Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 58:6 - ಕನ್ನಡ ಸತ್ಯವೇದವು C.L. Bible (BSI)

6 ಮುರಿದುಬಿಡು ಹೇ ದೇವಾ, ಆ ದುರುಳರ ಹಲ್ಲುಗಳನು I ಕಿತ್ತುಬಿಡು ಪ್ರಭು, ಆ ಪ್ರಾಯಸಿಂಹಗಳ ಕೋರೆಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಕಿತ್ತುಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ಪ್ರಾಯದ ಸಿಂಹಗಳ ಕೋರೇದಾಡೆಗಳನ್ನು ಕಿತ್ತುಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನೇ, ಅವರು ಸಿಂಹಗಳಂತಿದ್ದಾರೆ. ದೇವರೇ, ಅವರ ಹಲ್ಲುಗಳನ್ನು ಮುರಿದುಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಓ, ದೇವರೇ, ಅವರ ಹಲ್ಲುಗಳು ಮುರಿದು ಬೀಳಲಿ. ಯೆಹೋವ ದೇವರೇ, ಪ್ರಾಯದ ಸಿಂಹಗಳಂತಿರುವ ಅವರ ಕೋರೆಹಲ್ಲುಗಳು ನಾಶವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 58:6
14 ತಿಳಿವುಗಳ ಹೋಲಿಕೆ  

ಎದ್ದೇಳು ದೇವ, ಕಾಪಾಡ ಬಾ ಪ್ರಭುವೆ I ವೈರಿಗಳ ದವಡೆ ಬಡಿದವನು ನೀನಲ್ಲವೇ I ದುರುಳರ ಹಲ್ಲುದುರಿಸಿದವನು ನೀನಲ್ಲವೆ? II


ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು.


ಎಫ್ರಯಿಮಿಗೆ ನಾನು ಸಿಂಹ; ಯೆಹೂದ್ಯಕುಲಕ್ಕೆ ಪ್ರಾಯದ ಸಿಂಹ; ಅದನ್ನು ಸೀಳಿಬಿಡುವೆನು; ಎಳೆದುಕೊಂಡು ಹೋಗುವೆನು; ಯಾರೂ ಅದನ್ನು ನನ್ನಿಂದ ಬಿಡಿಸಿಕೊಳ್ಳಲಾರರು.


ಇಹರು ಸೀಳಿಹಾಕಲಿರುವ ಕೇಸರಿಯಂತೆ I ಹೊಂಚು ಹಾಕುತಿಹರು ಪ್ರಾಯ ಸಿಂಹದಂತೆ II


ಧೂರ್ತನ, ದುರುಳನ ಭುಜಬಲವನು ನೀ ಮುರಿದುಬಿಡು I ಆತನ ನೀಚತನವನು ಪರೀಕ್ಷಿಸಿ ಶೂನ್ಯಮಾಡು II


ದುರ್ಜನರ ದವಡೆಯನು ಮುರಿಯುತ್ತಿದ್ದೆ. ಅವರ ಹಲ್ಲುಗಳಿಂದಲೂ ಬೇಟೆಯನು ಬಿಡಿಸುತ್ತಿದ್ದೆ.


ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಸಿಂಹವೋ ಪ್ರಾಯದ ಸಿಂಹವೋ ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಆ ಕೂಗನ್ನು ಕೇಳಿ ಕುರುಬರನೇಕರು ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದು, ಅವರ ಗದ್ದಲಕ್ಕೆ ಎದೆಗುಂದದು. ಅಂತೆಯೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆದ ನಾನು ಯುದ್ಧಮಾಡಲು ಸಿಯೋನ್ ಶಿಖರದ ಮೇಲೆ ಇಳಿದು ಬರುವಾಗ ನನ್ನನ್ನು ಯಾರೂ ಹೆದರಿಸುವುದಿಲ್ಲ, ಎದೆಗುಂದಿಸುವಂತಿಲ್ಲ.


ಸಿಂಹಗಳ ಮೇಲೂ, ಸರ್ಪಗಳ ಮೇಲೂ ನಡೆಯುವೆ I ಪ್ರಾಯದ ಸಿಂಹವನು, ಘಟಸರ್ಪವನು ತುಳಿದುಬಿಡುವೆ II


ಈ ಜನಾಂಗ ಯುವಸಿಂಹದಂತೆ ನಿಂತಿಹುದು ಮೃಗೇಂದ್ರನಂತೆ ಮೃಗ ಕೊಂದು, ರಕ್ತ ಕುಡಿದು, ಮಾಂಸ ತಿಂದು, ತೃಪ್ತಿಹೊಂದದ ಹೊರತು ಆ ಸಿಂಹ ವಿರಮಿಸದು.”


ಅದರ ಮುಖದ ಕದಗಳನು ತೆರೆಯ ಬಲ್ಲವರಾರು? ಅದರ ಹಲ್ಲುಗಳ ಸುತ್ತಲೂ ಭಯಭೀತಿ ಆವರಿಸಿರುವುದು.


ಹಾವಾಡಿಗ ಹಾವಾಡಿಸುವುದಕ್ಕೆ ಮುಂಚೆಯೇ ಹಾವಿನಿಂದ ಕಡಿಸಿಕೊಂಡರೆ ಏನು ಪ್ರಯೋಜನ?


ಸರ್ವೇಶ್ವರ : “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು ಬಿಡುವೆನು. ಅವು ಮಾಯಮಂತ್ರಕ್ಕೆ ಬಾಗದ ನಾಗಸರ್ಪಗಳು ! ಅವು ನಿಮ್ಮನ್ನು ಕಚ್ಚದೆ ಬಿಡವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು