Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:12 - ಕನ್ನಡ ಸತ್ಯವೇದವು C.L. Bible (BSI)

12 ಪಾಪವಿದೆ ಬಾಯಲಿ, ದೋಷವಿದೆ ತುಟಿಯಲಿ I ಸುಳ್ಳಿದೆ ಮಾತಲಿ, ಶಾಪವಿದೆ ನುಡಿಯಲಿ I ಅವರ ಸೊಕ್ಕಿನಲಿ ಅವರೇ ಸಿಕ್ಕಬೀಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರ ಬಾಯಿಂದ ಬರುವದೆಲ್ಲಾ ಪಾಪವೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿ ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ದುಷ್ಟರು ಶಪಿಸುತ್ತಾರೆ, ಸುಳ್ಳಾಡುತ್ತಾರೆ. ಅವರ ಮಾತುಗಳ ನಿಮಿತ್ತವೇ ಅವರನ್ನು ದಂಡಿಸು. ಅವರು ತಮ್ಮ ಗರ್ವದಿಂದಲೇ ಸಿಕ್ಕಿಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರ ಬಾಯಿಯ ಪಾಪಕ್ಕೂ, ಅವರ ತುಟಿಗಳ ಮಾತಿಗೂ, ಅವರು ನುಡಿಯುವ ಶಾಪಕ್ಕೂ ಅವರ ಗರ್ವವೇ ಅವರನ್ನು ಹಿಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:12
20 ತಿಳಿವುಗಳ ಹೋಲಿಕೆ  

ಮಾತಿನ ದೋಷದಿಂದ ಕೆಡುಕನು ಬೋನಿಗೆ ಬೀಳುವನು; ನೀತಿವಂತನು ಆಪತ್ತಿನಿಂದ ತಪ್ಪಿಸಿಕೊಳ್ಳುವನು.


ಬುದ್ಧಿಹೀನನಿಗೆ ಬಾಯೇ ನಾಶ, ತುಟಿಗಳೇ ಅವನಿಗೆ ಪಾಶ.


ತುಂಬಿದೆ ಶಾಪಕೋಪ, ಕುತಂತ್ರ ಅವನ ಬಾಯಲಿ I ಅವಿತಿದೆ ಪಾಪ, ಅತಿವಿನಾಶ ನಾಲಗೆಯಡಿಯಲಿ II


ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.


ಸೊಕ್ಕಿನಿಂದ ಶೋಷಿಸುತಿಹರು ದಲಿತರನು ದುರುಳರು I ಸಿಕ್ಕಿಬೀಳಲಿ ತಾವೇ ಒಡ್ಡಿದ ಉರಿಲಿನೊಳವರು II


ಆದರೆ ಅವರು, “ಇವನು ಜುದೇಯ ನಾಡಿನಲ್ಲೆಲ್ಲಾ ಬೋಧನೆಮಾಡುತ್ತಾ ಕ್ರಾಂತಿಗೆ ಕರೆಗೊಡುತ್ತಾನೆ; ಗಲಿಲೇಯದಲ್ಲಿ ಪ್ರಾರಂಭಿಸಿ ಇಲ್ಲಿಯವರೆಗೂ ಬಂದಿದ್ದಾನೆ,” ಎಂದು ಒತ್ತಾಯಪೂರ್ವಕವಾಗಿ ಆರೋಪಿಸಿದರು.


“ಸ್ವಾಮೀ, ಆ ಮೋಸಗಾರ ಬದುಕಿದ್ದಾಗ, ‘ಮೂರು ದಿನಗಳಾದ ಮೇಲೆ ನಾನು ಪುನರ್ಜೀವಂತನಾಗಿ ಏಳುವೆನು,’ ಎಂದು ಹೇಳಿದ್ದು ನಮಗೆ ಜ್ಞಾಪಕದಲ್ಲಿದೆ.


ಅದಕ್ಕೆ ಜನರೆಲ್ಲರೂ, “ಅವನ ರಕ್ತ ನಮ್ಮ ಮೇಲೂ ನಮ್ಮ ಮಕ್ಕಳ ಮೇಲೂ ಇರಲಿ,” ಎಂದು ಕೂಗಿಕೊಂಡರು.


ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ ದುಷ್ಕೃತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು. ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ.


ಸಜ್ಜನರ ಬಿಡುಗಡೆ ಸದಾಚಾರದಿಂದ; ವಂಚಕರ ಬಂಧನ ದುರಾಶೆಯಿಂದ.


ನಿನ್ನ ಮಾತಿನ ಬಲೆಗೆ ಸಿಕ್ಕಿಹಾಕಿಕೊಂಡಿರುವೆ; ನಿನ್ನ ವಾಗ್ದಾನವು ನಿನ್ನನ್ನು ಸೆರೆಹಿಡಿದಿದೆ.


ಪ್ರಭು, ನಿನ್ನನು ನಿಂದಿಸಿದ ಅನ್ಯಜನರ ಮೇಲೆ I ಎರಗಲಿ ಏಳ್ಮಡಿ ದಂಡನೆ ಅವರೆದೆಯ ಮೇಲೆ II


ಭೂಪತಿಗಳನ್ನು ಬುದ್ಧಿಹೀನರನ್ನಾಗಿಸುತ್ತಾನೆ ದಾರಿಕಾಣದ ಅರಣ್ಯದಲಿ ಅಲೆದಾಡಿಸುತ್ತಾನೆ.


ನನ್ನ ಹಾನಿಗಾಗಿ ನಿತ್ಯವೂ ಮಾಡುತ್ತಿರುವ ನಿಂದೆ ಅವಮಾನ, ತಂತ್ರೋಪಾಯ.


ನಾನು ಕೆಲವರನ್ನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ಉಳಿಸಿ, ಅವರು ತಮ್ಮ ಅಸಹ್ಯಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು: ನಾನೇ ಸರ್ವೇಶ್ವರ ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು