಪ್ರಿಯರಾದ ನಮ್ಮ ಮೊರೆಯನಾಲಿಸು I ನಿನ್ನ ಭುಜಬಲದಿಂದ ನಮ್ಮನು ಜಯಗೊಳಿಸು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು