ಕೀರ್ತನೆಗಳು 59:16 - ಕನ್ನಡ ಸತ್ಯವೇದವು C.L. Bible (BSI)16 ನಾನಾದರೊ ಹೊಗಳಿ ಹಾಡುವೆ ದೇವಾ, ನಿನ್ನ ಸಾಮರ್ಥ್ಯವನು I ಉದಯಕಾಲದಲೆ ನಾ ಸಂಕೀರ್ತಿಸುವೆ ನಿನ್ನ ಪ್ರೀತಿ ಪ್ರೇಮವನು I ಸಂಕಟದಲ್ಲೆನಗಾದ ಆಶ್ರಯಗಿರಿ, ದುರ್ಗ, ನೀನಲ್ಲವೇನು? II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನಾದರೋ ಮುಂಜಾನೆ ನಿನಗೆ ಸ್ತುತಿಗೀತೆಗಳನ್ನು ಹಾಡುವೆ; ನಿನ್ನ ಪ್ರೀತಿಯ ಕುರಿತು ಕೊಂಡಾಡುವೆನು; ಯಾಕೆಂದರೆ ಇಕ್ಕಟ್ಟಿನಲ್ಲಿ ನೀನೇ ನನಗೆ ಆಶ್ರಯದುರ್ಗವಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ನಾನು ನಿಮ್ಮ ಬಲವನ್ನು ಕುರಿತು ಹಾಡುವೆನು. ಹೌದು, ಮುಂಜಾನೆ ನಿಮ್ಮ ಪ್ರೀತಿಯ ಕುರಿತು ಹಾಡುವೆನು. ಏಕೆಂದರೆ ನೀವು ನನಗೆ ಭದ್ರಕೋಟೆಯೂ, ನನ್ನ ಇಕ್ಕಟ್ಟಿನಲ್ಲಿ ಆಶ್ರಯವಾಗಿಯೂ ಇದ್ದೀರಿ. ಅಧ್ಯಾಯವನ್ನು ನೋಡಿ |