Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:5 - ಕನ್ನಡ ಸತ್ಯವೇದವು C.L. Bible (BSI)

5 ಇಸ್ರಯೇಲರ ದೇವ, ಸೇನಾಧೀಶ್ವರ ಪ್ರಭು, ನೀನು I ದಂಡಿಸು ನೀನೆಚ್ಚರಗೊಂಡು ಅನ್ಯಜನರೆಲ್ಲರನು I ತೋರಬೇಡ ದುರುಳ ದ್ರೋಹಿಗಳಾರಿಗೂ ದಯೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲ್ಯರ ದೇವರೇ, ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯೆತೋರಿಸಬೇಡ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೇನಾಧೀಶ್ವರನಾದ ಯೆಹೋವನೇ, ಇಸ್ರೇಲರ ದೇವರೇ, ಎದ್ದೇಳು! ಅವರನ್ನು ದಂಡಿಸು! ಆ ದುಷ್ಟ ದ್ರೋಹಿಗಳಿಗೆ ಕರುಣೆಯನ್ನೇ ತೋರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸರ್ವಶಕ್ತರಾದ ಯೆಹೋವ ದೇವರೇ, ಇಸ್ರಾಯೇಲರ ದೇವರೇ, ನೀವು ಎಲ್ಲಾ ಜನಾಂಗಗಳನ್ನು ನ್ಯಾಯತೀರಿಸುವುದಕ್ಕೆ ಎಚ್ಚರವಾಗಿರಿ. ದುಷ್ಟ ಅಪರಾಧಿಗಳಲ್ಲಿ ಯಾರಿಗೂ ದಯೆಸಿಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:5
19 ತಿಳಿವುಗಳ ಹೋಲಿಕೆ  

ಸ್ವರ್ಗಸೇನಾಧೀಶ್ವರ, ಸ್ವಾಮಿದೇವ ಕಿವಿಗೊಡು ನನ್ನ ಮೊರೆಗೆ I ಯಕೋಬ ಕುಲದೇವಾ, ನನ್ನ ಪ್ರಾರ್ಥನೆ ಬೀಳಲಿ ನಿನ್ನ ಕಿವಿಗೆ II


ಮರಣ ತಟ್ಟನೆ ಆ ದುಷ್ಟರ ಮೇಲೆರಗಲಿ I ಜೀವಸಹಿತ ಪಾತಾಳಕ್ಕವರು ಇಳಿಯಲಿ I ಕೆಟ್ಟತನ ಮನೆಮಾಡಿದೆ ಅವರ ಮಧ್ಯದಲಿ II


ಬಿದ್ದರು ಹೊರನಾಡಿಗರು ತಾವು ತೋಡಿದ ಗುಣಿಯಲೆ I ಸಿಕ್ಕಿಕೊಂಡಿತವರ ಕಾಲು ಅವರೊಡ್ಡಿದ ಬಲೆಯಲೆ II


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ದೇವರ ವಾಗ್ದಾನ ವಿಫಲವಾಯಿತೆಂದು ನಾನು ಹೇಳುತ್ತಿಲ್ಲ. ಇಸ್ರಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ನಿಜವಾದ ಇಸ್ರಯೇಲರಲ್ಲ.


“ಇಸ್ರಯೇಲಿನ ಜನರೇ, ನನ್ನ ದೃಷ್ಟಿಯಲ್ಲಿ ನೀವಾಗಲಿ ಎಥಿಯೋಪಿಯದವರಾಗಲೀ, ಒಂದೇ ಅಲ್ಲವೆ? ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆತಂದಂತೆ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ, ಅರಾಮ್ಯರನ್ನು ಕೀರ್ ನಾಡಿನಿಂದಲೂ ಕರೆತರಲಿಲ್ಲವೆ?


ಸರ್ವೇಶ್ವರಾ, ನನ್ನನ್ನು ಕೊಲ್ಲಲು ಅವರು ಮಾಡಿಕೊಂಡಿರುವ ಸಂಚು ನಿಮಗೆ ತಿಳಿದಿದೆ. ಅವರ ಅಪರಾಧವನ್ನು ಕ್ಷಮಿಸಬೇಡಿ, ಅವರ ಪಾಪವನ್ನು ಅಳಿಸಬೇಡಿ, ಅದು ನಿಮ್ಮ ಕಣ್ಣೆದುರಿಗೇ ಇರಲಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪ ವ್ಯಕ್ತವಾಗುವಾಗ ಅವರಿಗೆ ತಕ್ಕುದನ್ನು ಮಾಡಿ.”


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.


ಸ್ವಾಮಿ ದೇವನೇ, ಸರ್ವಶಕ್ತನೆ I ಅದೆನಿತು ಕಾಲ ನೀ ಮುನಿದಿರುವೆ I ನಿನ್ನವರ ಮೊರೆಯನಾಲಿಸದಿರುವೆ? II


ಗರ್ವಿಗಳು ನಿಂತಿಹರು ನನಗೆದುರಾಗಿ I ಕ್ರೂರಿಗಳು ಕಾದಿಹರೆನ್ನ ಕೊಲೆಗಾಗಿ I ಅವರಲಿಲ್ಲ ಮಾನ್ಯತೆ ದೇವರಿಗಾಗಿ II


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ದೇವರು ಮೋಶೆಗೆ ಮತ್ತೆ ಇಂತೆಂದರು: “ನೀನು ಇಸ್ರಯೇಲರಿಗೆ, ‘ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ’ ಎಂದು ಹೇಳು. ಇದು ಸದಾಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೆ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು.


ಅಲ್ಲೇ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ 'ಏಲ್ - ಏಲೋಹೆ - ಇಸ್ರಯೇಲ್’ ಎಂದು ಹೆಸರಿಟ್ಟನು.


ಸಭೆ ಸೇರಲಿ ಸಕಲ ಜನಾಂಗಗಳು ನಿನ್ನ ಸುತ್ತಲು I ನೀ ಆಸ್ಥಾನವನೇರು, ಅವರನು ಪರಿಪಾಲಿಸಲು II


ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ಪ್ರಾಂತ್ಯಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರು ಇವರೆಲ್ಲರ ಅಭಿಪ್ರಾಯದ ಪ್ರಕಾರ ತಾವು ಒಂದು ಶಾಸನವನ್ನು ಹೊರಡಿಸಬೇಕು. ಯಾವನೂ ಮೂವತ್ತು ದಿನಗಳ ತನಕ ರಾಜರಾದ ತಮಗೆ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆ ಮಾಡಬಾರದು; ಮಾಡಿದರೆ ಸಿಂಹಗಳ ಗವಿಗೆ ಹಾಕಲಾಗುವುದು ಎಂದು ರಾಜಾಜ್ಞಾರೂಪವಾಗಿ ನಿಷೇಧಿಸುವುದು ಒಳ್ಳೆಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು