Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 58:11 - ಕನ್ನಡ ಸತ್ಯವೇದವು C.L. Bible (BSI)

11 “ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀತಿವಂತನಿಗೆ ಫಲವುಂಟೆಂತಲೂ ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಜನರು ಹೀಗೆ ಹೇಳಿಕೊಳ್ಳುವರು, “ನಿಶ್ಚಯವಾಗಿ ನೀತಿವಂತನಿಗೆ ಫಲವಿದೆ. ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯತೀರಿಸುವ ದೇವರು ಇದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 58:11
20 ತಿಳಿವುಗಳ ಹೋಲಿಕೆ  

ನ್ಯಾಯದ ಪ್ರಕಾರ ತೀರ್ಪಿಡುತಿ ಜನತೆಗೆ I ಆದರ್ಶನೀಡುತಿ ಜಗದ ರಾಷ್ಟ್ರಗಳಿಗೆ I ಹರ್ಷಾನಂದವಾಗಲಿ ಜನಾಂಗಗಳಿಗೆ II


ಜನರೆಲ್ಲರಾಗ ತಲ್ಲಣಗೊಳ್ಳುವರು I ದೇವಕಾರ್ಯವಿದು ಎಂದು ಧ್ಯಾನಿಪರು I ಆತನ ಸತ್ಕಾರ್ಯಗಳನು ಸಾರುವರು II


ಸಜ್ಜನರಿಗೆ ಶುಭವೆಂದು ಸಾರಿರಿ. ಅವರು ತಮ್ಮ ಕ್ರಿಯೆಗಳ ಸತ್ಫಲವನ್ನು ಸವಿಯುತ್ತಾರೆ.


ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ದೇವರಿಗೆ ಸೇವೆಮಾಡುವುದು ವ್ಯರ್ಥ. ಅವರು ಹೇಳಿದಂತೆ ನಾವು ನಡೆದುಕೊಳ್ಳುವುದರಿಂದ ಪ್ರಯೋಜನವೇನು? ನಮ್ಮ ಕೃತ್ಯಗಳಿಗಾಗಿ ಸೇನಾಧೀಶ್ವರ ಸರ್ವೇಶ್ವರನ ಮುಂದೆ ದುಃಖಪಡುವುದರಿಂದ ಲಾಭವೇನು?


“ನೀವು ನಿಮ್ಮ ಮಾತುಗಳಿಂದ ಪ್ರಭುವನ್ನು ಬೇಸರಗೊಳಿಸಿದ್ದೀರಿ. ‘ಯಾವ ವಿಷಯದಲ್ಲಿ ಅವರನ್ನು ಬೇಸರಗೊಳಿಸಿದ್ದೇವೆ?’ ಎನ್ನುತ್ತೀರೋ? ‘ಕೆಡುಕರೆಲ್ಲರೂ ದೇವರ ದೃಷ್ಟಿಯಲ್ಲಿ ಒಳ್ಳೆಯವರು. ಅವರೇ ಆತನಿಗೆ ಬೇಕಾದವರು’ ಎಂದು ಹೇಳುವುದರಿಂದ: ‘ನ್ಯಾಯ ತೀರಿಸುವ ದೇವರೆಲ್ಲಿ?’ ಎಂದು ಕೇಳುವುದರಿಂದ.”


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II


ಪ್ರಭೂ, ಲೋಕದ ನ್ಯಾಯಾಧಿಪತಿ I ಏಳು, ಗರ್ವಿಗಳಿಗೆ ಮಾಡು ತಕ್ಕಶಾಸ್ತಿ II


ಈ ಪರಿ ಪಡೆವುದು ಸಾಕ್ಷ್ಯ ಪ್ರಭುವಿನಾ ಸತ್ಯಸಂಧತೆ I ಆತನೇ ನನಗೆ ಪೊರೆಬಂಡೆ, ಆತನಲ್ಲಿಲ್ಲ ವಕ್ರತೆ II


ನನಗೊಳಿತು ಮಾಡಿದನಾತ ಸನ್ನಡತೆಗೆ ತಕ್ಕಂತೆ I ಪ್ರತಿಫಲವನಿತ್ತನು ನನ್ನ ಹಸ್ತಶುದ್ಧತೆಗೆ ತಕ್ಕಹಾಗೆ II


ಜಗಕೆ ನ್ಯಾಯ ತೀರಿಸುವನು ನೀತಿಗನುಸಾರ I ಜನಾಂಗಕೆ ತೀರ್ಪು ಕೊಡುವನು ಸತ್ಯಕ್ಕನುಸಾರ II


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ನಾನಾದರೋ ದೇಗುಲದಲಿ ಬೆಳೆದಿಹ ಎಣ್ಣೆಮರದಂತಿರುವೆನು I ದೇವರ ಸ್ಥಿರಪ್ರೀತಿಯನು ಯುಗಾಂತರಕು ನಂಬಿಕೊಂಡಿರುವೆನು II


ಕಂಗೊಳಿಸುತಿದೆ ದೇವ, ನಿನ್ನ ಭವ್ಯ ಮೆರವಣಿಗೆ I ನನ್ನರಸ ದೇವನು ನಡೆವ ತನ್ನಾ ಗರ್ಭಗುಡಿಗೆ II


ಇದಕಂಡು ಹಿಗ್ಗುವರು ಸಜ್ಜನರೆಲ್ಲರು I ಬಾಯಿ ಮುಚ್ಚಿಕೊಳ್ಳುವರು ದುರ್ಜನರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು