Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:3 - ಕನ್ನಡ ಸತ್ಯವೇದವು C.L. Bible (BSI)

3 ಇಗೋ ನನ್ನ ಪ್ರಾಣಕ್ಕವರು ಹೂಡಿರುವ ಹೊಂಚು I ನನ್ನ ಮೇಲೆರಗಲು ಹೂಡಿರುವ ಕ್ರೂರಿಗಳ ಸಂಚು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ. ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಗೋ, ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; ಬಲಿಷ್ಠರು ನನಗೆ ವಿರೋಧವಾಗಿ ಗುಂಪು ಕೂಡಿದ್ದಾರೆ. ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಗೋ, ನನ್ನನ್ನು ಕೊಲ್ಲಲು ಬಲಿಷ್ಠರು ಹೊಂಚುಹಾಕಿದ್ದ್ದಾರೆ. ಆದರೆ ನಾನು ಪಾಪವನ್ನಾಗಲಿ ಅಪರಾಧವನ್ನಾಗಲಿ ಮಾಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಗೋ, ನನ್ನ ಪ್ರಾಣಕ್ಕೆ ಅವರು ಒಳಸಂಚುಮಾಡುತ್ತಾರೆ. ಕ್ರೂರರು ನನಗೆ ವಿರೋಧವಾಗಿ ಕೂಡಿಕೊಳ್ಳುತ್ತಾರೆ. ಯೆಹೋವ ದೇವರೇ, ನನ್ನಲ್ಲಿ ಅಪರಾಧವಿಲ್ಲ, ನಾನು ಯಾವ ತಪ್ಪೂ ಮಾಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:3
18 ತಿಳಿವುಗಳ ಹೋಲಿಕೆ  

ಒಟ್ಟುಗೂಡಿ ಹೊಂಚುಹಾಕುತಿಹರು I ಹೆಜ್ಜೆಹಿಡಿದು ಕೊಲ್ಲ ಬರುತಿಹರು II


ತಲೆ ಕೂದಲಿಗಿಂತ ಮಿಗಿಲಿಹರು ನಿಷ್ಕಾರಣ ದ್ವೇಷಿಗಳು I ಬಲಿಷ್ಟರಿಹರು ನನ್ನ ಕೊಲೆಗಡುಕರು, ನಿರ್ನಿಮಿತ್ತ ಶತ್ರುಗಳು I ಕಳ್ಳನಾನಲ್ಲನಾದರೂ ದಂಡಕೋರುತಿಹರು ವೈರಿಗಳು II


ನೀವು ನನ್ನ ತಂದೆ; ಇಗೋ ನೋಡಿ! ನನ್ನ ಕೈಯಲ್ಲಿ ನಿಮ್ಮ ನಿಲುವಂಗಿಯ ತುಂಡು ಇದೆ; ನಾನು ನಿಮ್ಮನ್ನು ಕೊಲ್ಲದೆ ನಿಮ್ಮ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ; ನಾನು ನಿಮಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೊಳ್ಳಿ; ಆದರೂ ನೀವು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿರಲ್ಲವೆ?


ದುರುಳರ ಮಾತು ಜೀವಕ್ಕೆ ಉರುಳು; ಸಜ್ಜನರ ಮಾತು ಪ್ರಾಣಕ್ಕೆ ನೆರವು.


“ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.


ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


ಆದರೆ ನೀವು ಅವರ ಮಾತನ್ನು ನಂಬಬೇಡಿ. ಏಕೆಂದರೆ, ನಾಲ್ವತ್ತಕ್ಕೂ ಹೆಚ್ಚು ಮಂದಿ ಅವನಿಗಾಗಿ ಹೊಂಚುಹಾಕಿ ಕಾದುಕೊಂಡಿರುತ್ತಾರೆ. ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿದ್ದಾರೆ. ಈಗ ಅವರು ನಿಮ್ಮ ಅನುಮತಿಯನ್ನು ಎದುರು ನೋಡುತ್ತಾ ಕಾಯುತ್ತಿದ್ದಾರೆ,” ಎಂದನು.


ಉರಲನೊಡ್ಡಿಹರು ನನ್ನ ಪ್ರಾಣಹಂತಕರು I ನಿರ್ಧರಿಸಿಹರು ವಿನಾಶವನ್ನು ಕೇಡು ಬಗೆವವರು I ಕುತಂತ್ರವ ಮಾಡುವರು ಸತತ ಮೋಸಗಾರರು II


ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II


ನನ್ನ ಒಡೆಯ, ತಮ್ಮ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೆ? ನಾನೇನು ಮಾಡಿದೆ? ಯಾವ ಪಾಪಕ್ಕೆ ಕೈಹಾಕಿದೆ?


ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತ; ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದೆ.


ದಾವೀದನನ್ನು ಕೊಲ್ಲಬೇಕೆಂದು ಸೌಲನು ತನ್ನ ಮಗ ಯೋನಾತಾನನಿಗೂ ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.


ಕೇಡನು ಕಲ್ಪಿಸುತ್ತಾರವರು ಮನದೊಳು I ಕಲಹವೆಬ್ಬಿಸುತ್ತಾರೆ ಯಾವಾಗಲೂ II


ದುಷ್ಟನೇ, ನೀತಿವಂತನ ಮನೆಗೆ ಕನ್ನಹಾಕಬೇಡ; ಅವನು ಕೂಡಿಸಿದ್ದನ್ನು ಕೊಳ್ಳೆಹೊಡೆಯಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು