Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 58:10 - ಕನ್ನಡ ಸತ್ಯವೇದವು C.L. Bible (BSI)

10 ನಲಿವರು ಸಜ್ಜನರು ಈ ಪ್ರತೀಕಾರ ನೋಟದಲಿ I ಕಾಲುತೊಳೆಯುವರವರು ಆ ದುರ್ಜನರ ನೆತ್ತರಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ ಅವರ ರಕ್ತದಲ್ಲಿ ಕಾಲಾಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದುಷ್ಟರಿಗಾಗುವ ಪ್ರತಿದಂಡನೆಯನ್ನು ನೀತಿವಂತರು ಕಂಡು ಹರ್ಷಿಸುವರು; ಆ ದುಷ್ಟರ ರಕ್ತದಲ್ಲಿ ಕಾಲಾಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀತಿವಂತರು ದುಷ್ಟರಿಗಾಗುವ ಪ್ರತಿದಂಡನೆಯನ್ನು ಕಂಡು ಹಿಗ್ಗಿ ತಮ್ಮ ಪಾದಗಳನ್ನು ದುಷ್ಟನ ರಕ್ತದ ಮೇಲಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 58:10
16 ತಿಳಿವುಗಳ ಹೋಲಿಕೆ  

ನೀನಿದನು ಕಣ್ಣಾರೆ ಕಾಣುವೆ I ದುರುಳರ ದಂಡನೆಯನು ನೋಡುವೆ II


ಹರ್ಷಿಸಲಿ ಸಜ್ಜನರು ಪ್ರಭುವಿನಲಿ I ಆಶ್ರಯ ಪಡೆಯಲೀಗಲೆ ಆತನಲಿ I ನೇರ ಹೃದಯಿಗಳೆಲ್ಲರು ಹಿಗ್ಗಲಿ II


ಸಜ್ಜನರು ಸುಖಿಗಳಾದರೆ ಊರಿಗೆ ಉಲ್ಲಾಸ; ದುರ್ಜನರು ಹಾಳಾದರೆ ಮಾಡುವರು ಜಯಘೋಷ.


ಇದಕಂಡು ಹಿಗ್ಗುವರು ಸಜ್ಜನರೆಲ್ಲರು I ಬಾಯಿ ಮುಚ್ಚಿಕೊಳ್ಳುವರು ದುರ್ಜನರು II


“ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.”


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಸಜ್ಜನರು ಚಕಿತರಾಗುವರು ಕಂಡಿದನು I “ದೇವರನು ಆಶ್ರಯಿಸಿಕೊಳ್ಳದವನಿವನು I ಸಿರಿ ಸಂಪತ್ತಿನಲೆ ಭರವಸೆಯಿಟ್ಟವನು I ತುಚ್ಛಕಾರ್ಯಗಳಲೆ ಹೆಚ್ಚಳಪಟ್ಟವನು” I ಎಂದು ಜರೆದು ಮಾಡುವರು ಪರಿಹಾಸ್ಯವನು II


ಹಾಲುತುಪ್ಪದಲ್ಲಿ ಪಾದ ತೊಳೆಯುತ್ತಿದ್ದೆ ಎಣ್ಣೆಯನು ನದಿಯಂತೆ ಹರಿಸುತ್ತಿತ್ತಾ ದಿಣ್ಣೆ.


ದುರುಳರ ದುರ್ಗತಿಯನು ನೋಡಿ ಸಜ್ಜನರು ಹಿಗ್ಗುವರು ನಿರ್ದೋಷಿಗಳು ಅವರನು ಈ ಪರಿ ಅಣಕಿಸಿ ಹಾಸ್ಯಮಾಡುವರು:


ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!


ಪಟ್ಟಣದ ಹೊರಗಿನ ಆಲೆಯಲ್ಲಿ ದ್ರಾಕ್ಷಿಯ ಹಣ್ಣನ್ನು ಹಿಂಡಲಾಯಿತು. ಆ ಆಲೆಯಿಂದ ರಕ್ತವು ಹರಿಯಿತು. ಅದು ಮುನ್ನೂರು ಕಿಲೊಮೀಟರಿನಷ್ಟು ದೂರವಾಗಿಯೂ ಎರಡು ಮೀಟರಿನಷ್ಟು ಆಳವಾಗಿಯೂ ಹರಿಯಿತು.


ಬಿರುಗಾಳಿ ಬೀಸಿದರೆ ದುರ್ಜನರು ಇಲ್ಲವಾಗುವರು; ಸಜ್ಜನರಾದರೋ ಸದಾಕಾಲ ಸ್ಥಿರವಾಗಿ ನಿಲ್ಲುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು