Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:13 - ಕನ್ನಡ ಸತ್ಯವೇದವು C.L. Bible (BSI)

13 ಸುಟ್ಟು ನೀ ಭಸ್ಮಮಾಡು ಕೋಪಾಗ್ನಿಯಿಂದ I ಸ್ಪಷ್ಟವಾಗಲಿ ಇಡೀ ಲೋಕಕ್ಕಿದರಿಂದ I ದೇವನಾಳುತಿಹನೆಂದು ಇಸ್ರಯೇಲಿನಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬದು ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀನು ಅವರನ್ನು ಕೋಪದಿಂದ ನಾಶಮಾಡು. ಅವರನ್ನು ಸಂಪೂರ್ಣವಾಗಿ ನಾಶಮಾಡು. ಯಾಕೋಬನ ವಂಶದವರನ್ನು ಆಳುತ್ತಿರುವವನು ನೀನೇ ಎಂದು ಆಗ ಲೋಕದವರಿಗೆಲ್ಲಾ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ದಂಡನೆಗೆ ತುತ್ತಾಗಲಿ. ಅವರು ನಿರ್ನಾಮವಾಗಿಬಿಡಲಿ. ಆಗ ಯಾಕೋಬರನ್ನು ಆಳುವವರು ದೇವರೇ ಎಂಬುದು ಇಡೀ ಲೋಕಕ್ಕೇ ಗೊತ್ತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:13
21 ತಿಳಿವುಗಳ ಹೋಲಿಕೆ  

ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II


ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II


ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಯೇಲರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲುಬಿಡೆನು; ನಾನೇ ಸರ್ವೇಶ್ವರ, ಇಸ್ರಯೇಲಿನ ಪರಮಪಾವನಸ್ವಾಮಿ ಎಂದು ಜನಾಂಗಗಳಿಗೆ ಗೊತ್ತಾಗುವುದು.”


ಕೊಲಬೇಡಾ ದ್ರೋಹಿಗಳನು ಫಕ್ಕನೆ I ಮರೆತಾರೆನ್ನ ಜನತೆ ಪಾಠ ಕಲಿಯದೆ II ಚದರಿಸು ಶಕ್ತಿಯಿಂದ, ಅಲೆಯಲಿ ದಿಕ್ಕುತೋಚದೆ I ಆ ಪರಿ ತಗ್ಗಿಸು ಅವರನು; ಪ್ರಭು, ನೀಡೆನಗೆ ರಕ್ಷೆ II


ತಾವು ಮಾನವ ಸಮಾಜದಿಂದ ಬಹಿಷ್ಕೃತರಾಗುವಿರಿ. ಕಾಡುಮೃಗಗಳ ನಡುವೆ ವಾಸಮಾಡುವಿರಿ. ದನಕರುಗಳಂತೆ ಹುಲ್ಲು ಮೇಯುವ ಗತಿ ನಿಮ್ಮದಾಗುವುದು. ಆಕಾಶದ ಇಬ್ಬನಿ ನಿಮ್ಮನ್ನು ತೋಯಿಸುವುದು. ಪರಾತ್ಪರ ದೇವರಿಗೆ ಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದು ತಮಗೆ ತಿಳಿದುಬರುವುದರೊಳಗೆ ಏಳು ವರ್ಷ ಕಳೆದಿರುತ್ತದೆ.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹುಜನಾಂಗಗಳು ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ದಹಿಸಿಹೋಗಲಿ ಧರೆಯಿಂದ ದುಷ್ಟರು I ನಿರ್ಮೂಲವಾಗಲಿ ಸಕಲ ದುರುಳರು I ಪ್ರಭುವನು ನನ್ನ ಮನ ಸ್ತುತಿಸಲಿ I ಪ್ರಭುವಿಗೆ ಸ್ತುತಿಸ್ತೋತ್ರವಾಗಲಿ II


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ದೇವರು ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಈ ಅಸ್ಸೀರಿಯನ ಕೈಯಿಂದ ಬಿಡಿಸಿರಿ.”


ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ತಮ್ಮ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳವರಾಗಿದ್ದ ಆ ಪೀಳಿಗೆಯವರೆಲ್ಲರು ನಾಶವಾಗುವ ತನಕ, ಅಂದರೆ ನಾಲ್ವತ್ತುವರ್ಷ ಕಾಲ, ಇಸ್ರಯೇಲರನ್ನು ಮರುಭೂಮಿಯಲ್ಲೆ ಅಲೆಯುವಂತೆ ಮಾಡಿದರು.


ತುಂಬಿದೆ ಶಾಪಕೋಪ, ಕುತಂತ್ರ ಅವನ ಬಾಯಲಿ I ಅವಿತಿದೆ ಪಾಪ, ಅತಿವಿನಾಶ ನಾಲಗೆಯಡಿಯಲಿ II


ಜನರೆಲ್ಲರಾಗ ತಲ್ಲಣಗೊಳ್ಳುವರು I ದೇವಕಾರ್ಯವಿದು ಎಂದು ಧ್ಯಾನಿಪರು I ಆತನ ಸತ್ಕಾರ್ಯಗಳನು ಸಾರುವರು II


ಅವನಿಗೆ ಪ್ರಿಯ ಶಪಿಸುವುದೆಂದರೆ, ಎರಗಲಿದೀಗ ಅವನ ಮೇಲೇ I ಆಶೀರ್ವದಿಸುವುದು ಅವನಿಗಪ್ರಿಯ, ಇರಲಿ ಅವನಿಗದು ದೂರದಲೇ II


ಮಾತಿನ ದೋಷದಿಂದ ಕೆಡುಕನು ಬೋನಿಗೆ ಬೀಳುವನು; ನೀತಿವಂತನು ಆಪತ್ತಿನಿಂದ ತಪ್ಪಿಸಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು