Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 58:3 - ಕನ್ನಡ ಸತ್ಯವೇದವು C.L. Bible (BSI)

3 ದುರುಳರು ದಾರಿತಪ್ಪಿದವರು ಉದರದಿಂದಲೆ I ಸಟೆಯಾಡುವ ಅಕ್ರಮಿಗಳವರು ಹುಟ್ಟಿನಿಂದಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದುಷ್ಟರು ಜನ್ಮದಿಂದಲೇ ಧರ್ಮ ಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ಬಿಟ್ಟವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ದುಷ್ಟರು ಹುಟ್ಟಿದಾಕ್ಷಣದಿಂದ ತಪ್ಪನ್ನು ಮಾಡತೊಡಗಿದರು. ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದುಷ್ಟರು ಗರ್ಭದಿಂದಲೇ ದಾರಿತಪ್ಪುತ್ತಾರೆ. ಹುಟ್ಟಿದಂದಿನಿಂದಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 58:3
9 ತಿಳಿವುಗಳ ಹೋಲಿಕೆ  

ನಾ ಜನಿಸಿದೆ ಪಾಪಪಂಕದಲೆ I ದ್ರೋಹಿ ನಾ ಮಾತೃಗರ್ಭದಿಂದಲೆ II


ಹೌದು, ಹೌದು ನೀ ಕೇಳಿಲ್ಲ, ತಿಳಿದೂ ಇಲ್ಲ ಅದಿಯಿಂದ ನಿನ್ನ ಕಿವಿ ತೆರೆದೂ ಇಲ್ಲ ನೀನು ಆಗರ್ಭ ದ್ರೋಹಿ, ಮಹಾ ಕುಟಿಲ ಎಂಬುದು ನನಗೆ ತಿಳಿದು ಇದೆಯಲ್ಲ !


ಮಂಕುತನ ಮಕ್ಕಳ ಮನಸ್ಸಿಗೆ ಸಹಜ; ಬೆತ್ತದ ಬಿಸಿಯಿಂದ ಅದನ್ನು ತೊಲಗಿಸಲು ಸಾಧ್ಯ.


ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.


ನರನು ಎಷ್ಟರವನು? ಅವನು ಪರಿಶುದ್ಧನಿರಲು ಸಾಧ್ಯವೆ? ಸ್ತ್ರೀಯರಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೆ?


“ಕಿವಿಗೊಡು, ಓ ಯಕೋಬ ಮನೆತನವೆ, ಅಳಿದುಳಿದಾ ಇಸ್ರಯೇಲಿನ ಮನೆತನವೆ, ಹೊರುತ್ತಿರುವೆ ನಿಮ್ಮನು ಗರ್ಭದಿಂದ ಸಾಕಿ ಸಲಹುತ್ತಿರುವೆ ಹುಟ್ಟಿದಂದಿನಿಂದ.


ಆಗರ್ಭದಿಂದಲೆ ನೀನೆನಗಧಾರ I ತಾಯಿ ಹೆತ್ತಂದಿನಿಂದಲೇ ಕರ್ತಾರ II


ಗೋಡೆ ಸುತ್ತಲೂ ತಿರುಗುತಿಹರವರು ಹಗಲಿರುಳು I ನಗರದೊಳಗೆ ತುಂಬಿವೆ ಅಕ್ರಮ ಅನಾಚಾರಗಳು II


ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು