Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:11 - ಕನ್ನಡ ಸತ್ಯವೇದವು C.L. Bible (BSI)

11 ಕೊಲಬೇಡಾ ದ್ರೋಹಿಗಳನು ಫಕ್ಕನೆ I ಮರೆತಾರೆನ್ನ ಜನತೆ ಪಾಠ ಕಲಿಯದೆ II ಚದರಿಸು ಶಕ್ತಿಯಿಂದ, ಅಲೆಯಲಿ ದಿಕ್ಕುತೋಚದೆ I ಆ ಪರಿ ತಗ್ಗಿಸು ಅವರನು; ಪ್ರಭು, ನೀಡೆನಗೆ ರಕ್ಷೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ. ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ; ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದರಿಸಿ ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಕೊಲ್ಲಬೇಡ, ಇಲ್ಲವಾದರೆ, ನನ್ನ ಜನರು ಮರೆತುಬಿಡಬಹುದು. ನನ್ನ ಒಡಯನೇ, ಸಂರಕ್ಷಕನೇ, ಅವರನ್ನು ಚದರಿಸಿಬಿಡು; ನಿನ್ನ ಬಲದಿಂದ ಸೋಲಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಮ್ಮ ಗುರಾಣಿಯಾಗಿರುವ ಯೆಹೋವ ದೇವರೇ, ನನ್ನ ಜನರು ಮರೆಯದ ಹಾಗೆ ಅವರು ಉಳಿದಿರಲಿ. ನಿಮ್ಮ ಪರಾಕ್ರಮದಿಂದ ಅವರನ್ನು ದಂಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:11
22 ತಿಳಿವುಗಳ ಹೋಲಿಕೆ  

ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II


ಆಂಥ ದಿನಗಳಲ್ಲಿ ಮನುಷ್ಯರು ಮರಣವನ್ನು ಅಪೇಕ್ಷಿಸುವರು. ಆದರೆ ಅದು ಅವರಿಗೆ ಪ್ರಾಪ್ತವಾಗುವುದಿಲ್ಲ. ಸತ್ತರೆ ಸಾಕೆಂದು ಬಯಸುವರು; ಪ್ರಯತ್ನಿಸುವರು. ಆದರೆ ಮೃತ್ಯು ಅವರಿಂದ ದೂರ ಸರಿಯುವುದು.


ಆಗ ಜುದೇಯದಲ್ಲಿರುವವರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ; ಪಟ್ಟಣದೊಳಗಿರುವವರು ಅಲ್ಲಿಂದ ಹೊರಟುಹೋಗಲಿ; ಹಳ್ಳಿಗಾಡಿನಲ್ಲಿರುವವರು ಪಟ್ಟಣಕ್ಕೆ ಬಾರದಿರಲಿ.


ನಸುಕುವನು ದೇವರು ನಿನ್ನನು ನಿರುತ I ದೂರಮಾಡುವನು ನಿನ್ನಾ ಗುಡಾರದಿಂದ I ಕಿತ್ತೆಸೆದುಬಿಡುವನು ಜೀವದ ನಾಡಿಂದ II


ಹೌದು, ಕಣ್ಣಿಟ್ಟು ಗರ್ವಿಷ್ಠರೆಲ್ಲರನು ತಗ್ಗಿಸು ದುಷ್ಟರನು ನಿಂತಲ್ಲೇ ತುಳಿದುಬಿಡು.


“ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲ ಜನಾಂಗಗಳಲ್ಲಿಯೂ ಸರ್ವೇಶ್ವರ ನಿಮ್ಮನ್ನು ಚದುರಿಸುವರು; ಅಲ್ಲಿ ನಿಮಗಾಗಲಿ ನಿಮ್ಮ ಪಿತೃಗಳಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಸರ್ವೇಶ್ವರ ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿಬಿಡುವರು. ಹೀಗೆ ಓಡಿಸಿಬಿಡಲು, ಆ ಅನ್ಯನಾಡಿನ ಜನರ ನಡುವೆ ನೀವು ಸ್ವಲ್ಪ ಮಂದಿ ಮಾತ್ರ ಅಳಿದುಳಿಯುವಿರಿ.


ಚದರಿಸುವೆನು ನಿಮ್ಮ ಸಂತಾನವನು ಹೊರನಾಡುಗಳಲಿ I ಅಳಿದು ಹೋಗುವರವರು ಅನ್ಯಜನಾಂಗಗಳ ಮಧ್ಯೆಯಲಿ” I


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ನಿನ್ನ ಮಂದಿರದಲಿ ಕಳೆದ ದಿನವೊಂದು I ತಿಳಿವೆನು ಸಾವಿರ ದಿನಕೂ ಮೇಲೆಂದು II


ನಮ್ಮನೊಪ್ಪಿಸಿರುವೆ ವಧ್ಯಸ್ಥಾನಕೊಯ್ದ ಕುರಿಗಳಂತೆ I ಚದರಿಸಿಬಿಟ್ಟಿರುವೆ ನಮ್ಮನು ಅನ್ಯ ಜನಾಂಗಗಳ ಮಧ್ಯೆ II


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


ಜೀವಿತರಿಗೆ ಖಂಡಿತವಾಗಿ ಸಾಯುತ್ತೇವೆಂಬ ತಿಳುವಳಿಕೆಯಾದರೂ ಉಂಟು. ಸತ್ತವರಿಗಾದರೋ ಯಾವ ತಿಳುವಳಿಕೆಯೂ ಇಲ್ಲ; ಅವರಿಗೆ ಇನ್ನು ಮೇಲೆ ಯಾವ ಪ್ರತಿಫಲವೂ ಇಲ್ಲ; ಅವರ ಹೆಸರನ್ನೂ ಜನರು ಮರೆತುಬಿಡುತ್ತಾರೆ.


ಅನಂತರದಲ್ಲೇ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿದ್ದಕ್ಕಾಗಿ ಅವನ ಮನಸ್ಸಾಕ್ಷಿ ಅವನನ್ನು ಹಂಗಿಸತೊಡಗಿತು..


ನೆರವು ನೀಡಲು ಪ್ರಭು ಎನ್ನಕಡೆ ಇಹನು I ಶತ್ರುಗಳತ್ತ ಜೇತಾರನಾಗಿ ನೋಡುವೆನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು